ಭಾರತದಲ್ಲಿ 24ಗಂಟೆಯಲ್ಲಿ 20,557 ಕೋವಿಡ್ ಸೋಂಕು ಪ್ರಕರಣ ದೃಢ, 44 ಮಂದಿ ಸಾವು
ಕಳೆದ 24 ಗಂಟೆಯಲ್ಲಿ 1,297 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ.
Team Udayavani, Jul 28, 2022, 11:13 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 20,557 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,39,59,321ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜುಲೈ 28) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಪಾರ್ಥ ಭ್ರಷ್ಟಾಚಾರ;ಅರ್ಪಿತಾ ನಿವಾಸದಲ್ಲಿ ಈವರೆಗೆ ಸಿಕ್ಕಿದ್ದು 50 ಕೋಟಿ ನಗದು,5 ಕೆಜಿ ಚಿನ್ನ
ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,46,323ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 44 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 1,297 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 19,216 ಸೋಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,32,86,787ಕ್ಕೆ ತಲುಪಿದೆ ಎಂದು ಅಂಕಿಅಂಶ ವಿವರಿಸಿದೆ.
ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.47ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.5.18ಕ್ಕೆ ಏರಿಕೆಯಾಗಿದೆ. ವಾರದ ಪಾಸಿಟಿವಿಟಿ ದರ ಶೇ.4.71ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ