ಕ್ಷೇತ್ರ ಮಹಿಮೆ – ವಿಜಯಪುರ ಜಿಲ್ಲೆ: ತಂದೆ-ಮಗ, ಪತಿ- ಪತ್ನಿಗೆ ಸಿಕ್ಕಿತ್ತು ಸಚಿವ ಸ್ಥಾನ

Team Udayavani, Mar 18, 2023, 7:20 AM IST

vijaypur

ವಿಜಯಪುರ ಜಿಲ್ಲೆಯಲ್ಲಿ ರಾಜಕೀಯ ಪ್ರಭಾವಿ ಹಾಗೂ ಪ್ರತಿಷ್ಠೆ ಹೊಂದಿರುವ ಕೆಲವು ಕ್ಷೇತ್ರಗಳಲ್ಲಿ ಕುಟುಂಬ ರಾಜಕೀಯ ಹಾಗೂ ಅಧಿಕಾರದ ಭಾಗ್ಯ ಲಭಿಸುತ್ತಲೇ ಬಂದಿದೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌ ಪ್ರತಿನಿಧಿ ಸುವ ಬಬಲೇಶ್ವರ ಕ್ಷೇತ್ರ ಈ ಹಿಂದೆ ತಿಕೋಟಾ ಕ್ಷೇತ್ರವಾಗಿತ್ತು. ಈ ಕ್ಷೇತ್ರದಿಂದ ಎಂ.ಬಿ.ಪಾಟೀಲ್‌ ಅವರ ತಂದೆ ಬಿ.ಎಂ.ಪಾಟೀಲ್‌ 1962, 1983, 1985, 1989ರಲ್ಲಿ ಗೆದ್ದಿದ್ದರೂ ಅವರಿಗೆ ಸಚಿವರಾಗುವ ಭಾಗ್ಯ ಲಭಿಸಿರಲಿಲ್ಲ.

1967ರಲ್ಲಿ ವೀರೇಂದ್ರ ಪಾಟೀಲ್‌ ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದ್ದಾಗ ವಿಜಯಪುರ ನಗರ ಕ್ಷೇತ್ರದಿಂದ ಗೆದ್ದಿದ್ದ ಬಿ.ಎಂ.ಪಾಟೀಲ್‌ ಆರೋಗ್ಯ ಸಚಿವರಾಗಿದ್ದರು. ಅದಾದ ಬಳಿಕ ಬಿ.ಎಂ.ಪಾಟೀಲ್‌ ಅಕಾಲಿಕ ನಿಧನದಿಂದ ಅನಿರೀಕ್ಷಿತವಾಗಿ ರಾಜಕೀಯ ಪ್ರವೇಶಿಸಿದ ಪುತ್ರ ಎಂ.ಬಿ.ಪಾಟೀಲ್‌ ಬಬಲೇಶ್ವರ ಕ್ಷೇತ್ರದಿಂದ 2008ರಲ್ಲಿ ವಿಧಾನಸಭೆ ಪ್ರವೇಶಿಸಿದರು. 2008 ಹಾಗೂ 2013ರಲ್ಲಿ ಸತತವಾಗಿ ಗೆದ್ದಿದ್ದ ಅವರು ಸಿದ್ದರಾಮಯ್ಯ ಸರಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದರು. ಇದಾದ ಬಳಿಕ 2018ರಲ್ಲಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರದಲ್ಲಿ ಗೃಹ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರಕಾರ ಪತನದ ಬಳಿಕ ಎಂ.ಬಿ.ಪಾಟೀಲ್‌ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ, ರಾಜ್ಯ ರಾಜಕೀಯದಲ್ಲಿ ಪ್ರಭಾವಿ ನಾಯಕ ರಾಗಿಯೂ ಗುರುತಿಸಿಕೊಂಡಿದ್ದಾರೆ. ವಿಜಯಪುರ ನಗರ ಕ್ಷೇತ್ರವನ್ನು ಪ್ರತಿನಿಧಿ ಸಿದ್ದ ಬಿ.ಎಂ.ಪಾಟೀಲ್‌ ಹಾಗೂ ಅವರ ಮಗ ಬಬಲೇಶ್ವರ ಕ್ಷೇತ್ರವನ್ನು ಪ್ರತಿನಿಧಿ ಸುತ್ತಿರುವ ಎಂ.ಬಿ.ಪಾಟೀಲ್‌ ಸಚಿವರಾಗಿ ಸೇವೆ ಸಲ್ಲಿಸುವ ಮೂಲಕ ಜಿಲ್ಲೆಯಲ್ಲಿ ತಂದೆ-ಮಗ ಇಬ್ಬರೂ ಸಚಿವರಾದ ದಾಖಲೆ ನಿರ್ಮಿಸಿದ್ದಾರೆ.

ಇನ್ನು ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಜಿ.ಎಸ್‌.ದೇಶ್‌ಮುಖ್‌ ಜೆಡಿಎಸ್‌ನಿಂದ ಮುದ್ದೇಬಿಹಾಳ ಕ್ಷೇತ್ರದಲ್ಲಿ 1978, 1983 ಹಾಗೂ 1985ರಲ್ಲಿ ಸತತ ಮೂರು ಬಾರಿ ಗೆಲುವು ಸಾಧಿ ಸಿದ್ದರು. ರಾಮಕೃಷ್ಣ ಹೆಗಡೆ ಸರಕಾರದಲ್ಲಿ ಸಚಿವರಾಗಿದ್ದರು. ಜಿ.ಎಸ್‌.ದೇಶ್‌ಮುಖ್‌ ನಿಧನದ ಬಳಿಕ ರಾಜಕೀಯ ಪ್ರವೇಶಿಸಿದ ಅವರ ಪತ್ನಿ ವಿಮಲಾಬಾಯಿ ದೇಶ್‌ಮುಖ್‌ 1994ರಲ್ಲಿ ಶಾಸಕರಾಗಿ ಆಯ್ಕೆಯಾಗಿ, ಜನತಾದಳ ಸರಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವ ರಾಗಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿ ಪತಿ-ಪತ್ನಿ ಇಬ್ಬರೂ ಸಚಿವರಾಗಿದ್ದ ಹಿರಿಮೆ
ದೇಶ್‌ಮುಖ್‌ ದಂಪತಿ ಮೂಲಕ ದಾಖಲಾಗಿದೆ.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.