ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 153 ಅಂಕ ಇಳಿಕೆ, 15,750 ಅಂಕಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ
ಎನ್ ಎಸ್ ಇ ನಿಫ್ಟಿ 42.30 ಅಂಕ ಕುಸಿತದೊಂದಿಗೆ 15,732.10 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.
Team Udayavani, Jun 14, 2022, 4:22 PM IST
ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ವಹಿವಾಟಿನ ಪರಿಣಾಮ ಮಂಗಳವಾರ (ಜೂನ್ 14) ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 150ಕ್ಕೂ ಅಧಿಕ ಅಂಕಗಳ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ.
ಇದನ್ನೂ ಓದಿ:ಪರಿಷ್ಕೃತ ಪಠ್ಯಪುಸ್ತಕವು ಬಿಜೆಪಿ ಹಾಗೂ ಆರೆಸ್ಸೆಸ್ ನ ಭಿತ್ತಿ ಪತ್ರ: ಪ್ರಿಯಾಂಕ್ ಖರ್ಗೆ ಆರೋಪ
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 153.13 ಅಂಕಗಳಷ್ಟು ಇಳಿಕೆಯೊಂದಿಗೆ 52,693.57 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 42.30 ಅಂಕ ಕುಸಿತದೊಂದಿಗೆ 15,732.10 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.
ಸೆನ್ಸೆಕ್ಸ್ ಇಳಿಕೆಯಿಂದಾಗಿ ಬಜಾಜ್ ಆಟೋ, ಇಂಡಸ್ ಇಂಡ್ ಬ್ಯಾಂಕ್, ಹಿಂಡಲ್ಕೋ ಇಂಡಸ್ಟ್ರೀಸ್, ಒಎನ್ ಜಿಸಿ ಮತ್ತು ಟೆಕ್ ಮಹೀಂದ್ರ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಎನ್ ಟಿಪಿಸಿ, ಮಹೀಂದ್ರ ಆ್ಯಂಡ್ ಮಹೀಂದ್ರ, ಭಾರ್ತಿ ಏರ್ ಟೆಲ್, ಅಪೋಲೊ ಆಸ್ಪತ್ರೆ ಮತ್ತು ಡೇವಿಸ್ ಲ್ಯಾಬ್ಸ್ ಷೇರುಗಳು ಲಾಭಗಳಿಸಿದೆ.
ಇನ್ನುಳಿದಂತೆ ಆಟೋ, ಮೆಟಲ್, ತೈಲ ಮತ್ತು ಅನಿಲ ಸೆಕ್ಟರ್ ಗಳ ಷೇರುಗಳ ಮೌಲ್ಯ ಕುಸಿತ ಕಂಡಿದೆ. ಕ್ಯಾಪಿಟಲ್ ಗೂಡ್ಸ್, ಪವರ್ ಸೆಕ್ಟರ್ ಷೇರುಗಳ ಬೆಲೆ ಏರಿಕೆಯಾಗಿರುವುದಾಗಿ ಮಾರುಕಟ್ಟೆ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್