ಮಂಡ್ಯ : ಅತ್ಯಾಚಾರ ಎಸಗಿ ಮಹಿಳೆಯ ಹತ್ಯೆ : ಆರೋಪಿಗಳ ಪತ್ತೆಗೆ ಪೊಲೀಸರ ಕಾರ್ಯಾಚರಣೆ
Team Udayavani, Feb 2, 2021, 9:34 PM IST
ಮಂಡ್ಯ: ಮನೆಯಲ್ಲಿಯೇ ಅತ್ಯಾಚಾರ ಮಾಡಿ ಮಹಿಳೆಯ ಹತ್ಯೆ ಮಾಡಿರುವ ಘಟನೆ ಮದ್ದೂರು ಪಟ್ಟಣದ ಸರ್ ಎಂ. ವಿಶ್ವೇಶ್ವರಯ್ಯ ನಗರದಲ್ಲಿ ಮಂಗಳವಾರ ನಡೆದಿದೆ.
ಪಟ್ಟಣದ ವಿವಿ ನಗರದ ಬಿಳಿಯಪ್ಪ ಅವರ ಪತ್ನಿ ಪೂರ್ಣಿಮ (39) ಕೊಲೆಯಾದ ದುರ್ದೈವಿ.
ಕೈ ಕಾಲು ಕಟ್ಟಿ ಉಸಿರುಕಟ್ಟಿಸಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಎಸ್ಪಿ, ಪೊಲೀಸ್, ಬೆರಳಚ್ಚು ಮತ್ತು ಶ್ವಾನದಳದ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು.
ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪರಿಚಿತರೇ ಯಾರೋ ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. ಮದ್ದೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಕಾಲೇಜು ವಿದ್ಯಾರ್ಥಿಗಳಿಗೆ ಇತಿಹಾಸ ಪಾಠ ಮಾಡಿದ ಚಾಮರಾಜನಗರ ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಾತಿ ಸಮಾವೇಶ ಮಾಡುವ ಸಿದ್ಧರಾಮಯ್ಯ ಡೋಂಗಿ ಜ್ಯಾತ್ಯತೀತ ನಾಯಕ: ಎಚ್.ಡಿ.ಕುಮಾರಸ್ವಾಮಿ
ಸೊರಬ: ನೂತನ ಗ್ರಾಮ ಪಂಚಾಯ್ತಿ ಸ್ಥಾಪನೆಗೆ ಒತ್ತಾಯಿಸಿ ಯಲಸಿ ಗ್ರಾಮಸ್ಥರಿಂದ ಮನವಿ
ಕುಷ್ಟಗಿ : ಮದುವೆ ನಿಶ್ಚಿತಾರ್ಥಗೊಂಡಿದ್ದ ಯುವ ಜೋಡಿ ಆತ್ಮಹತ್ಯೆ : ಕಾರಣ ನಿಗೂಢ
ಆಸ್ಪತ್ರೆಗಳಲ್ಲಿ ನಾರ್ಮಲ್ ಹೆರಿಗೆಗಿಂತ ಸಿಸೇರಿಯನ್ ಹೆರಿಗೆ ಹೆಚ್ಚಳ : ಅಡಳಿತಾಧಿಕಾರಿ ಕಳವಳ
ಫೇಸ್ ಬುಕ್ ನಲ್ಲಿ ಹಾಕಿದ್ದ ಸೆಲ್ಫಿ ಪೋಸ್ಟ್ ನಿಂದ 5 ವರ್ಷದ ಬಳಿಕ ಅರೆಸ್ಟ್ ಆದ ಕೊಲೆ ಆರೋಪಿ!