2023ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ
Team Udayavani, Nov 28, 2022, 7:25 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: 2023ರ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷಾ ವೇಳಾಪಟ್ಟಿಯನ್ನು ಸೋಮವಾರ (ನ.28 ರಂದು) ಪ್ರಕಟಿಸಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಮಾರ್ಚ್ 2023ರ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯು ದಿನಾಂಕ: 09.03.2023 ರಿಂದ 29.03.2023 ರವರೆಗೆ ನಡೆಯಲಿದ್ದು, ಪರೀಕ್ಷಾ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ:
ಪರೀಕ್ಷಾ ದಿನಾಂಕ / ದಿನ:
09.0.3.2023 (ಗುರುವಾರ) – ಕನ್ನಡ,ಅರೇಬಿಕ್
11.03.2023 (ಶನಿವಾರ) – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
13.03.2023 (ಸೋಮವಾರ) – ಅರ್ಥಶಾಸ್ತ್ರ
14.03.2023 (ಮಂಗಳವಾರ) – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
ಮನಃ ಶಾಸ್ತ್ರ, ರಸಾಯನ ಶಾಸ್ತ್ರ, ಮೂಲ ಗಣಿತ
15.03.2023 ( ಬುಧವಾರ) – ತಮಿಳು,ತೆಲುಗು, ಮಲಯಾಳಂ, ಮರಾಠಿ, ಉರ್ದು
ಸಂಸ್ಕೃತ, ಫ್ರೆಂಚ್
16.03.2023 (ಗುರುವಾರ) – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
17.03.2023 (ಶುಕ್ರವಾರ) – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್,
ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
18.03.2023 (ಶನಿವಾರ) – ಭೂಗೋಳಶಾಸ್ತ್ರ, ಜೀವಶಾಸ್ತ್ರ
20.03.2023 (ಸೋಮವಾರ) – ಇತಿಹಾಸ, ಭೌತಶಾಸ್ತ್ರ
21.03.2023 (ಮಂಗಳವಾರ) – ಹಿಂದಿ
23.03.2023 (ಗುರುವಾರ) – ಇಂಗ್ಲೀಷ್
25.03.2023 (ಶನಿವಾರ) – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
27.03.2023 (ಸೋಮವಾರ) – ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ,ಗೃಹ ವಿಜ್ಞಾನ
29.03.2023 (ಬುಧವಾರ) – ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ,ಗಣಕ ವಿಜ್ಞಾನ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆ ನಡೆಯಲಿದೆ. ನಿತ್ಯ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆಗಳು ನಡೆಯಲಿವೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
2023ರ ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ಪರೀಕ್ಷೆ ನಡೆಯಲಿವೆ. #2ndPucExam2023 pic.twitter.com/y9OnR98UKD— B.C Nagesh (@BCNagesh_bjp) November 28, 2022