ಭಾರತದಲ್ಲಿ 24ಗಂಟೆಯಲ್ಲಿ 7,554 ಕೋವಿಡ್ 19 ಪ್ರಕರಣ ಪತ್ತೆ, 223 ಮಂದಿ ಸಾವು
ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇದೀಗ 85,680ಕ್ಕೆ ತಲುಪಿದೆ.
Team Udayavani, Mar 2, 2022, 10:29 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 7,554 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 223 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,14,246ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಮಾರ್ಚ್ 02) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಅಶ್ಲೀಲ ಮಾತುಗಳನ್ನು ಬಳಸಬೇಡಿ: ಎಫ್ಎಂ ವಾಹಿನಿಗಳಿಗೆ ಕೇಂದ್ರ ಎಚ್ಚರಿಕೆ
24 ಗಂಟೆ ಅವಧಿಯಲ್ಲಿ 6,792 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇದೀಗ 85,680ಕ್ಕೆ ತಲುಪಿದೆ.
ಒಂದೇ ದಿನದಲ್ಲಿ ದೇಶದಲ್ಲಿ 14,123 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,23,38,673ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.60ರಷ್ಟಿದೆ. ಭಾರತದಲ್ಲಿನ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 177.79 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. 24 ಗಂಟೆಯಲ್ಲಿ ದಾಖಲೆ ಪ್ರಮಾಣದಲ್ಲಿ ಸುಮಾರು 7,84,059 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.