ರಷ್ಯಾ, ಉಕ್ರೇನ್ ಯುದ್ಧ: ಕೂಡಲೇ ಕೀವ್ ಬಿಟ್ಟು ಹೊರಡಿ: ಭಾರತೀಯರಿಗೆ ರಾಯಭಾರಿ ಕಚೇರಿ ಮನವಿ
ಜನರನ್ನು ತಾಯ್ನಾಡಿಗೆ ಕರೆತರಲು ಭಾರತ ಸರ್ಕಾರ ಎಲ್ಲಾ ರೀತಿಯಿಂದಲೂ ಪ್ರಯತ್ನಿಸುತ್ತಿರುವುದಾಗಿ ವರದಿ ವಿವರಿಸಿದೆ.
Team Udayavani, Mar 1, 2022, 4:37 PM IST
ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ತೀವ್ರಗೊಳ್ಳುತ್ತಿರುವ ನಡುವೆಯೇ ವಿದ್ಯಾರ್ಥಿಗಳು ಸೇರಿದಂತೆ ಭಾರತದ ಪ್ರಜೆಗಳು ಕೂಡಲೇ ಉಕ್ರೇನ್ ರಾಜಧಾನಿ ಕೀವ್ ನಗರ ಬಿಟ್ಟು ಹೊರಡುವಂತೆ ಕೀವ್ ನಲ್ಲಿರುವ ಭಾರತದ ರಾಯಭಾರಿ ಕಚೇರಿ ಮಂಗಳವಾರ (ಮಾರ್ಚ್ 01) ಹೊಸ ಮಾರ್ಗಸೂಚಿ ಹೊರಡಿಸಿದೆ.
ಇದನ್ನೂ ಓದಿ:ಇಂದು ಬೆಳಗ್ಗೆ ಮಗ ಕರೆ ಮಾಡಿದ್ದ…: ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ತಂದೆ ಶೇಖರಗೌಡ
ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯರು ಇಂದೇ ಕೂಡಲೇ ಕೀವ್ ಬಿಟ್ಟು ಹೊರಡುವಂತೆ ಮನವಿ ಮಾಡಿಕೊಳ್ಳಲಾಗಿದೆ. ರೈಲು ಅಥವಾ ಯಾವುದೇ ರೀತಿಯ ವ್ಯವಸ್ಥೆ ಬಳಸಿಕೊಂಡು ಯುದ್ಧಪೀಡಿತ ಉಕ್ರೇನ್ ತೊರೆಯುವಂತೆ ಭಾರತೀಯ ರಾಯಭಾರಿ ಕಚೇರಿ ಮನವಿ ಮಾಡಿಕೊಂಡಿರುವುದಾಗಿ ವರದಿ ವಿವರಿಸಿದೆ.
ಉಕ್ರೇನ್ ನ ಪ್ರಮುಖ ನಗರಗಳ ಮೇಲೆ ರಷ್ಯಾ ಪಡೆಗಳು ಬಾಂಬ್ ದಾಳಿಯನ್ನು ಮುಂದುವರಿಸಿದ್ದು, ಮಂಗಳವಾರ ಕರ್ನಾಟಕ ಮೂಲದ ಹಾವೇರಿಯ ವಿದ್ಯಾರ್ಥಿ ನವೀನ್ ಎಂಬಾತ ಸಾವನ್ನಪ್ಪಿರುವ ಘಟನೆ ನಡೆದಿದೆ. ಈಗಾಗಲೇ 1,500 ಅಧಿಕ ಮಂದಿ ಭಾರತಕ್ಕೆ ವಾಪಸ್ ಆಗಿದ್ದು, ಇನ್ನುಳಿದ ಜನರನ್ನು ತಾಯ್ನಾಡಿಗೆ ಕರೆತರಲು ಭಾರತ ಸರ್ಕಾರ ಎಲ್ಲಾ ರೀತಿಯಿಂದಲೂ ಪ್ರಯತ್ನಿಸುತ್ತಿರುವುದಾಗಿ ವರದಿ ವಿವರಿಸಿದೆ.
ಈಗಾಗಲೇ ಆಪರೇಶನ್ ಗಂಗಾ ಹೆಸರಿನಲ್ಲಿ ಸಾವಿರಕ್ಕೂ ಅಧಿಕ ಜನರನ್ನು ಭಾರತಕ್ಕೆ ಕರೆತರಲಾಗಿದ್ದು, ಉಕ್ರೇನ್ ನಲ್ಲಿರುವ ಭಾರತೀಯರ ಸ್ಥಳಾಂತರ ಕಾರ್ಯದಲ್ಲಿ ವಾಯುಪಡೆ ಕೈಜೋಡಿಸಬೇಕೆಂದು ಪ್ರಧಾನಿ ಮೋದಿ ಮಂಗಳವಾರ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…