ಜೂ. 1ರಿಂದ ಎಲ್ಲ ನ್ಯಾಯಾಲಯಗಳ ಕಾರ್ಯಾರಂಭ
Team Udayavani, May 23, 2020, 9:16 PM IST
ಬೆಂಗಳೂರು: ಲಾಕ್ಡೌನ್ನಿಂದ ಸ್ಥಗಿತಗೊಂಡಿದ್ದ ರಾಜ್ಯದ ಹೈಕೋರ್ಟ್ ಹಾಗೂ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳು ಜೂ. 1ರಿಂದ ಕಾರ್ಯಾರಂಭ ಮಾಡಲಿವೆ.
ಹೈಕೋರ್ಟ್ನ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ನ್ಯಾಯಪೀಠಗಳು, ರಾಜ್ಯದ ಎಲ್ಲ ಜಿಲ್ಲಾ ಮತ್ತು ವಿಚಾರಣ ನ್ಯಾಯಾಲಯಗಳು ಸುರಕ್ಷತ ಮುನ್ನೆಚ್ಚರಿಕ ಕ್ರಮಗಳ ಕಡ್ಡಾಯ ಪಾಲನೆಯೊಂದಿಗೆ ಸೀಮಿತ ರೀತಿಯಲ್ಲಿ ಕಾರ್ಯನಿರ್ವಹಿಸಲಿವೆ. ಈ ಕುರಿತು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಹೈಕೋರ್ಟ್ನ ಪೂರ್ಣಪೀಠದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅದರಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬದಾಮಿಕರ್ ಮೇ 23ರಂದು ಅಧಿಸೂಚನೆ ಹೊರಡಿಸಿದ್ದಾರೆ.
ಕೋರ್ಟ್ನ ಕಾರ್ಯಾಚರಣೆ ಕುರಿತ ವಿವರಗಳನ್ನು ಮೇ 26ರಂದು ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ ಪ್ರಕಟಿಸಲಾಗುವುದು ಎಂದು ರಿಜಿಸ್ಟ್ರಾರ್ ಜನರಲ್ ಅವರ ನೋಟಿಸ್ನಲ್ಲಿ ತಿಳಿಸಲಾಗಿದೆ.