ಭಾರತ: ಕಳೆದ 24ಗಂಟೆಯಲ್ಲಿ 46,617 Covid ಪ್ರಕರಣ ಪತ್ತೆ, ಸಾವಿನ ಸಂಖ್ಯೆ 4ಲಕ್ಷಕ್ಕೆ ಏರಿಕೆ
2021ರ ಜುಲೈ 1ರವರೆಗೆ 41,42,51,520 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ
Team Udayavani, Jul 2, 2021, 10:49 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 46,617 ಕೋವಿಡ್ 19 ಪ್ರಕರಣಗಳು ವರದಿಯಾಗಿದ್ದು, 853 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಜುಲೈ 02) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:20 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಾಣಿಕೆ ಪತ್ತೆ ಹಚ್ಚಿದ ಕಸ್ಟಮ್ಸ್ ಅಧಿಕಾರಿಗಳು
ದೇಶದಲ್ಲಿನ ಒಟ್ಟು ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ 3,04,58,251ಕ್ಕೆ ಏರಿಕೆಯಾಗಿದೆ. ಅಲ್ಲದೇ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,00,312ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.
ಭಾರತದಲ್ಲಿ ಈಗ 5,09,637 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈವರೆಗೆ ಒಟ್ಟು 2,95,48,302 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24ಗಂಟೆಯಲ್ಲಿ 59,384 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ.
ಭಾರತದಲ್ಲಿ ಚೇತರಿಕೆಯ ಪ್ರಮಾಣ ಶೇ.96.97ಕ್ಕೆ ಏರಿಕೆಯಾಗಿದೆ. 2021ರ ಜುಲೈ 1ರವರೆಗೆ 41,42,51,520 ಮಂದಿಗೆ ಕೋವಿಡ್ 19 ಪರೀಕ್ಷೆ ನಡೆಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ತಿಳಿಸಿದೆ.