ಯುವತಿಯ ಜೊತೆ ಲೈಂಗಿಕ ಸಂಪರ್ಕ : ಸಚಿವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಗೆ ದೂರು?
Team Udayavani, Mar 2, 2021, 9:38 PM IST
ಬೆಂಗಳೂರು : ಕೆಲಸ ಕೊಡಿಸುವುದಾಗಿ ಯುವತಿಯ ಜೊತೆ ಲೈಂಗಿಕ ಸಂಪರ್ಕ ಹೊಂದಿದ್ದ ಸಚಿವರ ಸಿ.ಡಿ ಯೊಂದು ಬಹಿರಂಗವಾಗಿದ್ದು ಈ ಕುರಿತು ನಾಗರಿಕ ಹಕ್ಕು ಹೋರಾಟ ಸಮಿತಿಯ ಅಧ್ಯಕ್ಷರಾದ ದಿನೇಶ್ ಕಲ್ಲಹಳ್ಳಿ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದಿನೇಶ್ ನೀಡಿದ ದೂರಿನ ಪ್ರತಿಯಲ್ಲಿ ಉತ್ತರ ಕರ್ನಾಟಕ ಮೂಲದ ಬಡ ಕುಟುಂಬದ ಯುವತಿಯೊಬ್ಬಳು ಕೆಲಸದ ವಿಚಾರವಾಗಿ ಸಚಿವ ರಮೇಶ್ ಜಾರಕಿಹೊಳಿ ಅವರ ಬಳಿ ಕೇಳಿದ್ದು ಅದಕ್ಕೆ ಸಚಿವರು ಕೆಪಿಟಿಸಿಎಲ್ ನಲ್ಲಿ ಉದ್ಯೋಗ ಕೊಡಿಸುವ ಭರವಸೆಯನ್ನು ನೀಡಿ ಯುವತಿಯ ಜೊತೆ ಸಲುಗೆಯಿಂದ ವರ್ತಿಸಿ ಲೆಂಗಿಕ ಸಂಪರ್ಕ ಹೊಂದಿ ಬಳಿಕ ಉದ್ಯೋಗವನ್ನು ನೀಡದೆ ವಂಚಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಯುವತಿಯ ಜೊತೆ ಸಚಿವರು ಲೈಂಗಿಕ ಸಂಪರ್ಕ ಬೆಳೆಸಿದ್ದ ವಿಡಿಯೋ ಇರುವುದು ತಿಳಿಯುತ್ತಿದ್ದಂತೆ ಯುವತಿ ಮತ್ತು ಯುವತಿಯ ಕುಟುಂಬಕ್ಕೆ ಸಚಿವರು ಜೀವ ಬೆದರಿಕೆ ಒಡ್ಡಿದ್ದಾರೆ.
ನಾನು ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿರುವ ಕಾರಣ ಯುವತಿ ಕುಟುಂಬದವರು ನನ್ನ ಬಳಿ ಬಂದು ಸಚಿವರು ಯುವತಿಯ ಜೊತೆ ನಡೆಸಿದ ಲೈಂಗಿಕ ಸಂಪರ್ಕದ ವಿಡಿಯೋ ಸಿ.ಡಿ ಒಂದನ್ನು ನೀಡಿದ್ದು ಅದರ ಆದರದ ಮೇಲೆ ದೂರು ದಾಖಲಿಸುತ್ತಿದ್ದೇನೆ ಎಂದು ದಿನೇಶ್ ಕಲ್ಲಹಳ್ಳಿ ದೂರಿನಲ್ಲಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ