5ಜಿ ತಂತ್ರಜ್ಞಾನ: ಜೂಹಿ ಚಾವ್ಲಾ ಅರ್ಜಿ ವಜಾಗೊಳಿಸಿ 20 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್
ಮಾಹಿತಿ ನೀಡಲು ನಿರಾಕರಿಸಿದ್ದರೆ ಆಗ ನ್ಯಾಯಾಲಯದ ಮೆಟ್ಟಿಲು ಏರಬಹುದಾಗಿತ್ತು ಎಂದು ತಿಳಿಸಿದ್ದರು.
Team Udayavani, Jun 4, 2021, 5:18 PM IST
ನವದೆಹಲಿ: ಭಾರತದಲ್ಲಿ 5 ಜಿ ವೈರ್ ಲೆಸ್ ನೆಟ್ ವರ್ಕ್ ಸ್ಥಾಪಿಸುವುದರ ವಿರುದ್ಧ ನಟಿ, ಪರಿಸರವಾದಿ ಜೂಹಿ ಚಾವ್ಲಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ(ಜೂನ್ 04) ವಜಾಗೊಳಿಸಿದೆ. ಅಲ್ಲದೇ ಅರ್ಜಿದಾರರು ಕಾನೂನು ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಅಭಿಪ್ರಾಯವ್ಯಕ್ತಪಡಿಸಿ ನಟಿಗೆ 20 ಲಕ್ಷ ರೂಪಾಯಿ ದಂಡ ವಿಧಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.
ಇದನ್ನೂ ಓದಿ:ಮೊದಲ ಡೋಸ್ ಲಸಿಕೆ ಪಡೆದಿದ್ದರೂ ಬದುಕುಳಿಯಲಿಲ್ಲ ನಟಿ ರಿಂಕು ಸಿಂಗ್
ದೇಶದಲ್ಲಿ 5ಜಿ ನೆಟ್ ವರ್ಕ್ ಸ್ಥಾಪನೆಗೆ ಅವಕಾಶ ನೀಡಬಾರದು ಎಂದು ಕೋರಿ ಜೂಹಿ ಚಾವ್ಲಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ , ಈ ಅರ್ಜಿ ದೋಷಯುಕ್ತವಾಗಿದೆ ಮತ್ತು ಇದೊಂದು ಮಾಧ್ಯಮ ಪ್ರಚಾರಕ್ಕಾಗಿ ಸಲ್ಲಿಸಲಾಗಿದೆ ಎಂದು ತಿಳಿಸಿತ್ತು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಆರ್.ಮಿಧಾ, ಜೂಹಿ ಚಾವ್ಲಾ ತಮ್ಮ ಹಕ್ಕುಗಳ ಬಗ್ಗೆ ಮೊದಲು ಕೇಂದ್ರ ಸರ್ಕಾರವನ್ನು ಸಂಪರ್ಕಿಸಬೇಕಿತ್ತು. ಒಂದು ವೇಳೆ ಸರ್ಕಾರ ಮಾಹಿತಿ ನೀಡಲು ನಿರಾಕರಿಸಿದ್ದರೆ ಆಗ ನ್ಯಾಯಾಲಯದ ಮೆಟ್ಟಿಲು ಏರಬಹುದಾಗಿತ್ತು ಎಂದು ತಿಳಿಸಿದ್ದರು.
ಅರ್ಜಿ ವಿಚಾರಣೆ ವೇಳೆ 1993ರಲ್ಲಿ ತೆರೆಕಂಡ ಹಮ್ ಹೈ ರಾಹಿ ಪ್ಯಾರ್ ಕೆ ಚಿತ್ರದ ಗೀತೆಯನ್ನು ಹಾಡಿ ಪ್ರಕ್ರಿಯೆಗೆ ಅಡ್ಡಿಪಡಿಸಿದ ವ್ಯಕ್ತಿಯನ್ನು ಗುರುತಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆದೇಶದಲ್ಲಿ ತಿಳಿಸಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ