ಭಾರತದಲ್ಲಿ 24ಗಂಟೆಯಲ್ಲಿ 1,660 ಕೋವಿಡ್ ಪ್ರಕರಣ ಪತ್ತೆ, 4,100 ಮಂದಿ ಸಾವು
ದೇಶಾದ್ಯಂತ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,20,855ಕ್ಕೆ ಏರಿಕೆಯಾಗಿದೆ.
Team Udayavani, Mar 26, 2022, 12:48 PM IST
ನವದೆಹಲಿ: ಭಾರತದಲ್ಲಿ ಮೂರನೇ ಕೋವಿಡ್ ಅಲೆ ದಿನದಿಂದ ದಿನಕ್ಕೆ ತೀವ್ರಗತಿಯಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,660 ಕೋವಿಡ್ ಪರಕರಣ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಮಾರ್ಚ್ 26) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಏಪ್ರಿಲ್ 1ರಿಂದ ಪ್ಯಾರೆಸಿಟಮಾಲ್ ಸೇರಿ 800 ಔಷಧಿಗಳ ಬೆಲೆಯಲ್ಲಿ ಶೇ.10.7 ರಷ್ಟು ಏರಿಕೆ
ಭಾರತದಲ್ಲಿ ಕಳೆದ 24ಗಂಟೆಯಲ್ಲಿ 1,660 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಆದರೆ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಬ್ಯಾಕ್ ಲಾಗ್ (ಸೇರಿಸದೇ ಉಳಿದ) ಸಂಖ್ಯೆ ಸೇರಿಸಿದ ಪರಿಣಾಮ 4,100 ಮಂದಿ ಕೋವಿಡ್ ನಿಂದ ಸಾವನ್ನಪ್ಪಿರುವುದಾಗಿ ಅಂಕಿಅಂಶ ವಿವರಿಸಿದೆ.
ದೇಶಾದ್ಯಂತ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,20,855ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 2,349 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಭಾರತದಲ್ಲಿ ಕೋವಿಡ್ ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,24,80,436ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 4,789 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ದೇಶಾದ್ಯಂತ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.75ರಷ್ಟಿದೆ ಎಂದು ಅಂಕಿ ಅಂಶ ವಿವರಿಸಿದೆ.