ಕಾವೇರಿ – ವೈಗೈ ನದಿ ಜೋಡಣೆಯ ತಮಿಳುನಾಡಿನ ಯೋಜನೆಗೆ ವಿರೋಧ : ಡಿಸಿಎಂ ಅಶ್ವಥ್‌ನಾರಾಯಣ


Team Udayavani, Feb 22, 2021, 7:39 PM IST

ತಮಿಳುನಾಡಿನ ಕಾವೇರಿ – ವೈಗೈ ನದಿ ಜೋಡಣೆ ಯೋಜನೆಗೆ ವಿರೋಧ : ಡಿಸಿಎಂ ಅಶ್ವಥ್‌ನಾರಾಯಣ

ಮಂಡ್ಯ: ವೆಲ್ಲಾರು ವೈಗೈ ಹಾಗೂ ಕಾವೇರಿ ನದಿ ಜೋಡಣೆಯ ತಮಿಳುನಾಡಿನ ಯೋಜನೆಗೆ ಸರ್ಕಾರ ವಿರೋಧ ವ್ಯಕ್ತಪಡಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್‌ನಾರಾಯಣ ಹೇಳಿದರು.

ನಗರದ ಹೊರವಲಯದಲ್ಲಿರುವ ನೂತನವಾಗಿ ನಿರ್ಮಿಸಿರುವ ಅಮರಾವತಿ ಹೋಟೆಲ್‌ಗೆ ಚಾಲನೆ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಇದರ ಬಗ್ಗೆ ಕೇಂದ್ರ ಜಲಸಂಪನ್ಮೂಲ ಸಚಿವರೊಂದಿಗೆ ಮಾತುಕತೆ ನಡೆಸಲು ಸಚಿವ ರಮೇಶ್‌ಜಾರಕಿಹೊಳಿ ಅವರು ತೆರಳಿದ್ದು, ಯೋಜನೆಗೆ ಅನುಮೋದನೆ ನೀಡದಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಮೇಕೆದಾಟು ಯೋಜನೆ ಜಾರಿಗೆ ಕ್ರಮ:
ಮೇಕೆದಾಟು ಬಳಿ ಜಲಾಶಯ ನಿರ್ಮಿಸುವ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಈಗಾಗಲೇ ಒಂದು ವರ್ಷದ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಮೇಕೆದಾಟು ಯೋಜನೆಯಿಂದ ಕುಡಿಯುವ ನೀರು, ವಿದ್ಯುತ್ ಉತ್ಪಾದನೆ ಹಾಗೂ ನೀರು ಸಂಗ್ರಹಕ್ಕೂ ಕ್ರಮ ಕೈಗೊಳ್ಳಲು ಯೋಜನೆಯನ್ನು ಶೀಘ್ರ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಹಾಸನ ಏರ್ ಪೋರ್ಟ್ ಗೆ ಯಾವುದೇ ಹೆಸರಿಡುವ ಪ್ರಸ್ತಾಪ ಇಲ್ಲ:
ಹಾಸನದಲ್ಲಿ ನಿರ್ಮಾಣವಾಗಿರುವ ಏರ್ ಪೋರ್ಟ್ ಗೆ ಯಾವುದೇ ಹೆಸರಿಡುವ ಪ್ರಸ್ತಾಪ ನಡೆದಿಲ್ಲ. ಹಾಸನ ಏರ್‌ಪೋರ್ಟ್ ಅಂತಲೇ ಕರೆಯಬಹುದು. ರಾಜ್ಯದ ವಿವಿಧ ನಗರಗಳಲ್ಲಿರುವ ಏರ್‌ಪೋರ್ಟ್ಗಳಿಗೂ ಯಾವುದೇ ಹೆಸರಿಡುವ ಪ್ರಸ್ತಾಪವಾಗಿಲ್ಲ. ಇದುವರೆಗೂ ರಾಜ್ಯ ಸರ್ಕಾರದಲ್ಲಿ ಅಂಥ ಚರ್ಚೆಗಳು ನಡೆದಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಇದನ್ನೂ ಓದಿ:ಜಗತ್ತಿನ ಅತಿದೊಡ್ಡ ಹಾಗೂ ಭವ್ಯ ಸ್ಟೆಪ್ ವೆಲ್ ‘ಚಾಂದ್ ಬಾವೊರಿ’..!

ಪ್ರತಿಪಕ್ಷದವರು ಹೇಳಿಕೆ ನೀಡ್ತಾರೆ:
ಮೀಸಲಾತಿ ಹೋರಾಟದಲ್ಲಿ ಸಂಘರ್ಷಕ್ಕೆಡೆ ಮಾಡಿಕೊಡಬೇಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪ್ರತಿಪಕ್ಷದವರು ಹೇಳಿಕೆ ಕೊಡ್ತಾರೆ. ಯರ‍್ಯಾರು ಏನೇನು ಹೇಳಿಕೆ ಕೊಡಲಿ. ಆದರೆ ಸರ್ಕಾರ ಕಾನೂನು ಹಾಗೂ ವೈಜ್ಞಾನಿಕ ಬದ್ಧವಾಗಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಸಂಪನ್ಮೂಲ ಕ್ರೋಢೀಕರಣಕ್ಕೆ ಸೆಸ್:
ಕೊರೊನಾದಿಂದ ಖರ್ಚು ಹೆಚ್ಚಾಗಿದ್ದು, ಆದಾಯ ಕಡಿಮೆಯಾಗಿದೆ. ಆದ್ದರಿಂದ ಎಲ್ಲ ವಸ್ತುಗಳ ಮೇಲೆ ತೆರಿಗೆ ಹಾಕಿಲ್ಲ. ಕೆಲವೊಂದು ವಸ್ತುಗಳ ಮೇಲೆ ಮಾತ್ರ ಸೆಸ್ ಹಾಕಿದೆ. ಸಂಪನ್ಮೂಲ ಕ್ರೂಢೀಕರಣ ಮಾಡುವ ದೃಷ್ಟಿಯಿಂದ ಕೆಲವೊಂದು ಸೆಸ್ ಹಾಕಲಾಗಿದೆ. ಅವಶ್ಯಕತೆ ಇರುವ ಕಡೆ ಮಾತ್ರ ಆಗಿದೆ ಎಂದು ಬಿಜೆಪಿ ಸರ್ಕಾರ ಜನರ ಮೇಲೆ ಸೆಸ್ ಹಾಕುವ ಮೂಲಕ ಒತ್ತಡ ಹೇರುತ್ತಿದೆ ಎಂದು ಎಚ್.ಡಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಅತಿಥಿ ಉಪನ್ಯಾಸಕರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ:
ಪದವಿ ಪೂರ್ವ ಕಾಲೇಜುಗಳಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಅವಶ್ಯಕತೆ ಇರುವಷ್ಟು ಕಡೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲವನ್ನು ನೋಡಿಕೊಂಡು ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ವಿಶ್ವವಿದ್ಯಾಲಯಗಳ ಸ್ಥಾಪನೆ:
ಮಂಡ್ಯದ ಸರ್ಕಾರಿ ಮಹಾವಿದ್ಯಾಲಯ(ಸ್ವಾಯತ್ತ) ಕಾಲೇಜಿನಲ್ಲಿ ಶಿಕ್ಷಣ ಗುಣಮಟ್ಟ ಚೆನ್ನಾಗಿದ್ದ ಕಾರಣ ಅದನ್ನು ವಿಶ್ವವಿದ್ಯಾಲಯವನ್ನಾಗಿ ಮಾಡಲಾಗಿದೆ. ಹಲವಾರು ವರ್ಷಗಳಿಂದ ಬೇರೆಯವರು ಪ್ರಯತ್ನ ಮಾಡಿದ್ದರು. ಆದರೆ ಅದು ಆಗಿರಲಿಲ್ಲ. ನಾವು ಅದನ್ನು ವಿಶ್ವವಿದ್ಯಾಲಯವಾಗಿ ಮಾಡಿದ್ದೇವೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯವಿಲ್ಲ. ಅದನ್ನು ಮುಂದಿನ ದಿನಗಳಲ್ಲಿ ಜಾರಿಗೊಳಿಸಲಾಗುವುದು ಎಂದು ಹೇಳಿದರು.

ರಾಮ ಮಂದಿರದ ಲೆಕ್ಕೆ ಕೊಡುತ್ತೇವೆ:
ರಾಮಮಂದಿರ ನಿರ್ಮಾಣಕ್ಕೆ ಸಾರ್ವಜನಿಕರು ನೀಡುತ್ತಿರುವ ದೇಣಿಗೆಯ ಲೆಕ್ಕವನ್ನು ಕೊಡುತ್ತೇವೆ. ಎಚ್.ಡಿ.ಕುಮಾರಸ್ವಾಮಿ ಅವರು, ದೇಣಿಗೆ ಸಂಗ್ರಹಿಸುವವರು ಗುಂಡಾಗಳು ಎಂದು ಹೇಳಿದ್ದಾರೆ. ಅದು ಆಧಾರರಹಿತ ಆರೋಪವಾಗಿದೆ. ಇದರಲ್ಲಿ ಯಾವುದೇ ತಿರುಳಿಲ್ಲ ಎಂದರು.

ಮಾಜಿ ಸಂಸದ ಜಿ.ಮಾದೇಗೌಡ, ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಅಮರಾವತಿ ಚಂದ್ರಶೇಖರ್, ಅಶ್ವಥ್, ನಾಗರಾಜು ಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.