ಬೆಂಗಳೂರಿನಲ್ಲಿ ಕೇಜ್ರಿವಾಲ್ ರಣಕಹಳೆ : ಕೋಡಿಹಳ್ಳಿ ಚಂದ್ರಶೇಖರ್ ಸಾಥ್

ಗೂಂಡಾಗಳು, ಲಫಂಗರು, ಅತ್ಯಾಚಾರಿಗಳ ಸರ್ಕಾರ ಬೇಕೆ?

Team Udayavani, Apr 21, 2022, 4:35 PM IST

1-sdfsdf

ಬೆಂಗಳೂರು: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಗುರುವಾರ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ರೈತರ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು. 40% ಸರ್ಕಾರವನ್ನು ಧಿಕ್ಕರಿಸಿ, ಆಮ್ ಆದ್ಮಿ ಪಾರ್ಟಿಯನ್ನು ಬೆಂಬಲಿಸಿ ಎಂದು ಕರೆ ನೀಡಿದರು.

ಬಿಜೆಪಿ ದೇಶದ ಎಲ್ಲೆಡೆ ದಂಗೆ, ಹಿಂಸಾಚಾರಗಳನ್ನು ಮಾಡಿಸುತ್ತಿದೆ. ನನ್ನ ಮನೆಯ ಮೇಲೆ ನಾನಿಲ್ಲದ ಸಮಯದಲ್ಲಿ, ನನ್ನ ವಯಸ್ಸಾದ ತಂದೆ ತಾಯಿ ಇದ್ದ ಸಂದರ್ಭದಲ್ಲಿ ದಾಳಿ ನಡೆಸಿದರು. ಇಂಥ ಗೂಂಡಾಗಳ ಸರ್ಕಾರ ನಿಮಗೆ ಬೇಕೆ ಎಂದು ಪ್ರಶ್ನಿಸಿದರು. ಉತ್ತರಪ್ರದೇಶದ ಲಖೀಂಪುರಖೇರಿಯಲ್ಲಿ ರೈತರ ಮೇಲೆ ವಾಹನ ಹತ್ತಿಸಿ ಕೊಂದವನ ತಂದೆಗೆ ಕೇಂದ್ರ ಸಚಿವ ಸ್ಥಾನ ನೀಡಿ ಗೌರವಿಸಲಾಯಿತು. ನೀಚರು, ಅತ್ಯಾಚಾರಿಗಳು, ಗೂಂಡಾಗಳಿಗೆ ಬಿಜೆಪಿಯಲ್ಲಿ ಗೌರವ, ಸ್ಥಾನಮಾನ ದೊರೆಯುತ್ತದೆ‌ ಎಂದು ಆರೋಪಿಸಿದರು.

ಜಮ್ಮುಕಾಶ್ಮೀರದಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಜೈಲಿನಿಂದ ಹೊರಗೆ ಬಂದಾಗ ಅವನನ್ನು ಶೋಭಾಯಾತ್ರೆಯಲ್ಲಿ ಮೆರವಣಿಗೆ ಮಾಡಿದ ಇತಿಹಾಸ ಬಿಜೆಪಿಯದ್ದು. ಅದು ಲಫಂಗರ, ಗೂಂಡಾಗಳ, ಅತ್ಯಾಚಾರಿಗಳ ಪಕ್ಷ ಎಂದು ನೇರ ವಾಗ್ದಾಳಿ ನಡೆಸಿದರು.

ನನಗೆ ರಾಜಕಾರಣ ಮಾಡಲು ಬರುವುದಿಲ್ಲ, ಒಳ್ಳೆಯ ಆಡಳಿತ ಮಾಡುವುದು ಮಾತ್ರ ಗೊತ್ತಿದೆ. ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ ಕ್ಷೇತ್ರಗಳನ್ನು ಹೇಗೆ ಅಭಿವೃದ್ಧಿಪಡಿಸೋದು ಎಂಬುದು ಗೊತ್ತಿದೆ. ಹೀಗಾಗಿಯೇ ದೆಹಲಿಯ ಚಿತ್ರಣವನ್ನೇ ಬದಲಿಸಿದ್ದೇನೆ ಎಂದರು.

ದೆಹಲಿಯಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿದ್ದೇವೆ. ಈ ವರ್ಷ ಖಾಸಗಿ ಶಾಲೆಗಳಲ್ಲಿ ಓದುತ್ತಿದ್ದ ನಾಲ್ಕು ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗೆ ಸೇರಿಕೊಂಡಿದ್ದಾರೆ. ಸಾಧಾರಣ ಜ್ವರದಿಂದ ಹಿಡಿದು ಕಿಡ್ನಿ ಟ್ರಾನ್ಸ್ ಪ್ಲಾಂಟ್ ನಂಥ ದುಬಾರಿ ಚಿಕಿತ್ಸೆಯೂ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ, ಒಂದು ರುಪಾಯಿ ಖರ್ಚಿಲ್ಲದೆ ಕೊಡುತ್ತಿದ್ದೇವೆ. ಜನರು ಖಾಸಗಿ ಆಸ್ಪತ್ರೆಗಳಿಗೆ ಹೋಗುವುದನ್ನೇ ಬಿಟ್ಟಿದ್ದಾರೆ. ದೆಹಲಿಯಲ್ಲಿ ಜನರಿಗೆ ಉಚಿತ ವಿದ್ಯುತ್ ಕೊಡುತ್ತಿದ್ದೇವೆ, ಉಚಿತ ನೀರು ನೀಡುತ್ತಿದ್ದೇವೆ. ಇದಲ್ಲದೆ ಮಹಿಳೆಯರಿಗೆ ಸಂಚಾರ ವ್ಯವಸ್ಥೆಯನ್ನು ಉಚಿತಗೊಳಿಸಿದ್ದೇವೆ. ಇದು ಎಎಪಿ ಮಾಡಿದ ಮ್ಯಾಜಿಕ್.‌ ಇದೆಲ್ಲ ಹೇಗೆ ಸಾಧ್ಯವಾಯಿತೆಂದು ನೀವು ಪ್ರಶ್ನಿಸಬಹುದು. ನಾವು ಲಂಚದ ಹಣ ತಿನ್ನೋದಿಲ್ಲ, ನಮ್ಮದು ಅತ್ಯಂತ ಪ್ರಾಮಾಣಿಕ ಸರ್ಕಾರ. ಹಣ ಉಳಿಸುವುದು ಹೇಗೆ ಎಂಬುದು ನಮಗೆ ಗೊತ್ತಿದೆ. ಹೀಗಾಗಿಯೇ ಈ ಮ್ಯಾಜಿಕ್ ಮಾಡಿದ್ದೇವೆ, ಇದು ಕರ್ನಾಟಕಕ್ಕೂ ಬೇಡವೇ ಎಂದು ಅವರು ಪ್ರಶ್ನಿಸಿದರು.

ಕರ್ನಾಟಕದಲ್ಲಿ ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರ 20% ಕಮಿಷನ್ ಸರ್ಕಾರ ಎಂದು ಹೆಸರಾಗಿತ್ತು. ಈಗಿನ ಬಿಜೆಪಿ ಸರ್ಕಾರ 40% ಸರ್ಕಾರ ಎಂದು ಹೆಸರಾಗಿದೆ. ಇವರನ್ನೆಲ್ಲ ಈಗ ಮನೆಗೆ ಕಳುಹಿಸುವ ಕಾಲ ಹತ್ತಿರವಾಗಿದೆ. ದೆಹಲಿ, ಪಂಜಾಬ್ ನಲ್ಲಿ ಆಗಿದ್ದನ್ನು ಕರ್ನಾಟಕದಲ್ಲೂ ಮಾಡೋಣ. ಇಲ್ಲಿನ ರಾಜಕಾರಣವನ್ನು ಬದಲಿಸೋಣ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರನ್ನು ಎಎಪಿಗೆ ಬರಮಾಡಿಕೊಂಡ ಕೇಜ್ರಿವಾಲ್, 75 ವರ್ಷಗಳಿಂದ ರೈತರಿಗೆ ಎಲ್ಲ ಪಕ್ಷಗಳೂ ವಂಚಿಸುತ್ತ ಬಂದಿವೆ. ಈಗ ನೀವೇ ರಾಜಕೀಯಕ್ಕೆ ಬಂದು ನೀವು ಆಡಳಿತ ನಡೆಸಿ ಎಂದು ದೇಶದ ರೈತರಿಗೆ ಕರೆ ನೀಡಿದರು.

ಎಎಪಿ ರಾಜ್ಯ ಸಂಚಾಲಕ ಪ್ರಥ್ವಿ ರೆಡ್ಡಿ ಸೇರಿದಂತೆ ರೈತ ಸಂಘ ಮತ್ತು ಎಎಪಿಯ ರಾಜ್ಯ ಮುಖಂಡರು ಈ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ರೈತರು ಈ ಸಮಾವೇಶದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.