ಅಕ್ಟೋಬರ್‌ 28 ರಂದು ವಿನೂತನ ಕೋಟಿ ಕಂಠ ಗಾಯನ: ಸಚಿವ ಸುನಿಲ್‌ ಕುಮಾರ್

Team Udayavani, Oct 6, 2022, 4:11 PM IST

ಸಚಿವ ಸುನಿಲ್‌ ಕುಮಾರ್

ಬೆಂಗಳೂರು: ರಾಜ್ಯದ ಸಾಂಸ್ಕೃತಿಕ ಲೋಕದಲ್ಲೇ ವಿನೂತನವಾದ ಕೋಟಿ ಕಂಠ ಗಾಯನ ಎಂಬ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದು ಅಕ್ಟೋಬರ್‌ 28ರಂದು ನಾಡಿನಾದ್ಯಂತ ಏಕಕಾಲದಲ್ಲಿ ಕನ್ನಡದ ಕವಿಗಳ ಜನಪ್ರಿಯ ಗೀತೆಗಳನ್ನು ಕೋಟಿ ಕಂಠಗಳಲ್ಲಿ ಪ್ರಸ್ತುತಪಡಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.

ಕಳೆದ ವರ್ಷ ‘ಮಾತಾಡ್‌ ಮಾತಾಡ್‌ ಕನ್ನಡ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ‘ಲಕ್ಷಕಂಠ ಗಾಯನ’ಕ್ಕೆ ಈಗಾಗಲೇ ನಾಡಿನಾದ್ಯಂತ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಹೀಗಾಗಿ ರಾಜ್ಯೋತ್ಸವ ಪ್ರಯುಕ್ತ ಮತ್ತೆ ಈ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೋಟಿ ಕಂಠ ಗಾಯನ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ.

ಅಂದು ಏಕಕಾಲದಲ್ಲಿ ರಾಜ್ಯಾದ್ಯಂತ ಕೋಟಿ ಕಂಠಗಳಲ್ಲಿ ಕನ್ನಡ ಗೀತೆಗಳನ್ನು ಪ್ರಸ್ತುತಪಡಿಸುವ ಮಹತ್ವದ ನಿರ್ಧಾರವನ್ನು ನಮ್ಮ ಇಲಾಖೆ ತೆಗೆದುಕೊಂಡಿದೆ. ಕನ್ನಡಿಗರು, ಅನಿವಾಸಿ ಕನ್ನಡಿಗರು, ಹೊರನಾಡ ಕನ್ನಡಿಗರು ಹಾಗೂ ಗಡಿನಾಡ ಕನ್ನಡಿಗರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದು, ಪ್ರಪಂಚದಾದ್ಯಂತ ಕನ್ನಡದ ಕಂಪನ್ನು ಪಸರಿಸುವ ವಿನೂತನ ಕಾರ್ಯಕ್ರಮ ಇದಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್‌ 28ರಂದು ಬೆಳಗ್ಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ’ , ಡಾ.ಚನ್ನವೀರ ಕಣವಿ ಅವರ ‘ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ “, ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವಾ“, ಡಾ.ಡಿ.ಎಸ್.ಕರ್ಕಿಯವರ “ಹಚ್ಚೇವು ಕನ್ನಡದ ದೀಪ “ ಹಾಗೂ ಡಾ. ಹಂಸಲೇಖ ಅವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು“ ಎಂಬ ಐದು ಗೀತೆಗಳನ್ನು ಕೋಟಿ ಕಂಠಗಳಲ್ಲಿ ಹಾಡಲಾಗುತ್ತದೆ. ಇದನ್ನು ಹೊರತುಪಡಿಸಿಯೂ ಆಸಕ್ತರು ಬೇರೆ ಕನ್ನಡ ಗೀತೆಗಳನ್ನು ಸಮಯದ ಮಿತಿ ಆಧರಿಸಿ ಪ್ರಸ್ತುಪಡಿಸಬಹುದಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:”ಬನಾರಸ್”ಹಕ್ಕು ಪಡೆದ ಕೇರಳದ ಖ್ಯಾತ ವಿತರಣಾ ಸಂಸ್ಥೆ ಮುಲಕುಪ್ಪಡಮ್!

ಈ ಅಭಿಯಾನ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸರಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳು, ತಾಲೂಕು ಕೇಂದ್ರಗಳು, ದೆಹಲಿ ಕನ್ನಡ ಸಂಘ, ಹೊರನಾಡು, ಗಡಿನಾಡ ಸಂಘಗಳ ಕಚೇರಿ, ವಿಧಾನಸೌಧದ ಮೆಟ್ಟಿಲು ಹಾಗೂ ವಿಧಾನಸೌಧ-ವಿಕಾಸ ಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆ ಎದುರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸಮೂಹ ಗಾಯನ ನಡೆಸುವರು.

ಅದೇ ರೀತಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮೆಜೆಸ್ಟಿಕ್‌ ರೈಲು ನಿಲ್ದಾಣ, ಮೆಟ್ರೋ ನಿಲ್ದಾಣದಲ್ಲೂ ಈ ಐದು ಕನ್ನಡ ಗೀತೆಗಳನ್ನು ಹಾಡುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಡಿನ ಪ್ರಮುಖ ಪ್ರವಾಸಿ ಸ್ಥಾನಗಳು, ಕೋಟೆಗಳು, ಕಡಲತೀರ, ಐಟಿ ಕಂಪನಿಗಳು, ಆಸ್ಪತ್ರೆ ಹಾಗೂ ಜಿಲ್ಲಾ ಕೇಂದ್ರಗಳಲ್ಲೂ ಕೋಟಿ ಕಂಠ ಗಾಯನ ಅಭಿಯಾನ ನಡೆಯಲಿದ್ದು, ಸಮಸ್ತ ಕನ್ನಡಿಗರು ಅಭಿಮಾನ ಪೂರ್ವಕವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ನಾನು ಮನವಿ ಮಾಡುತ್ತೇನೆ.

ಈ ಕಾರ್ಯಕ್ರಮದಲ್ಲಿ ಕನ್ನಡದ ಪ್ರಮುಖ ಸಾಧಕರು, ಮಠಾಧೀಶರು, ಸಾಹಿತಿಗಳು, ಕವಿಗಳು, ವಿದ್ಯಾರ್ಥಿ ಸಂಘಟನೆಗಳೂ ಭಾಗಿಯಾಗಲಿದ್ದು, ಕನ್ನಡದ ಅಸ್ಮಿತೆಯ ಅನಾವರಣ ಕಾರ್ಯದಲ್ಲಿ ತಾವೆಲ್ಲರೂ ಭಾಗಿಯಾಗುವಂತೆ ಕೋರುತ್ತೇನೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.