
ಏಳು ಜನ್ಮ ಎತ್ತಿದರೂ ಕಾಂಗ್ರೆಸ್ ಮುಕ್ತ ರಾಜ್ಯ ಮಾಡಲಾಗದು: ಡಿ ಕೆ ಶಿವಕುಮಾರ್ ಗುಡುಗು
‘ಬಿಜೆಪಿ ಎಂದರೆ ಬ್ಲ್ಯಾಕ್ ಮೇಲರ್ಸ್ ಜನತಾ ಪಾರ್ಟಿ ಎಂದು ಅವರ ಪಕ್ಷದವರೇ ಹೇಳುತ್ತಾರೆ’
Team Udayavani, Jan 14, 2021, 3:33 PM IST

ಬೆಂಗಳೂರು: ಬಿಜೆಪಿ ಜನಸೇವಕ ಸಮಾವೇಶದಲ್ಲಿ ಕಾಂಗ್ರೆಸ್ ದೇಶಕ್ಕೆ ಮಾರಕ ಎಂದು ಯಡಿಯೂರಪ್ಪ ಹೇಳಿದ್ದಾರೆ. ಪಾಪ ಅವರಿಗೆ ಅವರ ಪಕ್ಷದಲ್ಲಿರುವವರ ಇತಿಹಾಸ ಗೊತ್ತಿಲ್ಲ. ಏಳು ಜನ್ಮ ಎತ್ತಿದರೂ ಕಾಂಗ್ರೆಸ್ ಮುಕ್ತ ರಾಜ್ಯ ಮಾಡಲಾಗದು ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರು ಹೇಳಿರುವ ಸಿಡಿ ವಿಚಾರವು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಎಂದರೆ ಭಾರತೀಯ ಜನತಾ ಪಾರ್ಟಿ ಅಲ್ಲ, ‘ಬ್ಲಾಕ್ ಮೇಲರ್ಸ್ ಜನತಾ ಪಾರ್ಟಿ’ ಇದನ್ನು ಬಿಜೆಪಿ ನಾಯಕರೇ ಹೇಳಿದ್ದಾರೆ ಎಂದು ಡಿಕೆಶಿ ಆರೋಪಿಸಿದರು.
ಇದನ್ನೂ ಓದಿ:ಹಣೆಯಲ್ಲಿ ಬರೆದಿದ್ದರೆ ಸಚಿವ ಸ್ಥಾನ ಸಿಗುತ್ತದೆ, ಇಲ್ಲಾಂದ್ರೆ ಇಲ್ಲ: ಮುನಿರತ್ನ
ಕೋವಿಡ್ ಸಂಕಷ್ಟದ ಸಮಯದಲ್ಲಿ ನಗರ ಸ್ಥಳೀಯ ಸಂಸ್ಥೆಯಲ್ಲಿ ತೆರಿಗೆ ಹಾಕುವ ಕಾನೂನು ತಂದಿರುವುದು ಜನರ ಸುಲಿಗೆ ಮಾಡುವ ಕ್ರಮ. ತಿಂಗಳಲ್ಲಿ ಮೂರು ಬಾರಿ ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆ ಆಗಿದೆ ಇವುಗಳನ್ನು ವಿರೋಧಿಸಿ ದೊಡ್ಡ ಪ್ರಮಾಣದ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.
ರೈತರಿಗೆ ಶಕ್ತಿ ತುಂಬಲು ಬೃಹತ್ ಕಾರ್ಯಕ್ರಮ ಕಾಂಗ್ರೆಸ್ ಹಮ್ಮಿಕೊಂಡಿದ್ದು ಜ. 20 ರಂದು ರಾಜಭವನ ಮುತ್ತಿಗೆ ಹಾಕಲಿದ್ದೇವೆ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
