ಜನವರಿ ಕೊನೆಯಲ್ಲಿ ಅದ್ದೂರಿ ಹಂಪಿ ಉತ್ಸವ: ಸಚಿವೆ ಶಶಿಕಲಾ ಜೊಲ್ಲೆ


Team Udayavani, Dec 5, 2022, 7:38 PM IST

hampi

ಹೊಸಪೇಟೆ (ವಿಜಯಗರ) :  ಜನವರಿ ತಿಂಗಳಾಂತ್ಯಕ್ಕೆ ಮೂರು ದಿನಗಳ ಕಾಲ ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ದತೆಯನ್ನು ನಡೆಸುವಂತೆ ಮುಜರಾಯಿ, ಹಜ್‌ ಮತ್ತು ವಕ್ಫ್‌ ಹಾಗೂ ವಿಜಯನಗರ ಜಿಲ್ಲಾ ಉಸ್ತವಾರಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ ನೀಡಿದರು.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಧಿಕಾರಿಗಳು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಹಂಪಿ ಉತ್ಸವವನ್ನು ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಯಿತು. ಈ ಮೊದಲು 2023 ರ ಜನವರಿ ತಿಂಗಳ 7 ಮತ್ತು 8 ರಂದು ಎರಡು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಅದೇ ಸಮಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದರಿಂದ ಕಾರ್ಯಕ್ರಮವನ್ನು ಜನವರಿ ತಿಂಗಳಾಂತ್ಯಕ್ಕೆ ಮುಂದೂಡಲು ತೀರ್ಮಾನಿಸಲಾಗಿದೆ. ಜನವರಿ 27,28 ಮತ್ತು 29 ರಂದು ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ದಿನಾಂಕವನ್ನು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ. ಆದರೆ, ಸನ್ಮಾನ್ಯ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.

ಅದ್ದೂರಿ ಆಚರಣೆ
ಕೋವಿಡ್‌ ಸಾಂಕ್ರಾಮಿಕದ ಕಾರಣ ಕಳೆದ ಎರಡು ವರ್ಷಗಳಿಂದ ಹಂಪಿ ಉತ್ಸವವನ್ನು ಆಯೋಜಿಸಲಾಗಿರಲಿಲ್ಲ. ಹೀಗಾಗಿ ಈ ಬಾರಿ ಕಳೆದ ಎಲ್ಲಾ ಹಂಪಿ ಉತ್ಸವಗಳಿಗಿಂತಲೂ ಅದ್ದೂರಿಯಾಗಿ ಆಚರಿಸಲಾಗುವುದು. ಮೂರು ದಿನಗಳ ಕಾಲ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಸಾರುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜನವರಿ ತಿಂಗಳಾಂತ್ಯಕ್ಕೆ ಯಾವುದೇ ಹಂಪಿ ಉತ್ಸವ ನಡೆಯಲೇಬೇಕು. ವಿಜಯನಗರ ಗತ ವೈಭವವನ್ನು ಮರುಸೃಷ್ಟಿಸುವ ರೀತಿಯಲ್ಲಿ ಉತ್ಸವ ಆಯೋಜಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಉತ್ಸವ ಆಚರಣೆಗೆ ಅನುದಾನ
ಈಗಾಗಲೇ 2021-22 ನೇ ಸಾಲಿನ ಹಂಪಿ ಉತ್ಸವ ಆಚರಣೆಯ ಸಲುವಾಗಿ ಕನ್ನಡ ಸಂಸ್ಕೃತಿ ಇಲಾಖೆಯಿಂದ 4.10 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿರುತ್ತದೆ. ಇನ್ನೂ ಹೆಚ್ಚಿನ ಅನುದಾನದ ಅಗತ್ಯವಿದೆ. 6 ಕೋಟಿ ರೂಪಾಯಿಗಳ ಅನುದಾನ ನೀಡುವಂತೆ ಪ್ರವಾಸೋದ್ಯಮ ಇಲಾಖೆಗೆ ಪತ್ರ ಬರೆಯಲಾಗಿದೆ.  ಅಗತ್ಯ ಅನುದಾನವನ್ನು ನೀಡುವಂತೆ ಈಗಾಗಲೇ ಸರಕಾರದ ವಿವಿಧ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಇದಲ್ಲದೆ ಖಾಸಗಿ ಕಂಪನಿಗಳ ಸಿಎಸ್‌ಆರ್‌ ನಿಧಿಯನ್ನು ನೀಡುವಂತೆ ಕೋರಲಾಗುವುದು ಎಂದರು.

2 ಮುಖ್ಯ ವೇದಿಕೆ
ಈ ಬಾರಿ 2 ಭವ್ಯ ಮುಖ್ಯ ವೇದಿಕೆಗಳನ್ನು ನಿರ್ಮಿಸಲು ಯೋಜಿಸಲಾಗಿದ್ದು, ಕಲಾವಿದರುಗಳ ಲಭ್ಯತೆ ಹಾಗೂ ಕಾರ್ಯಕ್ರಮಗಳ ಸೇರ್ಪಡೆಯ ಮೇಲೆ ಇನ್ನೂ 2 ಉಪ ವೇದಿಕೆಗಳನ್ನು ಸೇರ್ಪಡಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.