ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರೋ ಗೊತ್ತಿಲ್ಲ, ಭವಿಷ್ಯ ಮಾತ್ರ ಸುಳ್ಳಾಗುತ್ತಿದೆ;ಈಶ್ವರಪ್ಪ
Team Udayavani, Jan 17, 2021, 4:59 PM IST
ಮೈಸೂರು : ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಸಿದ್ದರಾಮಯ್ಯನವರು ಪ್ರತಿ ಸಮಯದಲ್ಲೂ ಒಂದೊಂದು ದಿನಾಂಕವನ್ನು ಕೊಡುತ್ತಾ ಬರುತ್ತಿದ್ದಾರೆ ಅದ್ಯಾವಾಗ ಸಿದ್ದರಾಮಯ್ಯನವರು ಜ್ಯೋತಿಷ್ಯರಾಗಿದ್ದಾರೆ ಗೊತ್ತಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಏಪ್ರಿಲ್ ನಂತರ ಸಿಎಂ ಬದಲಾವಣೆ ಆಗುತ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ಸಚಿವ ಕೆ ಎಸ್ ಈಶ್ವರಪ್ಪ ಚಾಮುಂಡಿ ಬೆಟ್ಟದಲ್ಲಿ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಯಾವಾಗ ಜ್ಯೋತಿಷಿ ಆದರೋ ಗೊತ್ತಿಲ್ಲ. ಪ್ರತಿ ಸಮಯದಲ್ಲೂ ಒಂದೊಂದು ದಿನಾಂಕವನ್ನು ಕೊಡುತ್ತಾ ಬರುತ್ತಿದ್ದಾರೆ. ಈಗ ಏಪ್ರಿಲ್ ಎಂದು ಹೇಳುತ್ತಿದ್ದಾರೆ, ಅದು ಯಾವುದೂ ನಿಜ ಆಗಲ್ಲ, ಅವರ ಭವಿಷ್ಯ ಪ್ರತಿ ಬಾರಿಯೂ ಸುಳ್ಳಾಗುತ್ತದೆ. ಈಗ ಏಪ್ರಿಲ್, ಮೇ, ಜೂನ್ ಎಂದು ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಇನ್ನು, ಫೆಬ್ರವರಿ 7ರಂದು ಬೆಂಗಳೂರಿನಲ್ಲಿ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ 10 ಲಕ್ಷ ಜನ ಸೇರಲಿದ್ದಾರೆ. ಕಾಗಿನೆಲೆ ಸ್ವಾಮೀಜಿ ಸಮ್ಮುಖದಲ್ಲಿ ಸಮಾವೇಶ ನಡೆಯಲಿದೆ ಎಂದರು.
ಶೀಘ್ರವೇ, ನೂತನ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆ ಆದ ಸದಸ್ಯರಿಗೆ ತರಬೇತಿ ನೀಡಲಾಗುವುದು ಎಂದರು.
ಇದನ್ನೂ ಓದಿ:ದಿ.ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೈಸೂರು ಮೇಯರ್ ಸ್ಥಾನ ‘ಕೈ’ತಪ್ಪಲು ನಮ್ಮ ಪಕ್ಷದವರ ಹುನ್ನಾರವೇ ಕಾರಣ: ಯತೀಂದ್ರ ಆರೋಪ
ಆರೋಪಿಗಳ ಐಶಾರಾಮಿ ಕಾರು ಮಾರಾಟ ಪ್ರಕರಣ, ಕಬ್ಬಳ್ ರಾಜ್ ಸೇರಿ ಇಬ್ಬರು ಪೊಲೀಸರು ಅಮಾನತು
ಮಹಿಳೆಯನ್ನು ಕಟ್ಟಿಹಾಕಿ ಹಾಡಹಗಲೇ ದರೋಡೆಗೆ ಯತ್ನ: ಸಿನಿಮೀಯಾ ರೀತಿಯಲ್ಲಿ ನಡೆಯಿತು ಚೇಸಿಂಗ್
ವಿಜಯಾನಂದ ಕಾಶಪ್ಪನವರ್ ದೊಡ್ಡವರು ಅವರಷ್ಟು ದೊಡ್ಡ ನಾಯಕ ನಾನಲ್ಲ : ನಿರಾಣಿ
ಇಂದು ಸಿಎಂ ಯಡಿಯೂರಪ್ಪ ಹುಟ್ಟುಹಬ್ಬ: ಶುಭಾಶಯ ಕೋರಿದ ನರೇಂದ್ರ ಮೋದಿ, ನಡ್ಡಾ, ಶಾ