ತ್ರಿವಳಿ ರೈಲು ದುರಂತದ ನಿಗೂಢತೆ ಶೀಘ್ರ ಬಯಲಾಗಲಿ


Team Udayavani, Jun 5, 2023, 5:20 AM IST

train tragedy

ಶುಕ್ರವಾರ ರಾತ್ರಿ ಒಡಿಶಾದ ಬಾಲಸೋರ್‌ನಲ್ಲಿ ಸರಕು ಸಾಗಣೆ ರೈಲು, ಕೋರಮಂಡಲ್‌ ಎಕ್ಸ್‌ಪ್ರೆಸ್‌ ಮತ್ತು ಯಶವಂತಪುರ-ಹೌರಾ ಎಕ್ಸ್‌ಪ್ರೆಸ್‌ ರೈಲುಗಳನ್ನು ಒಳಗೊಂಡಂತೆ ಸಂಭವಿಸಿದ ತ್ರಿವಳಿ ರೈಲು ದುರಂತದಲ್ಲಿ 275 ಮಂದಿ ಸಾವನ್ನಪ್ಪಿದ್ದು, ಇದು ದೇಶದ ಇತಿಹಾಸದಲ್ಲಿ ಮೂರನೇ ಮತ್ತು ಹಾಲಿ ಶತಮಾನದ ಮೊದಲ ಅತೀ ಭೀಕರ ರೈಲು ದುರಂತವೆಂಬ ಕುಖ್ಯಾತಿಗೆ ಪಾತ್ರವಾಗಿದೆ.

ರೈಲ್ವೇ ಇಲಾಖೆ, ರೈಲು ಕಾರ್ಯಾಚರಣೆಗಳಲ್ಲಿ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವ ಮೂಲಕ ಗಮನಾರ್ಹ ಸುಧಾರಣೆಗಳನ್ನುಜಾರಿಗೆ ತಂದ ಬಳಿಕ ದೇಶದಲ್ಲಿ ರೈಲು ದುರಂತಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿತ್ತು. ಇತ್ತೀಚಿನ ವರ್ಷಗಳಲ್ಲಂತೂ ಸಣ್ಣಪುಟ್ಟ ದುರ್ಘ‌ಟನೆಗಳನ್ನು ಹೊರತುಪಡಿಸಿದಂತೆ

ರೈಲುಯಾನ ಎಂಬುದು ದೇಶದಲ್ಲಿ ಹೆಚ್ಚು ಸುರಕ್ಷಿತ ಎಂದು ಪರಿಗಣಿಸಲ್ಪಟ್ಟಿತ್ತು. ಆದರೆ ಯಾರ ಊಹೆಗೂ ನಿಲುಕದಂತೆ ಘಟಿಸಿದ ಈ ದುರಂತ ದೇಶಾದ್ಯಂತದ ಜನರನ್ನು ದಿ ಗ್ಮೂಢರನ್ನಾಗಿಸಿದೆ. ಆರಂಭದಲ್ಲಿ ಗೂಡ್ಸ್‌ ರೈಲೊಂದಕ್ಕೆ ಪ್ರಯಾಣಿಕರ ರೈಲೊಂದು ಢಿಕ್ಕಿ ಹೊಡೆದು ಕೆಲವು ಬೋಗಿಗಳು ಹಳಿ ತಪ್ಪಿವೆ ಎಂದು ವರದಿಯಾದಾಗ ಯಾರೂ ಈ ಬಗ್ಗೆ ಅಷ್ಟೊಂದು ತಲೆಕೆಡಿಸಿಕೊಂಡಿರಲಿಲ್ಲ. ಆದರೆ ತಾಸು ಕಳೆದ ಬಳಿಕ ಸಾವಿನ ಸಂಖ್ಯೆ ಹೆಚ್ಚುತ್ತಿದ್ದಂತೆ, ದೇಶದ ಜನರು ಬಾಲಾಸೋರ್‌ನತ್ತ ಆತಂಕದಿಂದಲೇ ದೃಷ್ಟಿ ಬೀರತೊಡಗಿದ್ದರು.

ಮೂರು ರೈಲುಗಳು ಅಪಘಾತಕ್ಕೀಡಾಗಿದ್ದರೂ ಈವರೆಗೂ ಘಟನೆಯ ಸ್ಪಷ್ಟ ಚಿತ್ರಣ ಲಭಿಸದಿರುವುದು ದೇಶದ ಜನತೆಯಲ್ಲಿ ಒಂದಿಷ್ಟು ಅನುಮಾನಗಳನ್ನು ಹುಟ್ಟು ಹಾಕಿದೆ. ದುರ್ಘ‌ಟನೆ ಸಂಭವಿಸಿದ ಬಳಿಕ ಅದರ ಭೀಕರತೆಯನ್ನು ಕಂಡು

ಇದು ತಾಂತ್ರಿಕ ದೋಷ ಅಥವಾ ವಿಧ್ವಂಸಕ ಕೃತ್ಯ ಎಂಬ ಸಂಶಯಗಳು ವ್ಯಕ್ತವಾಗಿದ್ದವು. ಆದರೆ ರೈಲ್ವೇ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯ ವೇಳೆ ಸ್ಟೇಶನ್‌ ಮ್ಯಾನೇಜರ್‌ ಮಾಡಿದ ಎಡವಟ್ಟಿನಿಂದಲೇ ಈ ದುರಂತ ಸಂಭವಿಸಿದೆ ಎಂದು ಕಂಡುಬಂದಿತ್ತು. ಏತನ್ಮಧ್ಯೆ ರವಿವಾರದಂದು ರೈಲ್ವೇ ಸಚಿವ ಅಶ್ವಿ‌ನಿ ವೈಷ್ಣವ್‌ ಅವರು ಮತ್ತೆ ಈ ತ್ರಿವಳಿ ರೈಲು ದುರಂತದ ಹಿಂದೆ ವಿಧ್ವಂಸಕ ಕೃತ್ಯ ಮತ್ತು ಎಲೆಕ್ಟ್ರಾನಿಕ್‌ ಇಂಟರ್‌ಲಾಕಿಂಗ್‌ ವ್ಯವಸ್ಥೆಯನ್ನು ಹಾಳುಗೆಡವಿರುವ ಸಾಧ್ಯತೆಗಳಿವೆ. ಈ ದುರ್ಘ‌ಟನೆಯಲ್ಲಿ ರೈಲುಗಳ ಚಾಲಕರು, ಸಿಬಂದಿಯ ತಪ್ಪಾಗಲಿ, ತಾಂತ್ರಿಕ ದೋಷವಾಗಲೀ ಇಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ದುರ್ಘ‌ಟನೆಗೆ ಕಾರಣವೇನು? ಎಂಬ ಬಗೆಗಿನ ಗೊಂದಲವನ್ನು ಜೀವಂತವಾಗಿರಿಸಿದ್ದಾರೆ.

ಈ ಭೀಕರ ದುರಂತ ಸಂಭವಿಸಲು ಕಾರಣವೇನುಎಂಬುದನ್ನು ಆದಷ್ಟು ಬೇಗ ಪತ್ತೆ ಹಚ್ಚಿ ತಪ್ಪಿತಸ್ಥರನ್ನು ಕಾನೂನಿನ ಕೈಗೆ ಒಪ್ಪಿಸುವ ಕಾರ್ಯ ಸಂಬಂಧಿತ ಇಲಾಖೆಗಳಿಂದಾಗಬೇಕಿದೆ. ಒಂದು ವೇಳೆ ಇದರ ಹಿಂದೆ ವಿಧ್ವಂಸಕರ ಕೈವಾಡ ಇದ್ದದ್ದೇ ಆದಲ್ಲಿ ಅವರನ್ನು ಮತ್ತು ಇಷ್ಟೊಂದು ದೊಡ್ಡ ದುಷ್ಕೃತ್ಯ ಎಸಗಲು ವಿಧ್ವಂಸಕರಿಗೆ ಹೇಗೆ ಸಾಧ್ಯವಾಯಿತು?ವಿಧ್ವಂಸಕರ ಜತೆ ರೈಲ್ವೇ ಸಿಬಂದಿ ಕೈಜೋಡಿಸಿದ್ದರೇ? ಮತ್ತಿತರ ಪ್ರಶ್ನೆಗಳಿಗೆ ತನಿಖೆಯ ವೇಳೆ ಉತ್ತರ ಕಂಡುಕೊಳ್ಳಬೇಕಿದೆ. ತನ್ಮೂಲಕ ದೇಶದ ಜನರ ಮನಸ್ಸಿನಲ್ಲಿ ಮೂಡಿರುವ ಎಲ್ಲ ಪ್ರಶ್ನೆಗಳು ಮತ್ತು ಗೊಂದಲಗಳನ್ನು ಪರಿಹರಿಸಬೇಕು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.