ಕೆಇಎ ಎಡವಟ್ಟು: ಎಂಜಿನಿಯರಿಂಗ್ ಸೀಟು ಆಕಾಂಕ್ಷಿಗಳ ಪ್ರವೇಶಕ್ಕೆ ಅಡ್ಡಿ
Team Udayavani, Nov 30, 2022, 6:35 AM IST
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಲಕ್ಷ್ಯದಿಂದ ಸಾವಿರಾರು ಎಂಜಿನಿಯರಿಂಗ್ ಸೀಟು ಆಕಾಂಕ್ಷಿಗಳ ಪ್ರವೇಶಕ್ಕೆ ಅಡ್ಡಿಯಾಗಿದೆ. ಇದರ ಬೆನ್ನಲ್ಲೇ ಸೀಟು ವಂಚಿತ ವಿದ್ಯಾರ್ಥಿಗಳು ಮಲ್ಲೇಶ್ವರದ ಕೆಇಎ ಕಚೇರಿ ಮುಂದೆ ನ್ಯಾಯ ಕೊಡಿಸುವಂತೆ ಆಕ್ರೋಶ ಹೊರ ಹಾಕಿದರು.
ಸಿಇಟಿ ಕೌನ್ಸೆಲಿಂಗ್‌ನಲ್ಲಿ ಕೆಲ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಸೀಟು ಆಯ್ಕೆ ಮಾಡಿ ಶುಲ್ಕವನ್ನೂ ಪಾವತಿಸಿದ್ದರು. ನೀಟ್ ರ್‍ಯಾಂಕಿಂಗ್‌ನಲ್ಲಿ ವೈದ್ಯಕೀಯ ಸೀಟು ಪ್ರವೇಶಕ್ಕೆ ಅರ್ಹತೆ ಪಡೆದಾಗ ಕೆಇಎ ನಿಯಮದ ಅನುಸಾರವೇ ಎಂಜಿನಿಯರಿಂಗ್ ಸೀಟನ್ನು ಕಾಯ್ದಿರಿಸಿದ್ದರು. ಇದರ ಜತೆಗೆ ವೈದ್ಯಕೀಯ ಸೀಟು ಪ್ರವೇಶ ಕೌನ್ಸೆಲಿಂಗ್‌ನಲ್ಲೂ ಪಾಲ್ಗೊಂಡಿದ್ದರು. ಆದರೆ, ವೈದ್ಯಕೀಯ ಸೀಟು ಹಂಚಿಕೆಯಾದ ವಿದ್ಯಾರ್ಥಿಗಳು ಮೊದಲು ಕಾಯ್ದಿರಿಸಿದ್ದ ಎಂಜಿನಿಯರಿಂಗ್ ಸೀಟನ್ನು ಕೆಇಎ ತಂತಾನೇ ರದ್ದುಪಡಿಸಿದೆ.
ಕೆಇಎ ಎಡವಟ್ಟಿನಿಂದ ವೈದ್ಯಕೀಯ ಸೀಟು ಪ್ರವೇಶ ಪಡೆಯಲು ದುಬಾರಿ ಶುಲ್ಕ ಪಾವತಿಸಲು ಸಾಧ್ಯವಾಗದೇ ಇರುವ ಸಾವಿರಾರು ವಿದ್ಯಾರ್ಥಿಗಳು ಪುನಃ ಎಂಜಿನಿಯರಿಂಗ್ ಸೀಟು ಪಡೆಯಲು ಸಾಧ್ಯವಾಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಚಿವರಿಗೆ ಮನವಿ
ಆತಂಕಗೊಂಡಿರುವ ವಿದ್ಯಾರ್ಥಿಗಳು ಮಲ್ಲೇಶ್ವರದ ಕೆಇಎ ಕಚೇರಿ ಮುಂದೆ ಜಮಾಯಿಸಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಇದರ ಜತೆಗೆ, ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್. ಅಶ್ವತ್ಥ ನಾರಾಯಣ ಅವರಿಗೂ ಪತ್ರ ಬರೆದು ತಮಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ.
ವೈದ್ಯಕೀಯ ಕಾಲೇಜುಗಳೊಂದಿಗೆ ಶಾಮೀಲಾಗಿ ಅವರಿಗೆ ಅನುಕೂಲ ಮಾಡಿಕೊಡಲು ಕೆಇಎ ಈ ರೀತಿ ಮಾಡಿರುವ ಸಾಧ್ಯತೆಗಳಿವೆ. ಕೆಇಎ ನಿರ್ಲಕ್ಷ್ಯದಿಂದ ನಮ್ಮದಲ್ಲದ ತಪ್ಪಿಗೆ ಒಂದು ವರ್ಷ ವ್ಯರ್ಥವಾಗಲಿದೆ. ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ನೊಂದ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಹೊಸ ಸೇರ್ಪಡೆ
ಫೆ.11, 12: ನಮ್ಮ ಸಂತೆಯಲ್ಲಿ ನಿಮ್ಮ ಮಳಿಗೆಯೂ ಇರಲಿ
ಕುಡಿದು ಬಂದು ಪತ್ನಿಗೆ ಹಲ್ಲೆ,ನಿಂದನೆ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ FIR
ಚೀನಾದ ಗೂಢಚಾರಿಕೆ ಬಲೂನ್ ಹೊಡದುರುಳಿಸಿದ ಅಮೆರಿಕಾ: ಚೀನಾ ಆಕ್ರೋಶ
“ದೈವನರ್ತಕ’ರ ಮಾಸಾಶನ ಘೋಷಣೆಯಲ್ಲೇ ಬಾಕಿ? ಪ್ರತ್ಯೇಕ ಮಾರ್ಗಸೂಚಿ ಇಲ್ಲದೆ ಎದುರಾದ ತೊಡಕು
ಇನ್ನೂ ಜನಿಸದ ಕಂದಮ್ಮನಿಗಾಗಿ ಮಿಡಿದ ಸುಪ್ರೀಂಕೋರ್ಟ್!