ವರದಕ್ಷಿಣೆ ಕಿರುಕುಳ: ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ-ಪತಿ ಅಪರಾಧಿ: ಕೇರಳ ಕೋರ್ಟ್
ಮಂಗಳವಾರ (ಮೇ 24) ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವ ಸಾಧ್ಯತೆ ಇದೆ
Team Udayavani, May 23, 2022, 4:22 PM IST
ಕೊಲ್ಲಂ(ಕೇರಳ): ವರದಕ್ಷಿಣೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದು, ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಎಸ್.ಕಿರಣ್ ಕುಮಾರ್ ಅಪರಾಧಿ ಎಂದು ಕೇರಳ ಕೋರ್ಟ್ ಸೋಮವಾರ (ಮೇ 23) ತೀರ್ಪು ನೀಡಿದೆ.
ಇದನ್ನೂ ಓದಿ:ಶಿವಮೊಗ್ಗ: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ
ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ವರದಕ್ಷಿಣೆ ನಿಷೇಧ ಕಾಯ್ದೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂನಡಿ ವಿಸ್ಮಯ ಪತಿಯನ್ನು ಅಪರಾಧಿ ಎಂಬುದಾಗಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸುಜೀತ್ ಕೆಎನ್ ತೀರ್ಪು ನೀಡಿರುವುದಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ.ಮೋಹನ್ ರಾಜ್ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಪ್ರಾಸಿಕ್ಯೂಷನ್ ಮತ್ತು ಅಪರಾಧಿ ಪರ ವಾದ, ಪ್ರತಿವಾದ ಆಲಿಸಿದ ನಂತರ ಮಂಗಳವಾರ (ಮೇ 24) ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೋಹನ್ ರಾಜ್ ಹೇಳಿದರು. ಅಪರಾಧಿ ಕಿರಣ್ ಕುಮಾರ್ ಗೆ ಗರಿಷ್ಠ ಪ್ರಮಾಣದ ಶಿಕ್ಷೆಯನ್ನು ವಿಧಿಸಬೇಕೆಂದು ಪ್ರಾಸಿಕ್ಯೂಷನ್ ವಾದ ಮಂಡಿಸಲಿದೆ ಎಂದು ತಿಳಿಸಿದ್ದಾರೆ.
ಇದೊಂದು ಸಾಮಾಜಿಕ ಅನಿಷ್ಟದ ವಿರುದ್ಧದ ತೀರ್ಪು, ಕೇವಲ ಒಬ್ಬ ವ್ಯಕ್ತಿಯ ವಿರುದ್ಧವಲ್ಲ ಎಂದು ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ವರದಕ್ಷಿಣೆ ಸಾವಿನ ಪ್ರಕರಣದಲ್ಲಿ ಕನಿಷ್ಠ ಏಳು ವರ್ಷ ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸಬಹುದಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗನ್ನಾಥ ರಥಯಾತ್ರೆ ಈಗ ಅಬಾಧಿತ: ಕೇಂದ್ರ ಗೃಹ ಸಚಿವ ಅಮಿತ್ ಶಾ
ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮುಗೆ ಶಿರೋಮಣಿ ಅಕಾಲಿದಳ ಬೆಂಬಲ: ರಾಗ ಬದಲಿಸಿದ ದೀದಿ
ಏಕಬಳಕೆ ಪ್ಲಾಸ್ಟಿಕ್ ನಿಷೇಧ: ದಿಲ್ಲಿಯಲ್ಲಿ ಲಕ್ಷ ರೂ. ದಂಡ: ಸಚಿವ ಗೋಪಾಲ್ ರೈ
ಗೋವಾ ಕಾರವಾರ ಗಡಿಯಲ್ಲಿ ಹಿಮ್ಮುಖವಾಗಿ ಚಲಿಸಿ ಕಂದಕಕ್ಕೆ ಬಿದ್ದ ಟ್ರಕ್
ಆದಾಯ ತೆರಿಗೆ ಇಲಾಖೆಯಿಂದ “ಲವ್ ಲೆಟರ್” ಬಂದಿದೆ…ಎನ್ ಸಿಪಿ ವರಿಷ್ಠ ಶರದ್ ಪವಾರ್ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ಮೇ ತಿಂಗಳಲ್ಲಿ19 ಲಕ್ಷ ವಾಟ್ಸ್ಆ್ಯಪ್ ಖಾತೆ ಬ್ಯಾನ್
ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಹೈಕೋರ್ಟ್ ನೋಟಿಸ್
ಜಗನ್ನಾಥ ರಥಯಾತ್ರೆ ಈಗ ಅಬಾಧಿತ: ಕೇಂದ್ರ ಗೃಹ ಸಚಿವ ಅಮಿತ್ ಶಾ
ಗುತ್ತಿಗೆ ಪೌರಕಾರ್ಮಿಕರ ಖಾಯಂಗೆ ಒಪ್ಪಿಗೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
ಪಾಕಿಸ್ತಾನದಲ್ಲಿ ವಿದ್ಯುತ್ ಬಿಕ್ಕಟ್ಟು: ಮೊಬೈಲ್, ಇಂಟರ್ನೆಟ್ ಸೇವೆ ಸ್ಥಗಿತ?