ಕರ್ನಾಟಕ ಬಂದ್ ; ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ , ನಾರಾಯಣ ಗೌಡ ಪೋಲೀಸರ ವಶಕ್ಕೆ
Team Udayavani, Dec 5, 2020, 12:18 PM IST
ಬೆಂಗಳೂರು : ರಾಜ್ಯಾದ್ಯಂತ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕರ್ನಾಟಕ ಬಂದಿಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಸಾ.ರಾ. ಗೋವಿಂದ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಸೇರಿದಂತೆ ಹಲವಾರು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಟೌನ್ ಹಾಲ್ ಬಳಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹಾಗೂ ಸಾ.ರಾ. ಗೋವಿಂದ್ ನೇತೃತ್ವದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದರು.
ಅದೇ ರೀತಿ ನಗರದ ಕೆಲವು ಕಡೆಗಳಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆಯ ಕಿಚ್ಚು ಭುಗಿಲೆದ್ದಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ನಾರಾಯಣಗೌಡ ನೇತೃತ್ವದಲ್ಲಿ ಗಾಂಧಿನಗರ, ಮೌರ್ಯ ವೃತ್ತ, ರೇಸ್ ಕೋರ್ಸ್ ರಸ್ತೆ, ಶಿವಾನಂದ ಸರ್ಕಲ್ ಗಳ ಮೂಲಕ ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.ಈ ವೇಳೆ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಕಲಬುರಗಿ: ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಸರಕಾರ ಕೂಡಲೇ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಕೂಡಲೇ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಅಲ್ಲಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೆಪಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ : ಬೀಳಗಿಯ ಓರ್ವ ವಶಕ್ಕೆ
ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯಸ್ವಾಮಿ ದರ್ಶನ ಪಡೆದ ಶಾಸಕ ಯತ್ನಾಳ್
ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ
ಗರ್ಭಧರಿಸಿದ್ದ ಹಸುವಿನ ಜೀವ ಉಳಿಸಿದ ವೈದ್ಯರಿಗೆ ಗ್ರಾಮಸ್ಥರಿಂದ ಮೆಚ್ಚುಗೆ
ಸವದತ್ತಿ ಬಳಿ KSRTC ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು
MUST WATCH
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ
ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,
ಹೊಸ ಸೇರ್ಪಡೆ
ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು
ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ
ಮತದಾರರ ಕೈ ಸೇರಲಿದೆ ಡಿಜಿಟಲ್ ಓಟರ್ ಕಾರ್ಡ್
ಐಪೋನ್-12 ಸೇರಿದಂತೆ ಹಲವು ಸ್ಮಾರ್ಟ್ ಪೋನ್ ಗಳಿಗೆ ಭರ್ಜರಿ ಡಿಸ್ಕೌಂಟ್: ಇಲ್ಲಿದೆ ಮಾಹಿತಿ
ಕೆಪಿಎಸ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ : ಬೀಳಗಿಯ ಓರ್ವ ವಶಕ್ಕೆ