
Karnataka Budget 2023:ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ,ಸಿರಿಧಾನ್ಯಕ್ಕೆ ಪ್ರೋತ್ಸಾಹ ಧನ
Team Udayavani, Feb 17, 2023, 10:49 AM IST

ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ (ಫೆ.17) ವಿಧಾನಸಭೆಯಲ್ಲಿ 2023-24ನೇ ಸಾಲಿನ ಆಯವ್ಯಯ ಮಂಡಿಸಿದ್ದು, ರೈತರಿಗೆ ಭರ್ಜರಿ ಕೊಡುಗೆ ಘೋಷಿಸಲಾಗಿದೆ.
ಇದನ್ನೂ ಓದಿ:Live: ಕರ್ನಾಟಕ ಬಜೆಟ್ 2023-2024: ಬಜೆಟ್ ಮಂಡನೆ ಆರಂಭ-ರೈತರಿಗೆ ಭರಪೂರ ಕೊಡುಗೆ
ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿ ಸಾಲ ನೀಡಲಾಗುವುದು ಎಂದು ಘೋಷಿಸಲಾಗಿದೆ. 3ಲಕ್ಷ ಸಾಲದಿಂದ 5 ಲಕ್ಷದವರೆಗೆ ವಿಸ್ತರಣೆ. ಒಟ್ಟು 25 ಸಾವಿರ ಕೋಟಿ ರೂ. ಸಾಲ ವಿತರಿಸಲಾಗುತ್ತದೆ ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ. ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋಟಿ ರೂಪಾಯಿ ಘೋಷಿಸಲಾಗಿದೆ.
ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ.
ಸಿರಿಧಾನ್ಯಕ್ಕೆ ನೆರವು:
ಸಿರಿಧಾನ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಸಿಎಂ ಬೊಮ್ಮಾಯಿ ಅವರು ಕಿರು ಧಾನ್ಯಗಳ ಉತ್ಪಾದನೆ ಮತ್ತು ಉತ್ಪಾದನೆ ಹೆಚ್ಚಿಸಲು ರೈತ ಸಿರಿ ಯೋಜನೆಯಡಿ ಕಿರು ಧಾನ್ಯ ಬೆಳೆಗಾರರಿಗೆ 10,000 ರೂ.ಗಳ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ರಾಜ್ಯದ 56 ಲಕ್ಷ ಸಣ್ಣ ಮತ್ತು ಅತಿಸಣ್ಣ ರೈತರ ಕುಟುಂಬಗಳಿಗೆ 180 ಕೋಟಿ ರೂ.ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆಯ ನೆರವಿನೊಂದಿಗೆ ಅವರ ಬದುಕಿಗೆ ಭದ್ರತೆ ಒದಗಿಸಲು ಕ್ರಮ ವಹಿಸಲಾಗುವುದು.
ರೈತರಿಗೆ ಅತ್ಯಾಧುನಿಕ ಕೃಷಿ ಯಂತ್ರೋಪಕರಣಗಳು ಸುಲಭವಾಗಿ ದೊರೆಯುವಂತೆ ಮಾಡಲು ಕೃಷಿ ಇಲಾಖೆಯು ಈಗಾಗಲೇ ನಿರ್ವಹಿಸುತ್ತಿರುವ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ 300 ಹೈಟೆಕ್ ಹಾರ್ವೆಸ್ಟರ್ ಗಳನ್ನು ಹಂತ, ಹಂತವಾಗಿ ಒದಗಿಸಲು ಉದ್ದೇಶಿಸಲಾಗಿದೆ. 2023-24ನೇ ಸಾಲಿನಲ್ಲಿ 100 ಹೈಟೆಕ್ ಹಾರ್ವೆಸ್ಟರ್ ಗಳಿಗೆ ತಲಾ 50 ಲಕ್ಷ ರೂ.ನಂತೆ ಈ ವರ್ಷ 50 ಕೋಟಿ ರೂ. ಒದಗಿಸಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.
ಇಸ್ರೋ ಸಂಸ್ಥೆ ಸಹಯೋಗದೊಂದಿಗೆ ಡಿಜಿಟಲ್ ಕೃಷಿಯಲ್ಲಿ ಜಿಯೋ ಸ್ಪೇಷಿಯಲ್ ತಾಂತ್ರಿಕತೆಗಳನ್ನು ಅಳವಡಿಸಲು 50 ಕೋಟಿ ರೂ.ವೆಚ್ಚದಲ್ಲಿ ಒಂದು ಹೊಸ ಕಾರ್ಮಕ್ರಮ ರೂಪಿಸಲಾಗಿದೆ. ಈ ಯೋಜನೆಯಿಂದ ದೊರಕುವ ಮಾಹಿತಿಗಳನ್ನು ಉಪಯೋಗಿಸಿ Precision Farming ಸೇರಿದಂತೆ ತಮ್ಮ ಉತ್ಪಾದನೆಯನ್ನು ಹೆಚ್ಚಿಸಲು ತಿಳಿವಳಿಕೆಯುಳ್ಳ ಸೂಕ್ತ ನಿರ್ಧಾರಗಳನ್ನು ರೈತರಿಗೆ ಅನುಕೂಲವಾಗಲಿದೆ ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.
ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ರೈತ ಉತ್ಪಾದಕ ಸಂಸ್ಥೆಗಳನ್ನು (FPO) ಪ್ರೋತ್ಸಾಹಿಸಲು ತಲಾ 10 ಲಕ್ಷ ರೂ.ವರೆಗಿನ ಬಂಡವಾಳಕ್ಕೆ 5 ವರ್ಷಗಳ ಅವಧಿಗೆ ಬ್ಯಾಂಕ್ ಗಳ ಮೂಲಕ ಮುಖ್ಯಮಂತ್ರಿ ರೈತ ಉನ್ನತಿ ಯೋಜನೆಯಡಿ ಬಡ್ಡಿ ಸಹಾಯಧನ ಒದಗಿಸಲಾಗುವುದು.
ಕೇಂದ್ರ ಸರ್ಕಾರ ತನ್ನ ಆಯವ್ಯಯದಲ್ಲಿ ಒಂದು ಕೋಟಿ ರೈತರನ್ನು ನೈಸರ್ಗಿಕ ಕೃಷಿಗೆ ಆಕರ್ಷಿಸಲಾಗುವುದು ಎಂದು ಘೋಷಿಸಿದೆ. ಇದಕ್ಕೆ ಪೂರಕವಾಗಿ ಪ್ರತಿ ತಾಲೂಕಿಗೆ ಒಂದರಂತೆ ತಲಾ 50 ಹೆಕ್ಟೇರ್ ಪ್ರದೇಶದಲ್ಲಿ ಗುಚ್ಛ ಮಾದರಿಯಲ್ಲಿ ಮುಂದಿನ 4 ವರ್ಷಗಳಲ್ಲಿ ಒಂದು ಲಕ್ಷ ಹೆಕ್ಟೇರ್ ಪ್ರದೇಶವನ್ನು ನೈಸರ್ಗಿಕ ಮತ್ತು ಸಮಗ್ರ ಕೃಷಿಗೆ ಒಳಪಡಿಸಲಾಗುವುದು ಎಂದು ಬಜೆಟ್ ನಲ್ಲಿ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gandhi Jayanti ಗ್ಯಾರಂಟಿ ಹಿಂದೆ ಗಾಂಧಿ ಪ್ರೇರಣೆ: ಸಿಎಂ ಸಿದ್ದರಾಮಯ್ಯ

JDS ಅತೃಪ್ತ ನಾಯಕರು ಸಂಪರ್ಕದಲ್ಲಿದ್ದಾರೆ: ಸಚಿವ ಜಮೀರ್ ಅಹಮದ್ ಖಾನ್

Shivamogga Case ಕಾನೂನುಬಾಹಿರ ಚಟುವಟಿಕೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

Nagarahole ಅರಣ್ಯ ಪ್ರದೇಶದಲ್ಲಿ ಹುಲಿ ದಾಳಿಗೆ ರೈತ ಬಲಿ

National Education Policy ಜಾರಿಯಿಂದ ಭಾರತ ಶಸಕ್ತ ರಾಷ್ಟ್ರವಾಗುತ್ತೆ: ಸೀತಾರಾಂ
MUST WATCH
ಹೊಸ ಸೇರ್ಪಡೆ

Gandhi Jayanti ಗ್ಯಾರಂಟಿ ಹಿಂದೆ ಗಾಂಧಿ ಪ್ರೇರಣೆ: ಸಿಎಂ ಸಿದ್ದರಾಮಯ್ಯ

JDS ಅತೃಪ್ತ ನಾಯಕರು ಸಂಪರ್ಕದಲ್ಲಿದ್ದಾರೆ: ಸಚಿವ ಜಮೀರ್ ಅಹಮದ್ ಖಾನ್

Shivamogga Case ಕಾನೂನುಬಾಹಿರ ಚಟುವಟಿಕೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

State Government ಎಲ್ಲರೊಂದಿಗೆ ಚರ್ಚಿಸಿ ಸಂಕಷ್ಟ ಸೂತ್ರ ಸಿದ್ಧಪಡಿಸಿ ಮುನ್ನಡೆಯಲಿ

Shivamogga ಗಲಭೆ ಪ್ರಕರಣ: ತಲ್ವಾರ್ ಕತ್ತಿ ಪ್ರದರ್ಶನ ಮಾಡಿಲ್ಲ: ಪರಮೇಶ್ವರ್