ಸೂರ್ಯ ಹೊಣೆಯಲ್ಲ: ವಿಷಾದ ವ್ಯಕ್ತಪಡಿಸಿದ ‘ಜೈ ಭೀಮ್’ ನಿರ್ದೇಶಕ


Team Udayavani, Nov 21, 2021, 7:29 PM IST

1-f

ಚೆನ್ನೈ: ಯಾವುದೇ ನಿರ್ದಿಷ್ಟ ಸಮುದಾಯವನ್ನು ನೋಯಿಸುವ ಉದ್ದೇಶ  ಖಂಡಿತವಾಗಿ ಇಲ್ಲ, ಎಂದು ನಟ ಸೂರ್ಯ ಅಭಿನಯದ ‘ಜೈ ಭೀಮ್’ ಚಿತ್ರದ ನಿರ್ದೇಶಕ ತಾ ಸೇ ಜ್ಞಾನವೇಲ್ ಭಾನುವಾರ ಹೇಳಿದ್ದಾರೆ.

ಚಿತ್ರದ ತಯಾರಿಕೆಯಲ್ಲಿ ಯಾವುದೇ ವ್ಯಕ್ತಿ ಅಥವಾ ಸಮುದಾಯವನ್ನು ಅವಹೇಳನ ಮಾಡುವ ಒಂದು ಸಣ್ಣ ಆಲೋಚನೆಯೂ ಇರಲಿಲ್ಲ ಎಂದು ಒತ್ತಿ ಹೇಳಿದ ಜ್ಞಾನವೇಲ್, “ಮನನೊಂದವರಿಗೆ ಮತ್ತು ದುಃಖಿತರಿಗೆ ನನ್ನ ಹೃತ್ಪೂರ್ವಕ ವಿಷಾದವನ್ನು ತಿಳಿಸುತ್ತೇನೆ” ಎಂದು ಹೇಳಿದರು.

ವಿವಾದದ ಹಿನ್ನೆಲೆಯಲ್ಲಿ ನಾಯಕ ನಟ ಮತ್ತು ಜೈ ಭೀಮ್ ನಿರ್ಮಾಪಕ ಸೂರ್ಯ ಅವರಿಗೆ ಉಂಟಾದ ಕಷ್ಟಕ್ಕೆ ಚಿತ್ರ ನಿರ್ದೇಶಕ ವಿಷಾದ ವ್ಯಕ್ತಪಡಿಸಿದ್ದಾರೆ.

ಹಿನ್ನೆಲೆಯಲ್ಲಿ ನೇತಾಡುವ ಕ್ಯಾಲೆಂಡರ್ ಸಮುದಾಯವನ್ನು ಉಲ್ಲೇಖಿಸುತ್ತದೆ ಎಂದು ನನಗೆ ತಿಳಿದಿರಲಿಲ್ಲ. ಇದನ್ನು ಒಂದು ನಿರ್ದಿಷ್ಟ ಸಮುದಾಯದ ಉಲ್ಲೇಖದ ಸಂಕೇತವನ್ನಾಗಿ ಮಾಡುವುದು ನಮ್ಮ ಉದ್ದೇಶವಾಗಿರಲಿಲ್ಲ.ಅದು 1995 ರ ಅವಧಿಯನ್ನು ಪ್ರತಿಬಿಂಬಿಸುವುದಾಗಿದೆ ಎಂದು ಜ್ಞಾನವೇಲ್ ಹೇಳಿದ್ದಾರೆ.

ಚಿತ್ರೀಕರಣ ಅಥವಾ ಪೋಸ್ಟ್ ಪ್ರೊಡಕ್ಷನ್ ಸಮಯದಲ್ಲಿ, ಕೆಲವು ಸೆಕೆಂಡುಗಳ ಕಾಲ ಕಾಣಿಸಿಕೊಳ್ಳುವ ಕ್ಯಾಲೆಂಡರ್ ದೃಶ್ಯಗಳು ನಮ್ಮ ಗಮನವನ್ನು ಸೆಳೆಯಲಿಲ್ಲ, ಚಿತ್ರವು ಅಮೆಜಾನ್ ಪ್ರೈಮ್‌ನಲ್ಲಿ ಪ್ರೀಮಿಯರ್ ಆಗುವ ಮೊದಲು, ಅದನ್ನು ಹಲವಾರು ಜನರಿಗೆ ಪ್ರದರ್ಶಿಸಲಾಗಿತ್ತು.ಆ ಸಮಯದಲ್ಲಿ ಅದು ನಮ್ಮ ಗಮನಕ್ಕೆ ಬಂದಿದ್ದರೆ, ನಾವು ಅದನ್ನು ಬಿಡುಗಡೆ ಮಾಡುವ ಮೊದಲು ಬದಲಾಯಿಸುತ್ತಿದ್ದೆವು. ಸಾಮಾಜಿಕ ಮಾಧ್ಯಮಗಳ ಮೂಲಕ ಹಿನ್ನೆಲೆಯಕ್ಯಾಲೆಂಡರ್ ಬಗ್ಗೆ ತಿಳಿದುಕೊಂಡ ನಂತರ ಚಿತ್ರ ಬಿಡುಗಡೆಯಾದ ನಂತರ, ಮರುದಿನ ಬೆಳಿಗ್ಗೆ ಅದನ್ನು ಬದಲಾಯಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಯಿತು ಎಂದರು.

ಎಲ್ಲರೂ ಅರ್ಥಮಾಡಿಕೊಳ್ಳುತ್ತಾರೆ ಎಂದು ನಾನು ನಂಬಿದ್ದೇನೆ, ಸೂರ್ಯ ಅವರನ್ನು ಜವಾಬ್ದಾರಿಯನ್ನು ಹೊರುವಂತೆ ಕೇಳುವುದು ದುರದೃಷ್ಟಕರ. ನಿರ್ದೇಶಕನಾಗಿ, ಇದು ನನ್ನ ಮಾತ್ರ ಜವಾಬ್ದಾರಿ ಮಾತ್ರ, ನಾನು ತೆಗೆದುಕೊಳ್ಳಬೇಕಾದ ವಿಷಯ ಎಂದರು.

ನವೆಂಬರ್ 1 ರಂದು ತಮಿಳು ಮತ್ತು ತೆಲುಗು ಸೇರಿದಂತೆ ಭಾಷೆಗಳಲ್ಲಿ ಬಿಡುಗಡೆಯಾದ ‘ಜೈ ಭೀಮ್’ ನಲ್ಲಿ ತಮಿಳುನಾಡಿನ ವನ್ನಿಯಾರ್ ಸಂಗಮ್ ಸಮುದಾಯದ ಸದಸ್ಯರನ್ನು ಕೆಟ್ಟದಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿ ಗಲಾಟೆಗೆ ಕಾರಣವಾಗಿತ್ತು, ಮಾತ್ರವಲ್ಲದೆ ಸೂರ್ಯ ಅವರ ಮೇಲೆ ಹಲ್ಲೆ ನಡೆಸುವುದಾಗಿ ಬೆದರಿಕೆ ಹಾಕಲಾಗಿತ್ತು. ಚಿತ್ರದ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ತಮಿಳುನಾಡಿನಲ್ಲಿ ಅತ್ಯಂತ ಹಿಂದುಳಿದ ಸಮುದಾಯವಾದ ವನ್ನಿಯಾರ್ ಅಥವಾ ವನ್ನಿಯಾ ಕುಲ ಕ್ಷತ್ರಿಯರು ರಾಜ್ಯದ ಉತ್ತರದ ಜಿಲ್ಲೆಗಳಲ್ಲಿದ್ದಾರೆ. ವನ್ನಿಯಾರ್ ಸಂಗಮ್‌ನ ಚಿಹ್ನೆಯು ಉರಿಯುತ್ತಿರುವ ಬೆಂಕಿಯ ಕುಂಡ ಆಗಿದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.