ಭಾರತದಲ್ಲಿ 7,579 ಕೋವಿಡ್ ಪ್ರಕರಣ ಪತ್ತೆ, 543 ದಿನಗಳಲ್ಲಿನ ಕನಿಷ್ಠ ಪ್ರಕರಣ ವರದಿ
ಕಳೆದ 24ಗಂಟೆಗಳಲ್ಲಿ ಕೇರಳದಲ್ಲಿ 3,698 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 75 ಮಂದಿ ಸಾವನ್ನಪ್ಪಿದ್ದಾರೆ.
Team Udayavani, Nov 23, 2021, 10:08 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 7,579 ನೂತನ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇದು 543 ದಿನಗಳಲ್ಲಿನ ಕನಿಷ್ಠ ಸಂಖ್ಯೆಯಾಗಿದೆ. 236 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ(ನವೆಂಬರ್ 23) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಶಿವಮೊಗ್ಗ: ವಸತಿ ಶಾಲೆ ಮಕ್ಕಳಿಂದ ಪ್ರತಿಭಟನೆ; ಶಾಸಕರು, ಡಿಸಿ ಸ್ಥಳಕ್ಕೆ ಬರುವಂತೆ ಪಟ್ಟು
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,202 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಅಲ್ಲದೇ ಸಕ್ರಿಯ ಪ್ರಕರಣಗಳ ಸಂಖ್ಯೆ 1,13,584ಕ್ಕೆ ಇಳಿಕೆಯಾಗಿದೆ. ಇದು ಕಳೆದ 536 ದಿನಗಳಲ್ಲಿನ ಕನಿಷ್ಠ ಸಂಖ್ಯೆಯ ಪ್ರಕರಣವಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.
ಕಳೆದ 24ಗಂಟೆಗಳಲ್ಲಿ ಕೇರಳದಲ್ಲಿ 3,698 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 75 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 7,515 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಮಿಜೋರಾಂನಲ್ಲಿ ಕಳೆದ 24ಗಂಟೆಗಳಲ್ಲಿ 212 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇಬ್ಬರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 4,746ಕ್ಕೆ ಇಳಿಕೆಯಾಗಿದೆ ಎಂದು ಎಎನ್ ಐ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು