Udayavni Special

ಕನ್ನಡ ಪರ ಹೋರಾಟಗಾರರು ಡೋಂಗಿಗಳು ಎಂದ ಯತ್ನಾಳ ಹೇಳಿಕೆ ಖಂಡಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ

Team Udayavani, Nov 21, 2020, 5:40 PM IST

ಕನ್ನಡ ಪರ ಹೋರಾಟಗಾರರು ಡೋಂಗಿಗಳು ಎಂದ ಯತ್ನಾಳ ಹೇಳಿಕೆ ಖಂಡಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ

ವಿಜಯಪುರ : ಕನ್ನಡ ಪರ ಹೋರಾಟಗಾರರನ್ನು ಡೋಂಗಿಗಳು, ರೋಲ್‍ಕಾಲ್ ಸಂಘಟನೆಗಳು ಎಂದೆಲ್ಲ ಹೇಳಿಕೆ ನೀಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕರವೇ ಕಾರ್ಯಕರ್ತರು ನಗರದಲ್ಲಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಮರಾಠಾ ಅಭಿವೃದ್ಧಿ ನಿಗಮ ರಚನೆಗೆ ಬೆಂಬಲಿಸಿ ಹಾಗೂ ಡಿ.5 ರಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ವಿರೋಧ ವ್ಯಕ್ತಪಪಡಿಸಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ನೀಡಿದ್ದರು. ಇದರಿಂದ ಆಕ್ರೋಶಗೊಂಡಿರುವ ಕರವೇ ಕಾರ್ಯಕರ್ತರು ಶನಿವಾರ ನಗರದಲ್ಲಿರುವ ಶಾಸಕ ಕಛೇರಿ ಎದುರು ಪ್ರತಿಭಟನೆ ನಡೆಸಿ, ಶಾಸಕ ಯತ್ನಾಳ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಎಂ.ಸಿ.ಮುಲ್ಲಾ, ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಯನ್ನು ಗಮನದಲ್ಲಿ ಇರಿಸಿಕೊಂಡು ಮರಾಠಿ ಸಮುದಾಯವನ್ನು ಓಲೈಸಲು ಮುಂದಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ನಿರ್ಧಾರ ಸರಿಯಲ್ಲ.

ಇದನ್ನೂ ಓದಿ:ದೇಹಕ್ಕೆ ಧನಾತ್ಮಕ ಶಕ್ತಿ…ರುದ್ರಾಕ್ಷಿ ಧಾರಣೆ ಆರೋಗ್ಯಕ್ಕೂ ಒಳ್ಳೆಯದು

ಕನ್ನಡ ನೆಲದಲ್ಲಿ ಮರಾಠಿಗರ ಓಲೈಕೆಗೆ ಮುಂದಾಗಿರುವುದರಿಂದ ಕನ್ನಡ ಭಾಷಿಕರಿಗೆ ನೋವಾಗಿದೆ. ಹೀಗಾಗಿ ರಾಜ್ಯದ ಕನ್ನಡ ಪರ ಸಂಘಟನೆಗಳು ಹೋರಾಟಕ್ಕೆ ಮುಂದಾಗಿವೆ. ಆದರೆ ಕನ್ನಡ ನೆಲದಲ್ಲಿ ಕನ್ನಡಗರಿಂದ ಆಯ್ಕೆಯಾಗಿರುವ ವಿಜಯಪುರ ಶಾಸಕ ಯತ್ನಾಳ ಅವರು ಕನ್ನಡಪರ ಸಂಘಟನೆಗಳ ನಾಯಕರನ್ನು ಡೋಂಗಿ ಹೋರಾಟಗಾರರು ಹಾಗೂ ರೋಲ್‍ಕಾಲ್ ಸಂಘಟನೆಗಳೆಂದು ನೀಡಿರುವ ಹೇಳಿಕೆ ಖಂಡನಾರ್ಹ. ಕೂಡಲೇ ಶಾಸಕ ಯತ್ನಾಳ ಬೇಷರತ್ತಾಗಿ ಕ್ಷಮೆ ಕೋರಬೇಕು ಎಂದು ಆಗದ್ರಹಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಕುಂಬಾರ ಮಾತನಾಡಿ, ಹೋರಾಟದಿಂದಲೇ ರಾಜಕೀಯವಾಗಿ ಬೆಳೆದಿರುವ ಶಾಸಕ ಬಸನಗೌಡ ಪಾಟೀಲ ಅವರು, ಕನ್ನಡ ಪರ ಹೋರಾಟಗಾರರ ಕುರಿತು ನೀಡಿರುವ ಹೇಳಿಕೆ ಸರಿಯಲ್ಲ. ಹೋರಾಟದ ದಿನಗಳಲ್ಲಿ ಯತ್ನಾಳ ಕೂಡ ನಕಲಿ ರೋಲ್ ಕಾಲ್ ಹೋರಾಟಗಾರರಾಗಿದ್ದರೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಭೀಕರ ಅಪಘಾತ-ಕಾರಿನಲ್ಲಿದ್ದ ಏಳು ಮಂದಿ ಜೀವಂತ ದಹನ, ಓರ್ವ ಮಹಿಳೆ ಪವಾಡಸದೃಶ ಪಾರು

ಯುವ ಘಟಕದ ಜಿಲ್ಲಾಧ್ಯಕ್ಷ ಅಶೋಕ ಹಾರಿವಾಳ, ಶ್ರೀಕಾಂತ ಬಿಜಾಪುರ ಮಾತನಾಡಿ, ಈಚೆಗೆ ನಗರ ಶಾಸಕ ಯತ್ನಾಳ ಅವರು ಪ್ರತಿಯೊಂದು ವಿಚಾರದಲ್ಲಿ ಮೂಗು ತೂರಿಸಲು ಮುಂದಾಗುತ್ತಿದ್ದಾರೆ. ಅಲ್ಲದೇ ಅನಗತ್ಯವಾಗಿ ವಿವಾಧಾತ್ಮಕವಾಗಿ ಹೇಳಿಕೆ ನೀಡುತ್ತಿದ್ದಾರೆ. ನಗರ ಶಾಸಕರು ಮಾನಸಿಕ ಆರೋಗ್ಯದ ಕುರಿತು ಆತಂಕವಾಗಿದ್ದು, ಕೂಡಲೇ ಸರ್ಕಾರ ಚಿಕಿತ್ಸೆ ಕೊಡಿಸಬೇಕು ಎಂದು ಆಗ್ರಹಿಸಿದರು.

ಮಹಾದೇವ ರಾವಜಿ, ಫಯಾಜ ಕಲಾದಗಿ, ಸಾಯಬಣ್ಣ ಮಡಿವಾಳರ, ಮಲ್ಲು ಮಡಿವಾಳರ, ಮಂಜುನಾಥ ಬಡಿಗೇರ, ಗೌಡಪ್ಪಗೌಡ ಬಿರಾದಾರ, ಸಂತೋಷ ಪಾಟೀಲ, ಸುಭಾಸ ಪಾಟೀಲ, ಮಲಕುಗೌಡ ಪಾಟೀಲ, ಪಂಡಿತ ಪೂಜಾರಿ, ಧರ್ಮು ಸಿಂಧೆ, ಭೀಮಪ್ಪ ಕಾಂಬಳೆ, ಮನೋಹರ ತಾಜವ, ಶಿವಾಜಿ ಜಾಧವ, ಬಸವರಾಜ ಬಿ.ಕೆ., ನಶೀಮ ರೋಜಿಂದಾರ, ವಿನೋದ ದಳವಾಯಿ, ಪಿದಾ ಕಲಾದಗಿ, ರಾಜು ಹಜೇರಿ, ಮೃತ್ಯುಂಜಯ ಹಿರೇಮಠ, ಮಲ್ಲಿಕಾರ್ಜುನ ಬಿರಾದಾರ, ರಮೇಶ ಜಾವಗರ, ಸುರೇಶ ಪೂಜಾರಿ, ಸೋಮು ಕರನಾಳ, ಎಸ್.ವೈ.ನಡುವಿನಕೇರಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಬಡ ವಿದ್ಯಾರ್ಥಿಗಳಿಗೆ ಅನುಕೂಲ: ಮುಖ್ಯಮಂತ್ರಿ

“ಕರ್ನಾಟಕ-ಎಲ್‌ಎಂಎಸ್‌’ ಚಾಲನೆ: ಬಡ ವಿದ್ಯಾರ್ಥಿಗಳಿಗೆ ಅನುಕೂಲ: ಮುಖ್ಯಮಂತ್ರಿ

ನಿರ್ಣಾಯಕ ಹೋರಾಟ: ಭಾರೀ ಬೆಲೆ ತೆರಬೇಕಾಗುತ್ತದೆ: ರೈತರ ಎಚ್ಚರಿಕೆ

ನಿರ್ಣಾಯಕ ಹೋರಾಟ: ಭಾರೀ ಬೆಲೆ ತೆರಬೇಕಾಗುತ್ತದೆ: ರೈತರ ಎಚ್ಚರಿಕೆ

GST

ಆಧಾರ್‌ ದೃಢೀಕರಿಸದಿದ್ರೆ ಭೌತಿಕ ಪರಿಶೀಲನೆ

ಬಡರಾಷ್ಟ್ರಗಳಿಗೆ ಭಾರತ ಲಸಿಕೆ ಸಂಗ್ರಾಹಕ ಗಿಫ್ಟ್

ಬಡರಾಷ್ಟ್ರಗಳಿಗೆ ಭಾರತ ಲಸಿಕೆ ಸಂಗ್ರಾಹಕ ಗಿಫ್ಟ್

ಮಣಿಪಾಲ: ಬೆಂಕಿ ಅವಘಡ; ಯುವಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಮಣಿಪಾಲ: ಬೆಂಕಿ ಅವಘಡ; ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

Olypic

ಒಲಿಂಪಿಕ್ಸ್‌ ಮುಂದೂಡಿಕೆ; 3 ಬಿ. ಡಾಲರ್‌ಗೂ ಹೆಚ್ಚು ಖರ್ಚು

ಚಾಮರಾಜನಗರ: ದೇವಾಲಯಗಳಲ್ಲಿನ್ನು ಸಂಸ್ಕೃತದೊಡನೆ ಕನ್ನಡ ಮಂತ್ರಘೋಷ!

ಚಾಮರಾಜನಗರ: ದೇವಾಲಯಗಳಲ್ಲಿನ್ನು ಸಂಸ್ಕೃತದೊಡನೆ ಕನ್ನಡ ಮಂತ್ರಘೋಷ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಡ ವಿದ್ಯಾರ್ಥಿಗಳಿಗೆ ಅನುಕೂಲ: ಮುಖ್ಯಮಂತ್ರಿ

“ಕರ್ನಾಟಕ-ಎಲ್‌ಎಂಎಸ್‌’ ಚಾಲನೆ: ಬಡ ವಿದ್ಯಾರ್ಥಿಗಳಿಗೆ ಅನುಕೂಲ: ಮುಖ್ಯಮಂತ್ರಿ

ಬಿಸಿಯೂಟ ಸ್ಥಗಿತ: ಖುದ್ದು ವಿಚಾರಣೆಗೆ ಹಾಜರಾಗಲು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸೂಚನೆ

ಬಿಸಿಯೂಟ ಸ್ಥಗಿತ: ಖುದ್ದು ವಿಚಾರಣೆಗೆ ಹಾಜರಾಗಲು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸೂಚನೆ

ಬೇಕಿದ್ದ ಮಾತ್ರೆ ಬಿಟ್ಟು ಬೇರೆ ಮಾತ್ರೆ ಸೇವಿಸಿದ್ದರಿಂದ ಇಷ್ಟೆಲ್ಲ ಆಯಿತು :N.R‌.ಸಂತೋಷ್‌

ಬೇಕಿದ್ದ ಮಾತ್ರೆ ಬಿಟ್ಟು ಬೇರೆ ಮಾತ್ರೆ ಸೇವಿಸಿದ್ದರಿಂದ ಇಷ್ಟೆಲ್ಲ ಆಯಿತು :N.R‌.ಸಂತೋಷ್‌

ಚಾಮರಾಜನಗರ ಜಿಲ್ಲೆಯ 129 ಗ್ರಾ.ಪಂ.ಗಳ ಚುನಾವಣೆಗೆ 1046 ಮತಗಟ್ಟೆಗಳ ಸ್ಥಾಪನೆ

ಚಾಮರಾಜನಗರ ಜಿಲ್ಲೆಯ 129 ಗ್ರಾ.ಪಂ.ಗಳ ಚುನಾವಣೆಗೆ 1046 ಮತಗಟ್ಟೆಗಳ ಸ್ಥಾಪನೆ

ಅತಿವೃಷ್ಠಿ ಹಾನಿ ಪರಿಹಾರಕ್ಕೆ ಲಂಚ ಕೇಳಿದ ಮಸಗುಪ್ಪಿ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

ಅತಿವೃಷ್ಠಿ ಹಾನಿ ಪರಿಹಾರಕ್ಕೆ ಲಂಚ ಕೇಳಿದ ಮಸಗುಪ್ಪಿ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

MUST WATCH

udayavani youtube

ರೋಗ ನಿರ್ಮೂಲನೆಯಲ್ಲಿ ಆಯುರ್ವೇದ ವೈದ್ಯ ಪದ್ಧತಿಯ ಮಹತ್ವವೇನು?

udayavani youtube

Success story of a couple In Agriculture | Integrated Farming | Udayavani

udayavani youtube

ಮೂರೂವರೆ ಸಾವಿರದಷ್ಟು ವಿವಿಧ ಪತ್ರಿಕೆಗಳನ್ನು ಸಂಗ್ರಹಿಸಿರುವ ಎಕ್ಕಾರು ಉಮೇಶ ರಾಯರು

udayavani youtube

Mangalore: Woman rescues a cat from 30 feet deep well | Ranjini Shetty

udayavani youtube

ಸಚಿವ ಸಂಪುಟ ವಿಸ್ತರಣೆ ಬಗ್ಗೆ CM and ಹೈಕಮಾಂಡ್ ನಿರ್ಧಾರ ತಗೆದುಕೊಳ್ಳುತ್ತದೆ: ಅಶ್ವಥ್ ನಾರಾಯಣ

ಹೊಸ ಸೇರ್ಪಡೆ

ಬಡ ವಿದ್ಯಾರ್ಥಿಗಳಿಗೆ ಅನುಕೂಲ: ಮುಖ್ಯಮಂತ್ರಿ

“ಕರ್ನಾಟಕ-ಎಲ್‌ಎಂಎಸ್‌’ ಚಾಲನೆ: ಬಡ ವಿದ್ಯಾರ್ಥಿಗಳಿಗೆ ಅನುಕೂಲ: ಮುಖ್ಯಮಂತ್ರಿ

ನಿರ್ಣಾಯಕ ಹೋರಾಟ: ಭಾರೀ ಬೆಲೆ ತೆರಬೇಕಾಗುತ್ತದೆ: ರೈತರ ಎಚ್ಚರಿಕೆ

ನಿರ್ಣಾಯಕ ಹೋರಾಟ: ಭಾರೀ ಬೆಲೆ ತೆರಬೇಕಾಗುತ್ತದೆ: ರೈತರ ಎಚ್ಚರಿಕೆ

GST

ಆಧಾರ್‌ ದೃಢೀಕರಿಸದಿದ್ರೆ ಭೌತಿಕ ಪರಿಶೀಲನೆ

ಬಡರಾಷ್ಟ್ರಗಳಿಗೆ ಭಾರತ ಲಸಿಕೆ ಸಂಗ್ರಾಹಕ ಗಿಫ್ಟ್

ಬಡರಾಷ್ಟ್ರಗಳಿಗೆ ಭಾರತ ಲಸಿಕೆ ಸಂಗ್ರಾಹಕ ಗಿಫ್ಟ್

ಮಣಿಪಾಲ: ಬೆಂಕಿ ಅವಘಡ; ಯುವಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಮಣಿಪಾಲ: ಬೆಂಕಿ ಅವಘಡ; ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.