ಮಂಗಳೂರು : ಬೈಕ್ ಢಿಕ್ಕಿ ಹೊಡೆದ ಬಳಿಕ ಹೊತ್ತಿ ಉರಿದ ಬಸ್ ; ಸವಾರನಿಗೆ ಗಂಭೀರ ಗಾಯ
Team Udayavani, Apr 8, 2022, 2:47 PM IST
ಮಂಗಳೂರು : ನಗರದ ಹಂಪನಕಟ್ಟೆ ಸಿಗ್ನಲ್ ಬಳಿ ಖಾಸಗಿ ಸಿಟಿ ಬಸ್ಸೊಂದು ಬೈಕ್ ಗೆ ಢಿಕ್ಕಿಯಾದ ಬಳಿಕ ಬೆಂಕಿ ಹೊತ್ತಿಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮುಂಭಾಗದಿಂದ ಬೈಕ್ ಢಿಕ್ಕಿಯಾದ ಬಳಿಕ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ವ್ಯಾಪಿಸುವುದನ್ನು ತಡೆದಿದ್ದಾರೆ.ಬಸ್ ನ ಮುಂಭಾಗ ಬಹುಪಾಲು ಸುಟ್ಟು ಹೋಗಿದೆ. ಬೈಕ್ ಸಂಪೂರ್ಣವಾಗಿ ಸುಟ್ಟು ಹೋಗಿರುವುದಾಗಿ ತಿಳಿದು ಬಂದಿದೆ.ಬೈಕ್ ಸವಾರ ಡೈಲನ್ (25) ಕಾಲಿಗೆ ಗಂಭೀರವಾದ ಗಾಯವಾಗಿದ್ದು,ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಸ್ ನಲ್ಲಿದ್ದ ಚಾಲಕ ಸೇರಿ ಪ್ರಯಾಣಿಕರೆಲ್ಲರೂ ಪಾರಾಗಿದ್ದಾರೆ.
ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ಎನ್ .ಶಶಿಕುಮಾರ್ ಸಹಿತ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ಅಪಘಾತ ಯಾವ ರೀತಿಯಲ್ಲಿ ನಡೆದಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ