ಜ. 6ರಂದು ಮಹಿಳಾ ಕಾಂಗ್ರೆಸ್ ಸಮಾವೇಶ; ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ
Team Udayavani, Jan 3, 2023, 10:18 PM IST
ಬೆಂಗಳೂರು: ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಬೇಕಿದ್ದ ಪ್ರಿಯಾಂಕಾ ಗಾಂಧಿ ಅವರು “ನಾ ನಾಯಕಿ’ ಮಹಿಳಾ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಲಿದ್ದಾರೆ.
ಜ. 6ರಂದು ಅರಮನೆ ಮೈದಾನದಲ್ಲಿ ಆಯೋಜಿಸಿರುವ “ನಾ ನಾಯಕಿ’ ಮಹಿಳಾ ಕಾಂಗ್ರೆಸ್ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದು, ಕೆಪಿಸಿಸಿ ಕಚೇರಿಗೂ ಭೇಟಿ ನೀಡಲಿದ್ದಾರೆ.
ಇಡೀ ದಿನ ರಾಜ್ಯ ಕಾಂಗ್ರೆಸ್ ನಾಯಕರ ಜತೆ ಸಮಾಲೋಚನೆ ನಡೆಸಲಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಭೇಟಿ ಕುತೂಹಲ ಮೂಡಿಸಿದೆ. ಮಹಿಳೆಯರನ್ನು ಸ್ವಾವಲಂಬಿಯಾಗಿಸುವ ಜತೆಗೆ ನಾಯಕತ್ವ ಕೊಡುವ ದೃಷ್ಟಿಯಿಂದ “ನಾ ನಾಯಕಿ’ ಅಭಿಯಾನವನ್ನು ಕೆಪಿಸಿಸಿ ಕೈಗೊಂಡಿದೆ.
ಸಮಾಜದ ಎಲ್ಲ ಸ್ಥರಗಳ ಮಹಿಳೆಯರಿಗೆ ಸ್ಥಾನಮಾನ ನೀಡುವುದರ ಜತೆಗೆ ಅವರೇ ಸ್ವಯಂ ನಾಯಕಿಯಾಗುವ ಅವಕಾಶ ಕಲ್ಪಿಸುವುದು. ಅದೇ ಕಾರಣಕ್ಕೆ “ನಾ ನಾಯಕಿ’ ಹೆಸರು ನೀಡಲಾಗಿತ್ತು. ಬೂತ್ ಮಟ್ಟದಿಂದ ತಾಲೂಕು, ಜಿಲ್ಲಾ ಮಟ್ಟದವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಇದೀಗ ರಾಜ್ಯಮಟ್ಟದ ಸಮಾವೇಶ ಆಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ