ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,079 ಕೋವಿಡ್ ಪ್ರಕರಣ ಪತ್ತೆ, 560 ಸಾವು
ಶುಕ್ರವಾರ 19,98,715 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ತಿಳಿಸಿದೆ.
Team Udayavani, Jul 17, 2021, 10:50 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,079 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 560 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಜುಲೈ 17) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಬೆಚ್ಚಿಬಿದ್ದ ಜರ್ಮನಿ! ಸಾವಿನ ಪ್ರವಾಹಕ್ಕೆ ಗ್ರಾಮಗಳೇ ಮಾಯ, 120 ಮಂದಿ ಸಾವು
ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಒಟ್ಟು 3,10,64,908ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,13,091ಕ್ಕೆ ತಲುಪಿದೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,24,025ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.
ಇತ್ತೀಚೆಗೆ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದು, ವಾರದ ಪಾಸಿಟಿವಿಟಿ ದರ ಶೇ.2.10ಕ್ಕೆ ಇಳಿದಿದ್ದು, ದಿನದ ಪಾಸಿಟಿವಿಟಿ ದರ ಶೇ.1.91ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದೆ.
ಜುಲೈ 16ರವರೆಗೆ 44,20,21,954 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ, ಶುಕ್ರವಾರ 19,98,715 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ