ಭಾರತ;24ಗಂಟೆಯಲ್ಲಿ 2,47,417 ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 5,488ಕ್ಕೆ ಏರಿಕೆ
ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರ ಸಂಖ್ಯೆ 3,47,15,361ಕ್ಕೆ ಏರಿಕೆಯಾಗಿದೆ.
Team Udayavani, Jan 13, 2022, 10:35 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,47,417 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 380 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,85,035ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜನವರಿ 13) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಐದನೇ ದಿನದ ಪಾದಯಾತ್ರೆಗೆ ಸಿದ್ದತೆ: ರಾಮನಗರಕ್ಕೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ
24ಗಂಟೆಯಲ್ಲಿ 1,62,212 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಭಾರತದಲ್ಲಿ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 11,17,531ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 84,825 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರ ಸಂಖ್ಯೆ 3,47,15,361ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 24ಗಂಟೆಯಲ್ಲಿ 620 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 5,488ಕ್ಕೆ ಏರಿಕೆಯಾಗಿದೆ. ಇದರಲ್ಲಿ ಕನಿಷ್ಠ 2,162 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು (1,367) ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ರಾಜಸ್ಥಾನದಲ್ಲಿ 792, ದೆಹಲಿ 549, ಕೇರಳ 486 ಹಾಗೂ ಕರ್ನಾಟಕದಲ್ಲಿ 479 ಪ್ರಕರಣ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್: ವಿದ್ಯಾರ್ಥಿನಿಯರಿಗೆ ಬಿಜೆಪಿ ಸೇರುವಂತೆ ಪ್ರಾಂಶುಪಾಲರ ಸೂಚನೆ: ಕಾಂಗ್ರೆಸ್ ಆಕ್ಷೇಪ
ಜೆಟ್ಏರ್ ವೇಸ್ಗೆ ವಿಮಾನ ಯಾರು ಕೊಡ್ತಾರೆ?
ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ: ಲಷ್ಕರ್ ಉಗ್ರನ ಬಂಧನ; ಶಸ್ತ್ರಾಸ್ತ್ರಗಳು ವಶ
ನನ್ನ ಕೇಸಲ್ಲೂ ಸುಳ್ಳು ಹೇಳಿದ್ದ ಶ್ರೀಕುಮಾರ್: ನಂಬಿ ನಾರಾಯಣನ್
ಮುರುಘರಾಜೇಂದ್ರ ಶ್ರೀ ಗಳ 50ನೇ ಹುಟ್ಟುಹಬ್ಬ :ಬೈನಾ ಕನ್ನಡ ವಿದ್ಯಾರ್ಥಿಗಳಿಗೆ ನೆರವು
MUST WATCH
ತನ್ನ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಖಾದರ್
ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಹೊಸ ಸೇರ್ಪಡೆ
ಲೀಡ್ಸ್ ಟೆಸ್ಟ್: ಇಂಗ್ಲೆಂಡ್ 3-0 ಪರಾಕ್ರಮ: ಸ್ಟೋಕ್ಸ್ ಬಳಗಕ್ಕೆ 7 ವಿಕೆಟ್ ಜಯ
ರಾಜ್ಯಾದ್ಯಂತ ಆರಂಭವಾದ ಎಸೆಸೆಲ್ಸಿ ಪೂರಕ ಪರೀಕ್ಷೆ: ಮೊದಲ ದಿನ ಯಶಸ್ವಿ
ಟೆಂಪೋ ಟ್ರಾವೆಲರ್ – ಸರಕಾರಿ ಬಸ್ ನಡುವೆ ಭೀಕರ ರಸ್ತೆ ಅಪಘಾತ : ಓರ್ವ ಸಾವು, ನಾಲ್ವರು ಗಂಭೀರ
ಗುಜರಾತ್: ವಿದ್ಯಾರ್ಥಿನಿಯರಿಗೆ ಬಿಜೆಪಿ ಸೇರುವಂತೆ ಪ್ರಾಂಶುಪಾಲರ ಸೂಚನೆ: ಕಾಂಗ್ರೆಸ್ ಆಕ್ಷೇಪ
ಜೆಟ್ಏರ್ ವೇಸ್ಗೆ ವಿಮಾನ ಯಾರು ಕೊಡ್ತಾರೆ?