ರಾಜ್ಯದಲ್ಲಿ ಕೈಗಾರಿಕೆ ನಡೆಸುವ ಕುರಿತು ನಾಳೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ : ಶೆಟ್ಟರ್

Team Udayavani, Jun 8, 2021, 7:12 PM IST

ರಾಜ್ಯದಲ್ಲಿ ಕೈಗಾರಿಕೆ ನಡೆಸುವ ಕುರಿತು ನಾಳೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ : ಶೆಟ್ಟರ್

ಬೆಂಗಳೂರು : ಲಸಿಕೆ ಪಡೆದುಕೊಂಡಂತಹ ಕಾರ್ಮಿಕರೊಂದಿಗೆ ಕೈಗಾರಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ಅವರು ಹೇಳಿದ್ದಾರೆ .

ಇಂದು ಬೆಂಗಳೂರಿನಲ್ಲಿ ಎಫ್ ಐ ಸಿ ಸಿ ಐ ವತಿಯಿಂದ ಆಯೋಜಿಸಿದ್ದ ವೇಬಿನಾರ್ ನಲ್ಲಿ ಭಾಗವಹಿಸಿ ಕೈಗಾರಿಕೋದ್ಯಮಿಗಳೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು ಕೋವಿಡ್‌ ಎರಡನೇ ಅಲೆಯಿಂದಾಗಿ ರಾಜ್ಯದ ಪರಿಸ್ಥಿತಿ ಬಹಳ ಬಿಗಡಾಯಿಸಿತ್ತು. ಈ ಹಿನ್ನಲೆಯಲ್ಲಿ ಲಾಕ್‌ಡೌನ್‌ ನಂತಹ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಾಯಿತು. ಲಾಕ್‌ಡೌನ್‌ನಿಂದಾಗಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಅಲ್ಲದೆ, ದೇಶಾದ್ಯಂತ ಲಸಿಕಾ ಕಾರ್ಯ ವೇಗ ಪಡೆದುಕೊಳ್ಳುತ್ತಿದ್ದು, ಕೈಗಾರಿಕಾ ಸಂಸ್ಥೆಗಳು ತಮ್ಮ ಕಾರ್ಮಿಕರು ಮತ್ತು ಅವಲಂಬಿತರಿಗೆ ಲಸಿಕೆ ದೊರಕಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇದು ಶ್ಲಾಘನೀಯ ಕಾರ್ಯವಾಗಿದ್ದು, ಲಸಿಕೆಯನ್ನು ಪಡೆದುಕೊಂಡಿರುವ ಕಾರ್ಮಿಕರೊಂದಿಗೆ ಕೈಗಾರಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ನಾಳೆ ಚರ್ಚೆ ನಡೆಸುವುದಾಗಿ ತಿಳಿಸಿದರು.

ಕೈಗಾರಿಕೆಗಳ ಎಲ್ಲಾ ಕ್ಷೇತ್ರಗಳ ಮೇಲೆ ಲಾಕ್‌ ಡೌನ್‌ ಪರಿಣಾಮವನ್ನು ಬೀರಿದೆ. ಇದರ ಬಗ್ಗೆ ಅಧ್ಯಯನ ಮಾಡುವ ನಿಟ್ಟಿನಲ್ಲಿ ಕೈಗಾರಿಕಾ ಇಲಾಖೆಯ ವತಿಯಿಂದ ಪ್ರತಿ ಕೈಗಾರಿಕಾ ಕ್ಷೇತ್ರಕ್ಕೂ ಸಂಬಂಧಿಸಿದಂತೆ ಹಾನಿ ಮೌಲ್ಯಮಾಪನ ಪ್ರಕ್ರಿಯೆಯನ್ನು ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದರು.

ಇದನ್ನೂ ಓದಿ :ಸಿಎಂ ಬದಲಾವಣೆಯ ಬಗ್ಗೆ ಸಹಿ ಸಂಗ್ರಹದ ವಿಚಾರ ನನ್ನ ಗಮನಕ್ಕೆ ಬಂದಿಲ್ಲ : ಪಾಟೀಲ್

ಅಲ್ಲದೆ, ಕೇಂದ್ರ ಹಣಕಾಸು ಇಲಾಖೆಯೊಂದಿಗೆ ಸತತ ಸಂಪರ್ಕದಲ್ಲಿದ್ದು ಎಂಎಸ್‌ಎಂಇ ಹಾಗೂ ಇತರೆ ಕೈಗಾರಿಕೋದ್ಯಮಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮಗಳ ಘೋಷಣೆಯ ನಿರೀಕ್ಷೆಯಲ್ಲಿದ್ದೇವೆ. ಸನ್ಮಾನ್ಯ ಮುಖ್ಯಮಂತ್ರಿಗಳೊಂದಿಗೆ ನಡೆಯಲಿರುವ ಸಭೆಯಲ್ಲಿ ರಾಜ್ಯ ಸರಕಾರದ ವತಿಯಿಂದ ಆಗಬೇಕಾಗಿರುವಂತಹ ಸಡಲಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ರಾಜಕುಮಾರ್ ಖತ್ರಿ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣಾ, ಎಫ್ ಐ ಸಿ ಸಿ ಐ ಅಧ್ಯಕ್ಷ ರಾದ ಕೆ ಉಲ್ಲಾಸ್ ಕಾಮತ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕರಾದ ರೇವಣ್ಣ ಗೌಡ ಸೇರಿದಂತೆ ನೂರಾರು ಕೈಗಾರಿಕೋದ್ಯಮಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.