Karnataka Politics: ನಾಯಕತ್ವದ ಪೈಪೋಟಿ ಆಡಳಿತಕ್ಕೆ ಅಡ್ಡಿಯಾಗದಿರಲಿ


Team Udayavani, May 19, 2023, 6:15 AM IST

SIDDU DK SHI

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಗೆಲುವು ಸಿಕ್ಕಿದ ನಾಲ್ಕು ದಿನಗಳ ನಂತರ ಮುಖ್ಯಮಂತ್ರಿ  -ಉಪಮುಖ್ಯಮಂತ್ರಿ ಹುದ್ದೆಗಳ ಬಿಕ್ಕಟ್ಟು ಬಗೆಹರಿದಿದೆ. ದೆಹಲಿಯಲ್ಲಿ ಹಲವು ಸುತ್ತುಗಳ ಮಾತುಕತೆಯ ನಂತರ ಕಡೆಗೂ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್‌ ನಡುವೆ ಅಧಿಕಾರ ಹಂಚಿಕೆಯಾಗಿದೆ. ಎಲ್ಲವೂ ಸುಖಾಂತ್ಯಗೊಂಡಿದೆ ಎಂದೇ ಕಾಂಗ್ರೆಸ್‌ ನಾಯಕರು ಬಣ್ಣಿಸುತ್ತಿದ್ದಾರೆ. ಹೀಗಾಗಿ, ಸಹಜವಾಗಿಯೇ ರಾಜ್ಯದ ಜನತೆಯ ನಿರೀಕ್ಷೆಗಳಿಗೆ ಸ್ಪಂದಿಸುವ ಹೊಣೆಗಾರಿಕೆ ಮತ್ತು ಜವಾಬ್ದಾರಿ ಪಕ್ಷದ ಮೇಲಿದೆ.

ರಾಜ್ಯದ ಮತದಾರರು ಕಾಂಗ್ರೆಸ್‌ ಬಗ್ಗೆ ಹೆಚ್ಚು ನಂಬಿಕೆ ತೋರಿಸಿ 135 ಸ್ಥಾನ ನೀಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆ, ಪ್ರಣಾಳಿಕೆಯ ಘೋಷಣೆಗಳು, ಗ್ಯಾರಂಟಿ ಕಾರ್ಡ್‌ ಅನುಷ್ಟಾನ ಇವೆಲ್ಲವೂ ಕಾಂಗ್ರೆಸ್‌ ಪಕ್ಷದ ಕೈ ಹಿಡಿದಿದೆ. ಇದೀಗ ಅವುಗಳ ಆನುಷ್ಟಾನ ಸವಾಲು ಮುಖ್ಯಮಂತ್ರಿ- ಉಪ ಮುಖ್ಯಮಂತ್ರಿ ಸಹಿತ ಇಡೀ ಮಂತ್ರಿ ಮಂಡಲಕ್ಕಿದೆ. ಹೀಗಾಗಿ, ಪ್ರತಿ ಹಂತದಲ್ಲೂ ಎಚ್ಚರಿಕೆ ಹಾಗೂ ಜಾಗರೂಕತೆ ವಹಿಸುವ ಮೂಲಕ ಆರ್ಥಿಕ ಸಂಪನ್ಮೂಲ ಕ್ರೂಢೀಕರಣಕ್ಕೆ ಒತ್ತು ನೀಡಿ ಸರ್ಕಾರದ ಯೋಜನೆಗಳು ಅರ್ಹರಿಗೆ ತಲುಪುವಂತೆ ಮಾಡಬೇಕಾಗಿದೆ. ಗ್ಯಾರಂಟಿ ಯೋಜನೆಗಳು ಯಾರ್ಯಾರಿಗೆ ಯಾವ್ಯಾವ ವರ್ಗಕ್ಕೆ ಸಿಗಲಿದೆ ಎಂಬ ಸ್ಪಷ್ಟತೆ ಸಹ ಸಿಗಬೇಕಾಗಿದೆ.

ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಾದ ಹಣಕಾಸು ಹೊಂದಿಸುವುದರ ಜತೆಗೆ ಮೂಲಸೌಕರ್ಯ ಅಭಿವೃದ್ಧಿ, ಶಾಶ್ವತ ಯೋಜನೆಗಳ ಜಾರಿ, ಎಲ್ಲ ಸಮುದಾಯದ ಕಲ್ಯಾಣ ಕಾರ್ಯಕ್ರಮ ಜಾರಿಗೊಳಿಸಬೇಕಾಗಿದೆ. ಇದಕ್ಕೆ ಬೇಕಾದ ಸಂಪನ್ಮೂಲ ಹೊಂದಿಸಿಕೊಳ್ಳುವುದು ಸುಲಭದ ಮಾತಲ್ಲ. ಜನಸಾಮಾನ್ಯರ ಮೇಲೆ ತೆರಿಗೆಯ ಹೊರೆ ಹಾಕದೆ ಹೊಸ ಕಾರ್ಯಕ್ರಮಗಳನ್ನೂ ಜಾರಿಗೊಳಿಸಬೇಕಾಗಿದೆ.

ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಸರ್ಕಾರ ಹಾಗೂ ನೂತನ ಮುಖ್ಯಮಂತ್ರಿ- ಉಪ ಮುಖ್ಯಮಂತ್ರಿ ಜತೆಗೂಡಿ ಕೆಲಸ ಮಾಡಬೇಕು. ಭರ್ಜರಿ ಬಹುಮತ ಬಂದಿರುವುದರಿಂದ ಸಚಿವ ಸಂಪುಟ ರಚನೆಯೂ ದೊಡ್ಡ ಸವಾಲು. ಅದನ್ನೂ ಸಮರ್ಥವಾಗಿ ನಿಭಾಯಿಸಿ ಆಡಳಿತ ಯಂತ್ರ ಚುರುಕುಕೊಳಿಸಿ ಅಭಿವೃದ್ದಿ ಕಾರ್ಯಕ್ರಮಗಳ ಬಗ್ಗೆ ವಿಶೇಷ ಗಮನ ನೀಡಬೇಕು. ಈ ಸರ್ಕಾರದಿಂದ ರಾಜ್ಯದ ಜನತೆಗೆ ಭ್ರಷ್ಟಾಚಾರ ರಹಿತ ದಕ್ಷ ಹಾಗೂ ಸ್ವತ್ಛ ಆಡಳಿತದ ನಿರೀಕ್ಷೆಯಲ್ಲಿದ್ದಾರೆ.

ಉದ್ಯೋಗ ಸೃಷ್ಟಿ, ಸರ್ಕಾರಿ ಹುದ್ದೆಗಳ ನೇಮಕಾತಿ, ಕೃಷಿ, ಗ್ರಾಮೀಣಾಭಿವೃದ್ಧಿಗೆ ಒತ್ತು, ಕೈಗಾರಿಕೆ, ಪ್ರವಾಸೋದ್ಯಮಕ್ಕೆ ಆದ್ಯತೆ, ಶಿಕ್ಷಣ, ಆರೋಗ್ಯ, ವಸತಿಗೆ ಪ್ರಾಮುಖ್ಯತೆ ನೀಡುವ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಂಕಲ್ಪ ತೊಡಬೇಕಾಗಿದೆ.

2013 ರಲ್ಲಿ ಕಾಂಗ್ರೆಸ್‌ ಸರ್ಕಾರ ಐದು ವರ್ಷ ಆಡಳಿತ ನಡೆಸಿ ನಂತರ ಎದುರಾದ 2018 ರ ಚುನಾವಣೆಯಲ್ಲಿ ಬಹುಮತ ಬಾರದೆ ಸಮ್ಮಿಶ್ರ ಸರ್ಕಾರ ರಚನೆಗೊಂಡು ಅದು ಒಂದೂವರೆ ವರ್ಷದಲ್ಲಿ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇಬ್ಬರು ಮುಖ್ಯಮಂತ್ರಿಗಳ ನೇಮಕಗೊಂಡರು. ಈ ನಡುವೆ ಕೆಲವು ವಿವಾದ, ಆರೋಪ, ಅಡೆ-ತಡೆಗಳಿಂದ ರಾಜ್ಯದ ಅಭಿವೃದ್ಧಿ ಮೇಲೂ ಪರಿಣಾಮ ಬಿದ್ದಿದೆ. ಹೀಗಾಗಿ, ಅದೆಲ್ಲವನ್ನೂ ಸರಿಪಡಿಸಿ ಮತ್ತೆ ಆಡಳಿತ ಯಂತ್ರ ಸರಿದಾರಿಗೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್‌ ಸರ್ಕಾರ ಮುನ್ನಡೆಯಬೇಕಾಗಿದೆ. ರಾಜ್ಯದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸಬೇಕಾಗಿದೆ. ಎಲ್ಲಿಯೂ ನಾಯಕತ್ವದ ಪೈಪೋಟಿ, ಬಣ ರಾಜಕಾರಣ ಆಡಳಿತ ಯಂತ್ರದ ಮೇಲೆ ಕರಿಛಾಯೆ ಬೀರದಂತೆ ನೋಡಿಕೊಳ್ಳಬೇಕಿರುವುದು ಕಾಂಗ್ರೆಸ್‌ ಮೇಲಿನ ದೊಡ್ಡ ಜವಾಬ್ದಾರಿ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.