ಕೆಜಿಎಫ್-2 ಹಾಡಿನ ವಿವಾದ: ರಾಹುಲ್‌ಗೆ ಹೈಕೋರ್ಟ್ ನೋಟಿಸ್
Team Udayavani, Dec 2, 2022, 10:09 PM IST
ಬೆಂಗಳೂರು: ಕಾಂಗ್ರೆಸ್ ಪಕ್ಷ ಹಾಗೂ ಭಾರತ್ ಜೋಡೋ ಯಾತ್ರೆಯ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬಳಸಿಕೊಂಡಿದ್ದ “ಕೆಜಿಎಫ್-2′ ಚಿತ್ರದ ಹಾಡಿನ ತುಣುಕು ಮತ್ತು ಸಂಗೀತವನ್ನು ತೆಗೆದು ಹಾಕುವಂತೆ ನ್ಯಾಯಾಲಯ ನೀಡಿದ್ದ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಸಲ್ಲಿಕೆಯಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಹಕ್ಕು ಸ್ವಾಮ್ಯ ಉಲ್ಲಂಘಿಸಿ ಬಳಸಿಕೊಂಡಿದ್ದ ಕೆಜಿಎಫ್-2 ಚಿತ್ರದ ಹಾಡಿನ ಸಂಗೀತವನ್ನು ಕಾಂಗ್ರೆಸ್‌ನ ಎಲ್ಲ ಸಾಮಾಜಿಕ ಜಾಲತಾಣಗಳ ಖಾತೆಯಿಂದ ತೆರವುಗೊಳಿಸುವುದಾಗಿ ಹೈಕೋರ್ಟ್‌ಗೆ ಭರವಸೆ ನೀಡಿದ್ದ ಹೊರತಾಗಿಯೂ ಈವರೆಗೂ ತೆಗೆದುಹಾಕಿಲ್ಲ. ಈ ಮೂಲಕ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಲಾಗಿದೆ ಎಂದು ಆಕ್ಷೇಪಿಸಿ ಹಾಡುಗಳ ಹಕ್ಕು ಸ್ವಾಮ್ಯ ಹೊಂದಿರುವ ಎಂಆರ್‌ಟಿ ಮ್ಯೂಸಿಕ್ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.
ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ಮು| ನ್ಯಾ| ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ, ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಆರೋಪಿತರನ್ನಾಗಿ ಮಾಡಲಾಗಿರುವ ರಾಹುಲ್ ಗಾಂಧಿ, ಕಾಂಗ್ರೆಸ್‌ನ ಮಾಧ್ಯಮ ವಿಭಾಗದ ಮುಖ್ಯಸ್ಥ ಹಾಗೂ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಹಾಗೂ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮದ ಮುಖ್ಯಸ್ಥೆ ಸುಪ್ರಿಯಾ ಅವರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜ.12ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಹೊಸ ಸೇರ್ಪಡೆ
ಪಡುಬಿದ್ರಿ: ಪೋಕ್ಸೋ ಪ್ರಕರಣದ ಆರೋಪಿಗೆ 22 ವರ್ಷಗಳ ಸಜೆ, 22 ಸಾವಿರ ದಂಡ
ಪಠಾಣ್ ನಿಜವಾದ ಕಲೆಕ್ಷನ್ ಎಷ್ಟು?; ನೆಟಿಜನ್ ಗಳಿಗೆ ತಿರುಗೇಟು ಕೊಟ್ಟ ಶಾರುಖ್
ಶಿವಸೇನೆ ಕೋಮುವಾದಿ ಪಕ್ಷ ಅಲ್ಲವೇ: ಡಾ.ಸುಧಾಕರ್ ಪ್ರಶ್ನೆ
ಕಾಂಗ್ರೆಸ್ನಲ್ಲೇ ಅಸಮಾಧಾನ ಭುಗಿಲು: ಸಚಿವ ಬಿ.ಸಿ.ಪಾಟೀಲ್
ಅಮೆರಿಕದ ಈಶಾನ್ಯ ಭಾಗಕ್ಕೆ ಶೀತ ಮಾರುತ ಪ್ರಕೋಪ: – 46 ಡಿಗ್ರಿ ಸೆಲ್ಸಿಯಸ್ಗೆ ಇಳಿದ ತಾಪಮಾನ