ಭೀತಿ ಹೆಚ್ಚಳ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 4.14ಲಕ್ಷ ಕೋವಿಡ್ ಪ್ರಕರಣ, 3,915 ಸಾವು
ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 3,915 ಕೋವಿಡ್ ಪ್ರಕರಣ ಪತ್ತೆಯಾಗಿದೆ.
Team Udayavani, May 7, 2021, 9:48 AM IST
ನವದೆಹಲಿ: ಭಾರತದಲ್ಲಿ ಕೋವಿಡ್ ಸೋಂಕು ಕ್ಷಿಪ್ರವಾಗಿ ಹರಡುತ್ತಿದ್ದು, ಹೆಚ್ಚಿನ ಪ್ರಮಾಣದ ಸಾವು ಸಂಭವಿಸತೊಡಗಿದೆ. ಏತನ್ಮಧ್ಯೆ ಕಳೆದ 24ಗಂಟೆಗಳಲ್ಲಿ ದಾಖಲೆಯ 4,14,188 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಸಕ್ರಿಯ ಕೋವಿಡ್ ಸೋಂಕು ಪ್ರಕರಣ 36,45,164ಕ್ಕೆ ಏರಿಕೆಯಾಗಿದೆ ಎಂದು ಶುಕ್ರವಾರ(ಮೇ 07) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಕೋವಿಡ್ ನಿವಾರಣೆಗೆ ಅಣ್ಣಮ್ಮನ ಮೊರೆ ಹೋದ ಸಿಎಂ ಯಡಿಯೂರಪ್ಪ
ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 3,915 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ, ಬೆಡ್ ಸಮಸ್ಯೆ, ಆಕ್ಸಿಜನ್ ಕೊರತೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ವರದಿ ಹೇಳಿದೆ.
ಭಾರತದಲ್ಲಿ ಕೋವಿಡ್ ಎರಡನೇ ಅಲೆ ಮಾರಣಾಂತಿಕವಾಗಿದ್ದು, ಒಟ್ಟು 2,14,91,598 ಕೋವಿಡ್ ಪ್ರಕರಣ ವರದಿಯಾಗಿದೆ. ಈವರೆಗೆ ಕೋವಿಡ್ ಸೋಂಕಿನಿಂದ 2,34,083 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 1,76,12,351 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.\
ಇಡೀ ಜಗತ್ತಿನಲ್ಲಿಯೇ ಅತೀ ಹೆಚ್ಚು ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿರುವ ದೇಶಗಳಲ್ಲಿ ಅಮೆರಿಕ ಮೊದಲನೇ ಸ್ಥಾನದಲ್ಲಿದ್ದು, ಭಾರತ ಎರಡನೇ ಸ್ಥಾನದಲ್ಲಿದೆ. ಕಳೆದ ಎರಡು ದಿನಗಳಿಂದ ದೇಶದಲ್ಲಿ 4 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣ ಪತ್ತೆಯಾಗುತ್ತಿರುವುದಾಗಿ ವರದಿ ತಿಳಿಸಿದೆ.
ಮಹಾರಾಷ್ಟ್ರ, ಕರ್ನಾಟಕ, ಉತ್ತರಪ್ರದೇಶ, ಕೇರಳ, ರಾಜಸ್ಥಾನ್, ಗುಜರಾತ್, ಆಂಧ್ರಪ್ರದೇಶ, ಛತ್ತೀಸ್ ಗಢ, ತಮಿಳುನಾಡು, ಪಶ್ಚಿಮಬಂಗಾಳ, ಬಿಹಾರ ಮತ್ತು ಹರ್ಯಾಣ ಸೇರಿದಂತೆ 12 ರಾಜ್ಯಗಳಲ್ಲಿ ಕೋವಿಡ್ ಸೋಂಕು ಪ್ರಕರಣ ಅತೀ ಹೆಚ್ಚು ಪ್ರಕರಣಗಳು ವರದಿಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶದಲ್ಲಿ ಬಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!