ಭಾರತದಲ್ಲಿ 24ಗಂಟೆಗಳಲ್ಲಿ 6358 ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 653ಕ್ಕೆ ಏರಿಕೆ
ಕೋವಿಡ್ ನಿಂದ ಒಟ್ಟು 3,42,43,945 ಮಂದಿ ಚೇತರಿಸಿಕೊಂಡಿದ್ದಾರೆ.
Team Udayavani, Dec 28, 2021, 10:34 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 6,358 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 293 ಮಂದಿ ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ ದೇಶದಲ್ಲಿ ಕೋವಿಡ್ ನ ಹೊಸ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 653ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಡಿಸೆಂಬರ್ 28) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಕೋವಿಡ್ ಪಾಸಿಟಿವ್: ಆಸ್ಪತ್ರೆಗೆ ದಾಖಲು
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 75,456ಕ್ಕೆ ಇಳಿಕೆಯಾಗಿದೆ. 24ಗಂಟೆಗಳ ಅವಧಿಯಲ್ಲಿ 293 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,80,290ಕ್ಕೆ ಏರಿಕೆಯಾಗಿದೆ.
ಕೋವಿಡ್ ನಿಂದ ಒಟ್ಟು 3,42,43,945 ಮಂದಿ ಚೇತರಿಸಿಕೊಂಡಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದ ಪ್ರಕಾರ ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 653ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.
ಕೇರಳದಲ್ಲಿ 57, ಮಹಾರಾಷ್ಟ್ರದಲ್ಲಿ 167, ತೆಲಂಗಾಣದಲ್ಲಿ 55, ಗುಜರಾತ್ ನಲ್ಲಿ 49, ರಾಜಸ್ಥಾನದಲ್ಲಿ 46, ತಮಿಳುನಾಡಿನಲ್ಲಿ 34, ಕರ್ನಾಟಕದಲ್ಲಿ 31, ಮಧ್ಯಪ್ರದೇಶದಲ್ಲಿ 9, ಒಡಿಶಾದಲ್ಲಿ 8 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ