ಮಗ ಕಾಲೇಜಿಗೆ ಹೋದ ವೇಳೆ ಸೊಸೆ ಮೇಲೆ ಅತ್ಯಾಚಾರ ಎಸಗಿದ ಮಾವ: ಕೊಲೆ ಬೆದರಿಕೆ
ಅತ್ಯಾಚಾರ ಎಸಗಿದ ವಿಷಯ ತಿಳಿಸಿದರೆ ಕೊಲ್ಲುವುದಾಗಿ ಮಾವ ಬೆದರಿಕೆಯೊಡ್ಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
Team Udayavani, Nov 26, 2021, 4:26 PM IST
ನವದೆಹಲಿ:ಮಗ ಹೊರಗೆ ಹೋದ ಸಂದರ್ಭದಲ್ಲಿ ಮಾವ ಸೊಸೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಗುನಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ದಿಢೀರ್ ಬದಲಾವಣೆಗೆ ಕಾರಣ ಏನು? ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ : ಜನ್ಸಾಲೆ ಭಾಗವತರ ಮನದ ಮಾತು
ಗುನಾ ಜಿಲ್ಲೆಯ ಮೈನಾ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ಮಹಿಳೆ, ತನ್ನ ಪತಿ ಕಾಲೇಜಿಗೆ ಹೋದ ಸಂದರ್ಭದಲ್ಲಿ ಮಾವ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿದ್ದಾಳೆ. ರಾಜಸ್ಥಾನ ಮೂಲದ 21 ವರ್ಷದ ಯುವತಿ ಮತ್ತು ಗುನಾ ಮೂಲದ 22ವರ್ಷದ ಯುವಕ ವಿವಾಹವಾಗಿದ್ದರು.
ಈಕೆಯ ಗಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಮಗ ಕಾಲೇಜಿಗೆ ಹೋದ ಸಂದರ್ಭದಲ್ಲಿ ಮಾವ ಸೊಸೆಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಅತ್ಯಾಚಾರ ಎಸಗಿದ ವಿಷಯ ತಿಳಿಸಿದರೆ ಕೊಲ್ಲುವುದಾಗಿ ಮಾವ ಬೆದರಿಕೆಯೊಡ್ಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ತನ್ನ ಮಾವನ ಬಳಿ ಹಲವಾರು ಅಕ್ರಮ ಶಸ್ತ್ರಾಸ್ತ್ರಗಳಿದ್ದು, ಅವರು ತಮ್ಮ ಕುಟುಂಬದ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾರೆಂದು ಸೊಸೆ ದೂರಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಸ್ತಿ ತಕರಾರು ವಿಚಾರದಲ್ಲಿ ಮಾವ ಈ ಎಸಗಿರುವುದಾಗಿ ಶಂಕಿಸಲಾಗಿದೆ.
ಪ್ರಾಥಮಿಕ ತನಿಖೆ ನಡೆಸಿರುವ ಪೊಲೀಸರು, ಶಂಕಿತ ಆರೋಪಿಯನ್ನು ಈವರೆಗೂ ಬಂಧಿಸಿಲ್ಲ ಎಂದು ತಿಳಿಸಿದ್ದಾರೆ. ನಾವು ದೂರಿನ ಆಧಾರದ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದೇವೆ. ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ಇಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; ಮೂವರು ಸಾವು, 11 ಮಂದಿಗೆ ಗಾಯ
ಶಿವಲಿಂಗದ ಕುರಿತು ಅವಹೇಳನಕಾರಿ ಹೇಳಿಕೆ: ಎಐಎಂಐಎಂ ನಾಯಕನ ಬಂಧನ
ಚಳ್ಳಕೆರೆಯಲ್ಲಿ ಹನ್ಸ-ಎನ್ಜಿ ಯಶಸ್ವಿ ಪ್ರಯೋಗ; ಸಿಎಸ್ಐಆರ್, ಎನ್ಎಎಲ್ನಿಂದ ವಿಮಾನ ಸಿದ್ಧ
ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ
ಮುಂಗಾರು ಪ್ರವೇಶಕ್ಕೂ ಮುನ್ನ ಅಬ್ಬರ : ಕೇರಳ, ಅಸ್ಸಾಂ, ಮೇಘಾಲಯದಲ್ಲಿ ಮಳೆ ಪ್ರಕೋಪ