ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
ಬಿಜೆಪಿಗೆ ಲಾಭ ಆಗುತ್ತೋ ಬಿಡುತ್ತೋ ಅನ್ನೋ ಪ್ರಶ್ನೆ ಅಲ್ಲ....ವ್ಯಾಪಕ ವಿರೋಧ ವ್ಯಕ್ತವಾಗುತ್ತದೆ
Team Udayavani, Dec 1, 2022, 7:00 PM IST
ಮೈಸೂರು :ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರು ಗುರುವಾರ ಹೇಳಿಕೆ ನೀಡಿದ್ದಾರೆ.
ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಮ್ಮ ಸಂವಿಧಾನದಲ್ಲಿ ಅವಕಾಶವಿಲ್ಲ.ಇದರಿಂದ ಬಿಜೆಪಿಗೆ ಲಾಭ ಆಗುತ್ತೋ ಬಿಡುತ್ತೋ ಅನ್ನೋ ಪ್ರಶ್ನೆ ಅಲ್ಲ.ಇದನ್ನು ಜಾರಿ ಮಾಡಲು ಹೊರಟರೆ ವ್ಯಾಪಕ ವಿರೋಧ ವ್ಯಕ್ತವಾಗುತ್ತದೆ. ನಮ್ಮ ಸಂವಿಧಾನದಲ್ಲಿ ಏನಿದೆಯೋ ಅದಕ್ಕೆ ನಾವು ಬದ್ದ.ಏಕರೂಪ ನಾಗರಿಕ ಸಂಹಿತೆ ಜಾರಿಗೆ ನನ್ನ ವಿರೋಧವಿದೆ ಎಂದಿದ್ದಾರೆ.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅವಕಾಶ ಕೊಡದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಮುದ್ರಕ್ಕೆ ಹರಿದು ಹೋಗುವ ನೀರು ಬಳಸಲು ಅನುಮತಿ ಕೊಡುತ್ತಾರೆ ಎಂದು ಮಾಜಿ ಪ್ರಧಾನಿ ಅಸಮಾಧಾನ ಹೊರ ಹಾಕಿದರು.
ಮೇಕೆದಾಟು ಯೋಜನೆಗೆ ಮೋದಿ ಅನುಮತಿ ನೀಡಲಿಲ್ಲ. ತಮಿಳುನಾಡು ಸರ್ಕಾರ ಸಮುದ್ರಕ್ಕೆ ಹರಿಯುವ ಕಾವೇರಿ ನೀರು ಬಳಸೋಕೆ ಅನುಮತಿ ಕೊಟ್ಟಿದ್ದಾರೆ. ಸೇಲಂ ಜಿಲ್ಲೆ ಸೇರಿದಂತೆ ಆಸುಪಾಸಿನ ಜಿಲ್ಲೆಗಳ 4 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿಗೆ ಈ ನೀರು ಬಳಕೆ ಮಾಡಲಾಗುತ್ತಿದೆ. ತಮಿಳುನಾಡಿನ ಎಐಎಡಿಎಂಕೆ ಪಕ್ಷದೊಂದಿಗೆ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ಎಐಎಡಿಎಂಕೆಗೆ ಅನುಕೂಲವಾಗಲಿ ಅಂತಾನೇ ಅಲ್ಲಿನ ನೀರಾವರಿ ಯೋಜನೆಗೆ ಮೋದಿ ಅನುಮತಿ ಕೊಟ್ಟಿದ್ದಾರೆ. ಈ ವಿಚಾರವನ್ನು ಇಲ್ಲಿಗೇ ಬಿಡುವುದಿಲ್ಲ. ಮೇಕೆದಾಟು ವಿಚಾರವಾಗಿ ಬಹಳ ಹಿಂದೆಯೇ ಪ್ರಧಾನಿಗೆ ಪತ್ರ ಬರೆದಿದ್ದೆ.ಆ ಪತ್ರಕ್ಕೆ ಇಲ್ಲಿಯ ತನಕ ಪ್ರತಿಕ್ರಿಯೆ ನೀಡಿಲ್ಲ. ಮುಂಬರುವ ರಾಜ್ಯಸಭೆ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸುತ್ತೇನೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?
ನಿನ್ನೆ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಎಂ.ಬಿ.ಪಾ- ಪರಂ ಗರಂ: ಕಾಂಗ್ರೆಸ್ ಪ್ರಚಾರ ಸಮಿತಿ – ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪರಂ ರಾಜೀನಾಮೆ ವದಂತಿ
ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ
ಟ್ರಾಫಿಕ್ ದಂಡ ಪಾವತಿಗೆ ಭರ್ಜರಿ ರಿಯಾಯಿತಿ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಸೂಕ್ತ ಸ್ಥಳಾವಕಾಶ ನೀಡಿದರೆ ರಬಕವಿ ಬನಹಟ್ಟಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಮುನೇನಕೊಪ್ಪ
ಆರ್ಹಾಳ: ಭೂಮಿ ಪೋಡಿ ಮುಕ್ತ ಮಾಡದಿದ್ದರೆ ಮತದಾನ ಬಹಿಷ್ಕಾರ
ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು; ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ
ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್ ಗೋಲ್ಡ್ ಕಾಯಿನ್ ರೆಸಿಪಿ