ಮಧ್ಯಪ್ರದೇಶ: ಆಸ್ಪತ್ರೆಯಲ್ಲಿ ರೋಗಿಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿ ಸೆರೆ!
ರೋಗಿ ದಾಳಿಕೋರನ ಬೆನ್ನಟ್ಟಿ ಓಡಿ ಬರುತ್ತಿರುವ ದೃಶ್ಯ ಕೂಡಾ ಸಿಸಿಟಿವಿಯಲ್ಲಿ ದಾಖಲಾಗಿದೆ.
Team Udayavani, Jun 12, 2021, 12:51 PM IST
ಭೋಪಾಲ್: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಚಿಕ್ಕಮಗಳೂರು: ಕೋವಿಡ್ ಸೋಂಕಿತ ಬಾಲಕಿ ಜೊತೆ ಭರ್ಜರಿ ಡ್ಯಾನ್ಸ್ ಮಾಡಿದ ತರೀಕೆರೆ ಶಾಸಕ
ಬಂಧಿತ ಆರೋಪಿ ಈ ಹಿಂದೆ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದ ಪರಿಣಾಮ ಆತ ಆಸ್ಪತ್ರೆಗೆ ದಾಖಲಾಗಿದ್ದ. ಈ ಘಟನೆ ಗುರುವಾರ ನಡೆದಿದ್ದು, ಆಸ್ಪತ್ರೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿರುವುದಾಗಿ ವರದಿ ವಿವರಿಸಿದೆ. ಎನ್ ಡಿಟಿವಿ ವರದಿ ಪ್ರಕಾರ, ಸಂತ್ರಸ್ತ ದಾಮೋದರ್ ಕೋರಿ ಈಗ ಸಾಗರ್ ಜಿಲ್ಲೆಯ ಬುಂದೇಲ್ ಖಂಡ್ ವೈದ್ಯಕೀಯ ಕಾಲೇಜಿನಲ್ಲಿ ಸುಟ್ಟ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದು, ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದೆ.
ಸಿಸಿಟಿವಿ ಫೂಟೇಜ್ ನಲ್ಲಿ ಸೆರೆಯಾದ ದೃಶ್ಯದಲ್ಲಿ ಆರೋಪಿ ಮಿಲನ್ ರಜಾಕ್ ಆಸ್ಪತ್ರೆಯ ಆವರಣದ ಸುತ್ತಲೂ ಲೈಟರ್ (ಬೆಂಕಿ ಹೊತ್ತಿಸುವ) ಹಿಡಿದು ಓಡಾಡುತ್ತಿರುವುದು ಪತ್ತೆಯಾಗಿದೆ. ನಂತರ ಆತ ಮಲಗಿದ್ದ ಕೋರಿ ಬಳಿ ತೆರಳಿ ಪೆಟ್ರೋಲ್ ಸುರಿದು ಲೈಟರ್ ನಿಂದ ಬೆಂಕಿ ಹಚ್ಚಿದ್ದ. ಬೆಂಕಿ ಹೊತ್ತಿಕೊಂಡ ನಂತರ ರೋಗಿ ದಾಳಿಕೋರನ ಬೆನ್ನಟ್ಟಿ ಓಡಿ ಬರುತ್ತಿರುವ ದೃಶ್ಯ ಕೂಡಾ ಸಿಸಿಟಿವಿಯಲ್ಲಿ ದಾಖಲಾಗಿದೆ.
ಮಿಲನ್ ರಜಾಕ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 307ರ ಪ್ರಕಾರ ಪ್ರಕರಣವನ್ನು ದಾಖಲಿಸಿಕೊಂಡಿರುವುದಾಗಿ ಗೋಪಾಲ್ ಗಂಜ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಮಿಲನ್ ರಜಾಕ್ ಆಸ್ಪತ್ರೆಯೊಳಗೆ ಬಂದು ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವುದಾಗಿ ಕೋರಿ ಹೇಳಿಕೆ ನೀಡಿರುವುದಾಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಕುಶ್ವಾಹ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ