ಕಾಂಗ್ರೆಸ್ಸಿನ ಭ್ರಷ್ಟಾಚಾರ ಒಂದು ಗುಡ್ಡದಷ್ಟು ಮಾಹಿತಿ ಇಡಬಹುದು: ಹೆಚ್ ಡಿಕೆ

ಎರಡು ರಾಷ್ಟ್ರೀಯ ಪಕ್ಷ ಮಾಡಿದ ಜನ ದ್ರೋಹದ ಬಗ್ಗೆ ಜಾಗೃತಿ

Team Udayavani, Apr 16, 2022, 5:42 PM IST

1-dffdsf

ವಿಜಯಪುರ : ಕಳೆದ 75 ವರ್ಷಗಳಲ್ಲಿ ಎರಡು ಪಕ್ಷಗಳು ನಾಡಿಗೆ ಮಾಡಿರುವ ಜನದ್ರೋಹದ ಬಗ್ಗೆ ಜೆಡಿಎಸ್ ಜಾಗೃತಿ ಮೂಡಿಸಲು ಮುಂದಾಗಿದೆ. ನಮಗೆ ಸ್ಪಷ್ಟ ಬಹುಮತ ಸಿಕ್ಕರೆ ರಾಜ್ಯದ ಎಲ್ಲ ನದಿ ನೀರಿನ ಸದ್ಬಳಕೆ ಮೂಲಕ ಜನಸೇವೆ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು‌.

ಶನಿವಾರ ಜಿಲ್ಲೆಯ ಆಲಮಟ್ಟಿಯ ಕೃಷ್ಣಾ ತೀರದಲ್ಲಿ ಜನತಾ ಜಲಧಾರೆ ಜನಜಾಗೃತಿ ಅಭಿಯಾನದ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷ್ಣೆಯ ಕಡೆಗೆ ನಡಿಗೆ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಮಾಡಿದ್ದೇನು ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತಾಗಿದೆ. ಕಾಂಗ್ರೆಸ್ಸಿನ ಭ್ರಷ್ಟಾಚಾರ ಮಾಹಿತಿ ತೆಗೆದರೆ ಒಂದು ಗುಡ್ಡದಷ್ಟು ಮಾಹಿತಿ, ದಾಖಲೆ ಸಮೇತ ಇಡಬಹುದು. ಭ್ರಷ್ಟಾಚಾರ ವಿರುದ್ಧ ಹೊರಟಿರುವ ಕಾಂಗ್ರೆಸ್ ನಾಯಕರು ಐದು ವರ್ಷದ ಹಿಂದೆ ಎಷ್ಟು ಭ್ರಷ್ಟಾಚಾರ ಏರಿಸಿದ್ದಾರೆ ಎಂಬುದು ನಾಡಿನ ಜನತೆಗೆ ಗೊತ್ತಿರುವ ವಿಚಾರ. ಭ್ರಷ್ಟಾಚಾರದ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು ಎಂದು ಟೀಕಾ ಪ್ರಹಾರ ಮಾಡಿದರು.

ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳಿಗೆ ರಾಜ್ಯದ ಅಭಿವೃದ್ಧಿಗಿಂತ ಅಧಿಕಾರ ಮುಖ್ಯ. ಅಧಿಕಾರಕ್ಕೆ ಬಂದಮೇಲೆ ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಲೇ ಬಂದಿವೆ. ನಾಡಿನ ಜನತೆ ಅನುಭವಿಸುವ ಗಂಭಿರ, ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವ ಸೌಜನ್ಯದ ಆಡಳಿತ ನೀಡಿದ ದಾಖಲೆ ಇಲ್ಲ ಎಂದು ಟೀಕಿಸಿದರು.

2018 ರಲ್ಲಿ ನಾನು ಸಿಎಂ ಆಗಿದ್ದಾಗ ರೈತರ ಸಾಲಮನ್ನಾ ಬಗ್ಗೆ ಮಾತನಾಡಿದಾಗ ಕೇವಲವಾಗಿ ಮಾತನಾಡಿ, ಸಾಲಮನ್ನಾ ಮಾಡಲು ಎಲ್ಲಿದೆ ದುಡ್ಡು, ಎಲ್ಲಿಂದ ತರ್ತಾನೆ ಅನುದಾನ ಅಂತೆಲ್ಲ ವ್ಯಂಗ್ಯ ಮಾಡಿದರು‌ ಆದರೆ ಸಾಲ ಮನ್ನಾ ಮಾಡಿ ತೋರಿಸಿದ್ದೇ ನಾವು ಎಂದು ತಮ್ಮ ಸರ್ಕಾರದ ಸಾಧನೆಯನ್ನು ಬಿಚ್ಚಿಟ್ಡರು.

ಅದೇ ರೀತಿ ಭವಿಷ್ಯದಲ್ಲಿ ರಾಜ್ಯದ ಜನರ ಬದುಕು ಮಕ್ಕಳ ಭವಿಷ್ಯ ಸರಿಪಡಿಸಿಕೊಳ್ಳಲು ನಮ್ಮನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ರಾಜ್ಯ ವಿಧಾನಸಭೆಗೆ ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ನಾಡಿನ ಮತದಾರ ಪ್ರಭು ಜೆಡಿಎಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿದಲ್ಲಿ ರಾಜ್ಯದ ಎಲ್ಲ ನದಿಗಳ ನೀರನ್ನು ಸದ್ಬಳಕೆ ಮಾಡುತ್ತೇವೆ. ಈ ಮಹತ್ವದ ಕಾರ್ಯಕ್ಕೆ ಎಷ್ಟು ಲಕ್ಷ ಕೋಟಿ ಖರ್ಚಾದರೂ ಐದು ವರ್ಷಗಳಲ್ಲಿ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣ ಮಾಡುತ್ತೇವೆ. ಈ ವಿಷಯವಾಗಿ ಹನುಮಾನ್ ಜಯಂತಿ ದಿನ ಸಂಕಲ್ಪ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಭರವಸೆ ನೀಡಿದರು.

ಮಾಜಿ ಸಚಿವ ಎಸ್. ಆರ್. ಪಾಟೀಲ ನಡೆಸಿರುವ ಟ್ರ್ಯಾಕ್ಟರ್ ರ್ಯಾಲಿಯ ಸಂಕಲ್ಪ ಯಾತ್ರೆ ವಿರುದ್ದ ಗುಡುಗಿದ ಕುಮಾರಸ್ವಾಮಿ, ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ರಾಜ್ಯದ ಜನತೆಗೆ ನೀಡಿದ್ದಾದರೂ ಏನನ್ನು, ಈ ವರೆಗೂ ರಾಜ್ಯದ ನೀರಾವರಿ ಬಗ್ಗೆ ನೈಜ ಕಾಳಜಿ ತೋರದೆ ಈಗೇಕೆ ನೆನಪಾಗಿದೆ.
ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ ಎಂದು ಅಧಿಕಾರಕ್ಕೆ ಬಂದ ಮೇಲೆ ಏನು ಕೊಡುಗೆ ಕೊಟ್ಟರು. ಈಗ ನವಿಲೆ, ಕೃಷ್ಣಾ ಮೇಲ್ದಂಡೆ, ಮಹಾದಾಯಿ ಅಂತ ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಭ್ರಷ್ಟಾಚಾರ, ಹಗರಣಗಳ ಬಗ್ಗೆ ನನ್ನ ಬಳಿ ಬೇಕಾದಷ್ಟು ದಾಖಲೆಗಳಿವೆ. ಈಗ ನಾನು ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡಿ ಅರ್ಥವಿಲ್ಲ. ಬದಲಾಗಿ ತುರ್ತಾಗಿ ನಾಡಿನ ಜನತೆ ಬದುಕು ಕಟ್ಟಿಕೊಡುವ ಕೆಲಸ ಆಗಬೇಕಿದೆ. ಇದು ನಮ್ಮ ಪಕ್ಷದ ನಿಲುವು ಎಂದರು.

ಭ್ರಷ್ಟಾಚಾರ ವರ್ಷದಿಂದ ವರ್ಷಕ್ಕೆ ಕಡಿಮೆ ಮಾಡುತ್ತೇವೆಂದು ಹೇಳುತ್ತಲೇ ಭ್ರಷ್ಟಾಚಾರ ಏರಿಸಿಕೊಂಡೇ ಹೋಗಿದ್ದಾರೆ‌. ಯಾವ ಪಕ್ಷಗಳ ಸರ್ಕಾರಗಳು ಭ್ರಷ್ಟಾಚಾರ ನಿಲ್ಲಿಸುವ ವಿಷಯದಲ್ಲಿ ಪ್ರಮಾಣಿಕತೆ ತೋರಿದ್ದಾರೆ. ಪಾವಿತ್ರ್ಯತೆ ಯಾವ ಪಕ್ಷದಲ್ಲೂ ಇಲ್ಲ ಎಂದು ಕುಟುಕಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.