ಕೆಎಂಎಫ್ ಅಗ್ರ ಸೇವೆ : ಬಾಲಚಂದ್ರ ಜಾರಕಿಹೊಳಿಗೆ ಅಮಿತ್ ಶಾರಿಂದ ಪ್ರಶಸ್ತಿ

Team Udayavani, Apr 10, 2022, 7:28 PM IST

1-awdas

ಬೆಂಗಳೂರು: ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ ( ಎನ್ ಸಿಡಿಎಫ್ಐ) ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸುಸಂದರ್ಭದಲ್ಲಿ ಹಾಲು ಮತ್ತು ಹಾಲಿನ ಉತ್ಪಾದನೆ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ‘ಕೆಎಂಎಫ್’ ಗೆ ಪ್ರಶಸ್ತಿಯ ಭಾಗ್ಯ ಒಲಿದು ಬಂದಿದೆ.

ಭಾನುವಾರ ಗುಜರಾತ್ ನ ಗಾಂಧಿ ನಗರದಲ್ಲಿ ಎನ್ ಸಿಡಿಎಫ್ಐ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಅಮಿತ್ ಶಾ, ದೇಶದಲ್ಲಿಗ ಅಮೂಲ್ ಸಂಸ್ಥೆ ಮೊದಲ ಸ್ಥಾನದಲ್ಲಿದೆ. ಕರ್ನಾಟಕದ ಕೆಎಂಎಫ್ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಕರ್ನಾಟಕವಲ್ಲದೇ ನೆರೆಯ ಬಹುತೇಕ ರಾಜ್ಯಗಳಲ್ಲಿಯೂ ‘ನಂದಿನಿ’ ಬ್ರಾಂಡ್ ಹೆಸರಿನಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಳನ್ನು ರೈತ ಸಮುದಾಯಕ್ಕೆ ನೀಡುತ್ತಿದೆ. ಈ ಮೂಲಕ ಹೈನು ಉದ್ಯಮ ಬೆಳೆಯಲು ಈ ಸಂಸ್ಥೆಯು ಹೆಚ್ಚು ಸಹಕಾರಿಯಾಗಿದೆ. ತಮಿಳುನಾಡಿನಲ್ಲಿ ಸಹ ಸಹಕಾರಿ ಸಂಘಗಳು ಬೆಳೆಯಬೇಕಾಗಿದೆ. ದೇಶದಾದ್ಯಂತ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ‌. ಮಹಿಳೆಯರು ಸಹ ಈ ನಿಟ್ಟಿನಲ್ಲಿ ಮುಂದೆ ಬಂದು ಹೈನುಗಾರಿಕೆಗೆ ಪ್ರೋತ್ಸಾಹಿಸುವ ಕೆಲಸ ನಡೆಯಬೇಕಿದೆ. ಇದರಿಂದ ಹೈನುಗಾರಿಕೆ ಬೆಳೆಯಲು ಸಾಧ್ಯವಾಗುತ್ತದೆ. ಜತೆಗೆ ಆರ್ಥಿಕ ವಾಗಿ ಬಲಾಢ್ಯರಾಗಲು ಅನುಕೂಲವಾಗುತ್ತದೆ ಎಂದರು.

ದೇಶದಲ್ಲಿರುವ ಎಲ್ಲ ಸಹಕಾರಿ ಸಂಸ್ಥೆಗಳು ತಮ್ಮ ದೈನಂದಿನ ದುಂದುವೆಚ್ಚಗಳಿಗೆ ಇತಿಶ್ರೀ ಹಾಡಬೇಕಿದೆ. ಹೈನುಗಾರಿಕೆ ಉದ್ಯಮ ಬೆಳೆಯಲು ರೈತರ ಆರ್ಥಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸಬೇಕು. ಕೃಷಿ ಪ್ರಧಾನವಾಗಿರುವ ಭಾರತದಲ್ಲಿ ಇದೇ ವರ್ಷ 40ನೇ ಅಂತಾರಾಷ್ಟ್ರೀಯ ಹೈನುಗಾರಿಕೆ ಸಮ್ಮೇಳನವನ್ನು ಉದ್ದೇಶಿಸಲು ನಿರ್ಧರಿಸಲಾಗಿದೆ ಎಂದು ಅಮಿತ್ ಶಾ ತಿಳಿಸಿದರು.

ಎನ್ ಸಿ ಡಿಎಫ್ಐ ಕಳೆದ ಐದು ವರ್ಷದ ಅವಧಿಯಲ್ಲಿ ಸುಮಾರು ಐದು ಸಾವಿರ ಕೋ.ರೂ ಅಧಿಕ ವ್ಯವಹಾರಗಳನ್ನು ನಡೆಸಿದ್ದು, ಇದರಲ್ಲಿ ಕರ್ನಾಟಕದ ಕೆಎಂಎಫ್ ಈ ಸಂಸ್ಥೆಗೆ ಸುಮಾರು 2400 ಕೋಟಿ ರೂಪಾಯಿ ವ್ಯಾಪಾರ ವಹಿವಾಟು ನಡೆಸಿದ್ದರಿಂದ ಕೆಎಂಎಫ್ ನಂದಿನಿ ಬ್ರಾಂಡ್ ಗೆ ಪ್ರಶಸ್ತಿ ನೀಡಿ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಳವು ಗೌರವಿಸಿದೆ.

ದೇಶದ ವಿವಿಧ ರಾಜ್ಯಗಳ ಸಹಕಾರಿಗಳು, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.