
ಮೊದಲ ಪಂದ್ಯದಲ್ಲೇ ಎಡವಿದ ಚೆನ್ನೈ ಸೂಪರ್ ಕಿಂಗ್ಸ್ : ಗೆಲುವಿನ ನಗೆ ಬೀರಿದ ಪಾಂಡ್ಯ ಪಡೆ
Team Udayavani, Mar 31, 2023, 11:59 PM IST

ಅಹ್ಮದಾಬಾದ್: ಹದಿನಾರನೇ ಐಪಿಎಲ್ ಟೂರ್ನಿಯ ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ರೋಚಕ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಶುಭ್‌ಮನ್ ಗಿಲ್ ಅವರ ಸ್ಫೋಟಕ ಅರ್ಧಶತಕದಿಂದಾಗಿ ಗುಜರಾತ್ ತಂಡವು 5 ವಿಕೆಟ್‌ಗಳಿಂದ ಜಯಭೇರಿ ಬಾರಿಸಿತು.
ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಚೆನ್ನೈ 7 ವಿಕೆಟಿಗೆ 178 ರನ್ ಪೇರಿಸಿ ಸವಾಲೊಡ್ಡಿದರೆ, ಗುಜರಾತ್ ತಂಡವು 19.2 ಓವರ್‌ಗಳಲ್ಲಿ 5 ವಿಕೆಟಿಗೆ 182 ರನ್ ಗಳಿಸಿತು. ಶುಭ್‌ಮನ್ ಗಿಲ್ ಕೇವಲ 36 ಎಸೆತಗಳಿಂದ 63 ರನ್ ಗಳಿಸಿ ಗೆಲುವಿನ ರೂವಾರಿಯಾಗಿ ಕಾಣಿಸಿಕೊಂಡರು. ಆರು ಬೌಂಡರಿ ಮತ್ತು 3 ಸಿಕ್ಸರ್ ಬಾರಿಸಿದ್ದರು.
ರುತುರಾಜ್ ಗಾಯಕ್ವಾಡ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಚೆನ್ನೈ ಸರದಿಯ ಆಕರ್ಷಣೆ ಆಗಿತ್ತು. ಅವರ ಗಳಿಕೆ 92 ರನ್. ಆದರೂ ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಚೆನ್ನೈ ನಿರೀಕ್ಷಿತ ಆರಂಭ ಕಾಣಲಿಲ್ಲ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thailand Open Badminton: ಸೆಮಿಫೈನಲ್ ಪ್ರವೇಶಿಸಿದ ಲಕ್ಷ್ಯ ಸೇನ್; ಕಿರಣ್ ಔಟ್

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

ಮಹಿಳಾ Asia Cup ಗೆ ಭಾರತ ಎ ತಂಡ ಪ್ರಕಟ: ಕರ್ನಾಟಕದ ಶ್ರೇಯಾಂಕಾ ಪಾಟೀಲ್ ಗೆ ಸ್ಥಾನ

Thailand Open Badminton: ಕಿರಣ್, ಸೇನ್ ಕ್ವಾರ್ಟರ್ ಫೈನಲಿಗೆ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
