ಗೋವಾದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಟಾಳಕರ್ ಪುತ್ರನ ಅದ್ಧೂರಿ ಮದುವೆ
Team Udayavani, Nov 27, 2020, 9:11 PM IST
ಪಣಜಿ/ಬೆಳಗಾವಿ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ್ ಅವರ ಪುತ್ರ ಮೃಣಾಲ್ ಹಾಗೂ ಭದ್ರಾವತಿಯ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ.ಶಿವಕುಮಾರ ಪುತ್ರಿ ಡಾ|ಹೀತಾ ಅವರ ಮದುವೆ ಸಮಾರಂಭ ಕಡಲ ಕಿನಾರೆ ಗೋವಾದ ಲೀಲಾ ಪ್ಯಾಲೆಸ್ ರೆಸಾರ್ಟ್‌ನಲ್ಲಿ ಶುಕ್ರವಾರ ಅದ್ಧೂರಿಯಾಗಿ ನೆರವೇರಿತು.
ಮಹಾತ್ಮಗಾಂಧಿ ಸೇವಾ ಟ್ರಸ್ಟ್ ಸಂಸ್ಥಾಪಕ ವಿನಯ ಗುರೂಜಿ, ಬೆಳಗಾವಿ ಜಿಲ್ಲೆ ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ, ಶಾಸಕರಾದ ಯು.ಟಿ. ಖಾದರ್, ರಿಜ್ವಾನ್ ಅರ್ಷದ್, ಡಾ|ಅಂಜಲಿ ನಿಂಬಾಳಕರ್, ಭೈರತಿ ಸುರೇಶ, ಮಾಜಿ ಶಾಸಕ ಅಶೋಕ ಪಟ್ಟಣ, ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ ಸೇರಿ ಅನೇಕ ಗಣ್ಯರು, ಸಂಬಂಧಿಕರು ನವದಂಪತಿಗೆ ಶುಭ ಕೋರಿದರು.
ಇದನ್ನೂ ಓದಿ:ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡ ಮಹಿಳೆ; ಬಲೆ ಹೆಣೆದು ಬಂಧಿಸಿದ ಪೊಲೀಸರು
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444