ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,710 ಕೋವಿಡ್ ಸೋಂಕು ದೃಢ, 14 ಮಂದಿ ಸಾವು
ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.75ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
Team Udayavani, May 27, 2022, 10:29 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,710 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,31,47,530ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಮೇ 27) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:24 ಗಂಟೆಯಲ್ಲಿ ನಟಿಯ ಹತ್ಯೆ ಪ್ರಕರಣ ಭೇದಿಸಿದ ಭದ್ರತಾ ಪಡೆ: ನಾಲ್ವರು ಲಷ್ಕರ್ ಉಗ್ರರ ಹತ್ಯೆ
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 15,814ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಯಲ್ಲಿ ಕೋವಿಡ್ 19 ಸೋಂಕಿನಿಂದಾಗಿ 14 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,539ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಒಂದೇ ದಿನದಲ್ಲಿ 400 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.75ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿನ ಪ್ರತಿದಿನದ ಪಾಸಿಟಿವಿಟಿ ದರ ಶೇ.0.58ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.0.52ರಷ್ಟಿದೆ. ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಈವರೆಗೆ ಒಟ್ಟು 4,26,07,177 ಮಂದಿ ಗುಣಮುಖರಾಗಿದ್ದಾರೆ ಎಂದು ಅಂಕಿಅಂಶ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ರೈಲ್ನಲ್ಲಿ ಕಾಸರಗೋಡಿನ ಮಹಿಳೆಯ ಬ್ಯಾಗ್ ಕಸಿದು ಪರಾರಿ; ದೂರು
ರಾಜ್ಯದಲ್ಲಿ 67 ಕೋಟಿ ರೂ. ಮೌಲ್ಯದ ಮಾದಕವಸ್ತು ನಾಶ
ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್ ಪದಾರ್ಪಣೆ
ವಿಂಬಲ್ಡನ್ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿ: ವೀನಸ್ ದಾಖಲೆ ಮುರಿಯುವತ್ತ ಸ್ವಿಯಾಟೆಕ್
ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್ ಇನ್ನಿಲ್ಲ