ತೀವ್ರ ಇಳಿಕೆ: ಭಾರತದಲ್ಲಿ 24ಗಂಟೆಯಲ್ಲಿ 3,614 ಕೋವಿಡ್ ಪ್ರಕರಣ ಪತ್ತೆ, 89 ಮಂದಿ ಸಾವು
ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 40,559ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.
Team Udayavani, Mar 12, 2022, 11:16 AM IST
ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಯಲ್ಲಿ 3,614 ಕೋವಿಡ್ ಪ್ರಕರಣ ವರದಿಯಾಗಿದೆ. ಅಲ್ಲದೇ 89 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಮಾರ್ಚ್ 12) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಅಪರೇಷನ್ ಗಂಗಾ ಯಶಸ್ವಿ, ಮೋದಿಯವರಿಗೆ ವಿಶ್ವದ ಮೆಚ್ಚುಗೆ: ಆರ್ ಅಶೋಕ್
ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,15,803ಕ್ಕೆ ಏರಿಕೆಯಾಗಿದೆ. ಅಲ್ಲದೇ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 40,559ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.
ಕಳೆದ 24ಗಂಟೆಯಲ್ಲಿ 1,660 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ 5,185 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,24,31,513ಕ್ಕೆ ಏರಿಕೆಯಾಗಿದೆ.
ಕೋವಿಡ್ 19 ಚೇತರಿಕೆ ದರ ಶೇ.98.71ರಷ್ಟಿದೆ. ಭಾರತದಲ್ಲಿ ಈವರೆಗೆ ಕೋವಿಡ್ ಲಸಿಕೆ ಅಭಿಯಾನದಲ್ಲಿ 179.91 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶ ತಿಳಿಸಿದೆ.