
ಮೋಸ್ಟ್ ವಾಂಟೆಡ್, ನಟೋರಿಯಸ್ ಗ್ಯಾಂಗ್ ಸ್ಟರ್ ಕಾಲಾ ಜತೇದಿ ಉತ್ತರಪ್ರದೇಶದಲ್ಲಿ ಬಂಧನ
ಮೋಹಿತ್ ಗಿಲ್ (24ವರ್ಷ) ಎಂಬಾತನನ್ನು ಬಂಧಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Team Udayavani, Jul 31, 2021, 12:22 PM IST

ಲಕ್ನೋ: ನಟೋರಿಯಸ್ ಗ್ಯಾಂಗ್ ಸ್ಟರ್ ಕಾಲಾ ಜತೇದಿಯನ್ನು ದೆಹಲಿ ಪೊಲೀಸ್ ವಿಶೇಷ ತಂಡ ಬಂಧಿಸಿದ್ದು, ಈತನ ಪತ್ತೆಗಾಗಿ ಪೊಲೀಸ್ ಇಲಾಖೆ ಏಳು ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಸಚಿವ ಸಂಪುಟದ ಬಗ್ಗೆ ಕೇಂದ್ರ ನಾಯಕರ ತೀರ್ಮಾನಕ್ಕೆ ಬದ್ಧ: ಕೆ.ಎಸ್.ಈಶ್ವರಪ್ಪ
ಜತೇದಿಯನ್ನು ಉತ್ತರಪ್ರದೇಶದ ಸಹರಾನ್ ಪುರ್ ನಲ್ಲಿ ಶುಕ್ರವಾರ (ಜುಲೈ 30) ಬಂಧಿಸಲಾಗಿತ್ತು ಎಂದು ಇಂಟಲಿಜೆನ್ಸ್ ಸ್ಪೆಷಲ್ ಸೆಲ್ ನ ಡೆಪ್ಯುಟಿ ಕಮಿಷನರ್ ಮನೀಶಿ ಚಂದ್ರ ಮಾಹಿತಿ ನೀಡಿದ್ದಾರೆ. ದೆಹಲಿ, ಪಂಜಾಬ್, ಹರ್ಯಾಣ ಮತ್ತು ರಾಜಸ್ಥಾನಗಳಲ್ಲಿ ಕಾಲಾನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದು, ಈತ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಪಟ್ಟಿಯಲ್ಲಿದ್ದ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಈ ವರ್ಷದ ಮೇ ತಿಂಗಳಿನಲ್ಲಿ ದೆಹಲಿ ಪೊಲೀಸರು ಕಾಲಾ ಜತೇದಿ ಗ್ಯಾಂಗ್ ನ ಸದಸ್ಯನೊಬ್ಬನನ್ನು ಬಂಧಿಸಿದ್ದರು. ಕಾಲಾ ಜತೇದಿ ಗ್ಯಾಂಗ್ ನ ರೋಹ್ಟಕ್ ನಿವಾಸಿ ಮೋಹಿತ್ ಗಿಲ್ (24ವರ್ಷ) ಎಂಬಾತನನ್ನು ಬಂಧಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 10ತಿಂಗಳಲ್ಲಿ ಕಾಲಾ ಜತೇದಿ ನಟೋರಿಯಸ್ ಗ್ಯಾಂಗ್ ದೆಹಲಿ, ಹರ್ಯಾಣ, ಪಂಜಾಬ್ ಮತ್ತು ರಾಜಸ್ಥಾನಗಳಲ್ಲಿ 25ಕ್ಕೂ ಅಧಿಕ ಕೊಲೆಗಳನ್ನು ಮಾಡಿರುವುದಾಗಿ ವರದಿ ವಿವರಿಸಿದೆ. ಮಾರ್ಚ್ 25ರಂದು ಪೊಲೀಸ್ ಕಸ್ಟಡಿಯಲ್ಲಿದ್ದ ಗ್ಯಾಂಗ್ ಸ್ಟರ್ ಕುಲ್ ದೀಪ್ ಫಾಜ್ಜಾ ಜಿಟಿಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆತ ಪರಾರಿಯಾಗಲು ಕಾಲಾ ಜತೇದಿ ಗ್ಯಾಂಗ್ ಸಹಕರಿಸಿತ್ತು. ಬಳಿಕ ಪೊಲೀಸ್ ಎನ್ ಕೌಂಟರ್ ನಲ್ಲಿ ಕುಲ್ ದೀಪ್ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Belthangady: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ನಿಧನ

Road mishap: ಕಾರು – ಟ್ರ್ಯಾಕ್ಟರ್ ಟ್ರಾಲಿ ಅಪಘಾತ; ಸಚಿವರ ತಲೆಗೆ ತೀವ್ರಗಾಯ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಶತಾಬ್ದಿ ರೈಲು ಮೂರೂವರೆ ಗಂಟೆ ತಡ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ

ರಾತ್ರೋ ರಾತ್ರಿ ಲಕ್ಷ್ಮಣ ಸವದಿ ನಿವಾಸಕ್ಕೆ ಡಿಸಿಎಂ ಡಿಕೆಶಿ ಭೇಟಿ