ಕೊನೆಗೂ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಕಾಜಲ್ ಅಗರ್ವಾಲ್! ಮದುವೆಗೆ ಡೇಟ್ ಫಿಕ್ಸ್
Team Udayavani, Oct 6, 2020, 3:53 PM IST
ಹೈದರಾಬಾದ್ : ಟಾಲಿವುಡ್ ಬೆಡಗಿ ಕಾಜಲ್ ಅಗರ್ವಾಲ್ ತಮ್ಮ ಅಭಿಮಾನಿಗಳಿಗೆ ಸಿಹಿಸುದ್ದಿಯನ್ನು ಕೊಟ್ಟಿದ್ದಾರೆ ಅದೇನಪ್ಪಾ ಅಂತೀರಾ… ಬಹು ದಿನಗಳಿಂದ ಗುಸು ಗುಸು ಸುದ್ದಿಯಾಗುತಿದ್ದ ಮದುವೆ ವಿಚಾರ ಹೌದು.. ಕಾಜಲ್ ಅಗರ್ವಾಲ್ ಮದುವೆಯಾಗುತ್ತಿದ್ದಾರೆ ಈ ಕುರಿತು ಸ್ವತಃ ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದರೊಂದಿಗೆ ಅಭಿಮಾನಿಗಳಲ್ಲಿ ಇದ್ದ ಅನುಮಾನಕ್ಕೆ ತೆರೆ ಎಳೆದಿದ್ದಾರೆ.
ಬೆಂಗಳೂರು ಮೂಲದ ಉದ್ಯಮಿ, ಇಂಟಿರಿಯರ್ ಡಿಸೈನರ್, ಟೆಕ್ ಮತ್ತು ವಿನ್ಯಾಸ ಉತ್ಸಾಹಿ ಗೌತಮ್ ಕಿಚ್ಲು ಎಂಬುವವರನ್ನು ಕಾಜಲ್ ವರಿಸಲಿದ್ದಾರೆ. ಅಂದಹಾಗೆ ಅಕ್ಟೋಬರ್ ೩೦ರಂದು ಈ ಜೋಡಿ ಮುಂಬೈಯಲ್ಲಿ ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ಹಸೆಮಣೆ ಏರಲಿದ್ದಾರೆ.
ಕಾಜಲ್ ತಮ್ಮ ಟ್ವಿಟರ್ ನಲ್ಲಿ ನೀವೆಲ್ಲರೂ ನಮ್ಮನ್ನು ಉತ್ಸಾಹದಿಂದ ಹುರಿದುಂಬಿಸುತ್ತೀರಿ ಎಂಬುದು ತಿಳಿದಿದೆ. ಇಷ್ಟು ವರ್ಷಗಳ ಕಾಲ ನನಗೆ ನೀವೆಲ್ಲ ತೋರಿದ ಪ್ರೀತಿಗೆ ಧನ್ಯವಾದಗಳು. ಈಗ ಹೊಸ ಪಯಣಕ್ಕೆ ನಾವು ನಿಮ್ಮ ಆಶೀರ್ವಾದ ಬಯಸುತ್ತಿದ್ದೇವೆ’ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಕೋವಿಡ್ ಕಾರಣದಿಂದಾಗಿ ಸರಳವಾಗಿ ಮದುವೆ ಮಾಡಿಕೊಳ್ಳುವ ವಿಚಾರವನ್ನು ಹೇಳಿಕೊಂಡಿದ್ದಾರೆ ಎರಡೂ ಕುಟುಂಬದ ಸದಸ್ಯರು ಸೇರಿಕೊಂಡು ಈ ಸಮಾರಂಭವನ್ನು ಸರಳವಾಗಿ ನಡೆಸುವುದಾಗಿ ಹೇಳಿದ್ದಾರೆ.
ಈಗಾಗಲೇ ಹಲವು ಸಿನಿಮಾಗಳ ಶೂಟಿಂಗ್ ನಲ್ಲಿ ಬ್ಯುಸಿ ಆಗಿರುವ ಕಾಜಲ್ ಮದುವೆಯ ಬಳಿಕವೂ ಸಿನಿಮಾಗಳಲ್ಲಿ ನಟಿಸಲಿದ್ದೇನೆ ಎಂದಿದ್ದಾರೆ.
— Kajal Aggarwal (@MsKajalAggarwal) October 6, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…