ಕೊಚ್ಚಿ- ಮಂಗಳೂರು ನ್ಯಾಚುರಲ್ ಗ್ಯಾಸ್ ಪೈಪ್ ಲೈನ್ ಗೆ ಪ್ರಧಾನಿಯಿಂದ ಚಾಲನೆ
Team Udayavani, Jan 5, 2021, 11:22 AM IST
ಮಂಗಳೂರು: ಬಹು ನಿರೀಕ್ಷಿತ ಕೊಚ್ಚಿ-ಮಂಗಳೂರು (450 ಕಿ.ಮೀ.) ಮಧ್ಯೆ ಗೈಲ್ ಪೈಪ್ಲೈನ್ನಲ್ಲಿ ನೈಸರ್ಗಿಕ ಅನಿಲ ಸರಬರಾಜು ಮಾಡುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆನ್ಲೈನ್ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ, ಕೇರಳ ರಾಜ್ಯಪಾಲರು, ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಪೆಟ್ರೋಲಿಯಂ ಸಚಿವರು ಭಾಗಿಯಾಗಿದ್ದರು.
ರಾಜ್ಯದ ಏಕೈಕ ರಸಗೊಬ್ಬರ ಕಾರ್ಖಾನೆ ಮಂಗಳೂರಿನ ಎಂಸಿಎಫ್ನಲ್ಲಿ ಸೀಮಿತ ಅತಿಥಿಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನೂ ಆಯೋಜಿಸಲಾಗಿತ್ತು. ಸಂಸದ ನಳಿನ್ ಕುಮಾರ್ ಕಟೀಲು, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಸೇರಿದಂತೆ ಗಣ್ಯರು ಭಾಗವಹಿಸಿದ್ದಾರೆ.
ಎಂಸಿಎಫ್ನಂತೆಯೇ ಅದೇ ಭಾಗದಿಂದ ಎಂಆರ್ಪಿಎಲ್ಗೂ ನೈಸರ್ಗಿಕ ಅನಿಲ ಸರಬರಾಜು ಮಾಡುವ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ. ವಾಹನಗಳ ಪೂರೈಕೆ (ಸಿಎನ್ಜಿ), ಗೃಹ ಬಳಕೆ (ಪಿಎನ್ಜಿ) ವಾಣಿಜ್ಯ ಬಳಕೆ ಹಾಗೂ ಕೈಗಾರಿಕೆಗಳ
ಬಳಕೆ ಎಂಬುದಾಗಿ ಬೇರ್ಪಡಿಸಿ ಗೇಲ್ ಸಂಸ್ಥೆಯು ಅನಿಲ ಪೂರೈಕೆ ಮಾಡಲಿದ್ದು, ಇದಕ್ಕಾಗಿ ಸದ್ಯ ನೋಂದಣಿ ನಡೆಯುತ್ತಿದೆ.
ತಿಂಗಳಿಗೆ 60 ಕೋ.ರೂ!
ನೈಸರ್ಗಿಕ ಅನಿಲವನ್ನು ಎಂಸಿಎಫ್ ಸಂಸ್ಥೆ ನ. 23ರಂದು ಸಾಂಕೇತಿಕವಾಗಿ ಪಡೆದುಕೊಂಡಿದೆ. ಡಿ. 15ರಿಂದ ಪೂರ್ಣ ಸಾಮರ್ಥ್ಯದೊಂದಿಗೆ ಗ್ಯಾಸ್ ಮೂಲಕವೇ ಯೂರಿಯಾ ಉತ್ಪಾದಿಸುತ್ತಿದೆ. ನೈಸರ್ಗಿಕ ಅನಿಲವು ಅಧಿಕ ಇಂಧನ ದಕ್ಷತೆ ಹೊಂದಿದೆ
ಹಾಗೂ ಪರಿಸರ ಸ್ನೇಹಿಯಾಗಿದೆ. ಸದ್ಯ ಪ್ರತೀ ದಿನ 8 ಲಕ್ಷ ಕ್ಯು.ಮೀ. ನೈಸರ್ಗಿಕ ಅನಿಲವನ್ನು ಎಂಸಿಎಫ್ ಪಡೆದುಕೊಳ್ಳುತ್ತಿದ್ದು, ತಿಂಗಳಿಗೆ 60 ಕೋ.ರೂ. ವೆಚ್ಚವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ