ಕೋಲ್ಕತಾ: ಜೈಪಾಲ್ ಸಿಂಗ್ ಸೇರಿ ಇಬ್ಬರು ಮೋಸ್ಟ್ ವಾಂಟೆಡ್ ಕ್ರಿಮಿನಲ್ಸ್ ಎನ್ ಕೌಂಟರ್ ಗೆ ಬಲಿ
ದರೋಡೆ, ಅಪಹರಣ ಸೇರಿದಂತೆ 40ಕ್ಕೂ ಅಧಿಕ ಪ್ರಕರಣಗಳಲ್ಲಿ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಆಗಿರುವುದಾಗಿ ವರದಿ ತಿಳಿಸಿದೆ.
Team Udayavani, Jun 9, 2021, 6:40 PM IST
ನವದೆಹಲಿ:ಪಶ್ಚಿಮಬಂಗಾಳದ ಕೋಲ್ಕತಾದ ನ್ಯೂ ಟೌನ್ ನಲ್ಲಿರುವ ವಸತಿ ಸಮುಚ್ಛಯದ ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ಪಂಜಾಬ್ ಮೂಲದ ಇಬ್ಬರು ಮೋಸ್ಟ್ ವಾಂಟೆಡ್ ಕ್ರಿಮಿನಲ್ಸ್ ಗಳು ಸಾವನ್ನಪ್ಪಿರುವ ಘಟನೆ ಬುಧವಾರ(ಜೂನ್ 09) ನಡೆದಿದೆ. ಘಟನೆಯಲ್ಲಿ ಎಸ್ ಟಿಎಫ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ. ಆದರೆ ಈ ಪ್ರಕರಣದ ಬಗ್ಗೆ ಪಂಜಾಬ್ ಪೊಲೀಸರು ಯಾವುದೇ ಅಧಿಕೃತ ಹೇಳಿಕೆಯನ್ನು ಇನ್ನೂ ಬಿಡುಗಡೆ ಮಾಡಿಲ್ಲ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಉನ್ನತ ಹುದ್ದೆಯಲ್ಲಿದ್ದರೂ ಬೇಸಾಯದಲ್ಲಿ ಸಕ್ರಿಯ: K.M.ನಟರಾಜ್ ಅವರ ಕೆಲಸಕ್ಕೆ ಭಾರಿ ಮೆಚ್ಚುಗೆ
ಪಂಜಾಬ್ ಮೂಲದ ಇಬ್ಬರು ಅಪಾಯಕಾರಿ ಕ್ರಿಮಿನಲ್ಸ್ ಗಳು ಕೋಲ್ಕತಾ ನ್ಯೂಟೌನ್ ನ ರೆಸಿಡೆನ್ಸಿಯಲ್ ಕಾಂಪ್ಲೆಕ್ಸ್ ಬಳಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ಎಸ್ ಟಿಎಫ್ ತಂಡ ದಾಳಿ ನಡೆಸಿತ್ತು. ಈ ವೇಳೆ ನಡೆದ ಶೂಟೌಟ್ ನಲ್ಲಿ ಇಬ್ಬರು ಕ್ರಿಮಿನಲ್ಸ್ ಗಳನ್ನು ಹೊಡೆದುರುಳಿಸಿರುವುದಾಗಿ ವರದಿ ವಿವರಿಸಿದೆ.
ವರದಿಗಳ ಪ್ರಕಾರ, ಜಾರ್ಗಾಂವ್ ನ ಇಬ್ಬರು ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಹತ್ಯೆಗೆ ಸಂಬಂಧಿಸಿದ ವಾಂಟೆಡ್ ಕ್ರಿಮಿನಲ್ ಜೈಪಾಲ್ ಸಿಂಗ್ ಭುಲ್ಲರ್ ಸೇರಿದಂತೆ ಇಬ್ಬರು ಎಸ್ ಟಿಎಫ್ ಎನ್ ಕೌಂಟರ್ ಗೆ ಬಲಿಯಾಗಿದ್ದಾರೆ. ಭುಲ್ಲರ್ ಪಂಜಾಬ್, ರಾಜಸ್ಥಾನ್, ಹರ್ಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಕೊಲೆ, ದರೋಡೆ, ಅಪಹರಣ ಸೇರಿದಂತೆ 40ಕ್ಕೂ ಅಧಿಕ ಪ್ರಕರಣಗಳಲ್ಲಿ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಆಗಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ