ಮೆಕ್ಕಾ…ಮಕ್ಕೇಶ್ವರ್ ಮಹಾದೇವ ದೇವಸ್ಥಾನವಂತೆ; ಹಿಂದೂ ಮಹಾಸಭಾದ ಕ್ಯಾಲೆಂಡರ್ ನಲ್ಲೇನಿದೆ?

ಮುಸ್ಲಿಮರ ಹಲವಾರು ಧಾರ್ಮಿಕ ಸ್ಥಳವನ್ನು ಹಿಂದೂ ದೇವಾಲಯ ಎಂದು ಉಲ್ಲೇಖಿಸಲಾಗಿದೆ

Team Udayavani, Apr 6, 2022, 12:30 PM IST

ಮೆಕ್ಕಾ…ಮಕ್ಕೇಶ್ವರ್ ಮಹಾದೇವ ದೇವಸ್ಥಾನವಂತೆ; ಹಿಂದೂ ಮಹಾಸಭಾದ ಕ್ಯಾಲೆಂಡರ್ ನಲ್ಲೇನಿದೆ?

ಅಲಿಗಢ್: ಕರ್ನಾಟಕದಲ್ಲಿ ಹಿಜಾಬ್, ಆಜಾನ್ ವಿವಾದ ತಲೆಎತ್ತಿರುವ ನಡುವೆ ಇದೀಗ ಆಲ್ ಇಂಡಿಯಾ ಹಿಂದೂ ಮಹಾಸಭಾ ಕಚೇರಿಯಲ್ಲಿ ಬಿಡುಗಡೆ ಮಾಡಿರುವ ಹಿಂದೂ ಹೊಸ ವರ್ಷದ ಕ್ಯಾಲೆಂಡರ್ ಮತ್ತೊಂದು ಹೊಸ ಚರ್ಚೆಗೆ ಎಡೆ ಮಾಡಿಕೊಟ್ಟಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಹುಬ್ಬಳ್ಳಿ: ಐರಾವತ ಬಸ್ – ಕಾರು ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಾಯ

ಹಿಂದೂ ಮಹಾಸಭಾ ಬಿಡುಗಡೆ ಮಾಡಿರುವ ಕ್ಯಾಲೆಂಡರ್ ನಲ್ಲಿ ಮುಸ್ಲಿಮರ ಹಲವಾರು ಧಾರ್ಮಿಕ ಸ್ಥಳವನ್ನು ಹಿಂದೂ ದೇವಾಲಯ ಎಂದು ಉಲ್ಲೇಖಿಸಲಾಗಿದೆ ಎಂದು ವರದಿ ವಿವರಿಸಿದೆ.

ಕ್ಯಾಲೆಂಡರ್ ನಲ್ಲಿ ಉಲ್ಲೇಖವೇನಿದೆ?

ಮುಸ್ಲಿಮರ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಮೆಕ್ಕಾವನ್ನು ಮಕ್ಕೇಶ್ವರ್ ಮಹಾದೇವ್ ದೇವಾಲಯ ಎಂದು ಕ್ಯಾಲೆಂಡರ್ ನಲ್ಲಿ ಉಲ್ಲೇಖಿಸಲಾಗಿದೆ. ಮಥುರಾದ ದ ರಾಯಲ್ ಈದ್ಗಾವನ್ನು ಶ್ರೀಕೃಷ್ಣ ಜನ್ಮಭೂಮಿ ಎಂದು ಹೆಸರಿಸಲಾಗಿದೆ. ತಾಜ್ ಮಹಲ್ ಅನ್ನು ತೇಜೊ ಮಹಾಲಯ ಶಿವ ದೇವಸ್ಥಾನ, ಮಧ್ಯಪ್ರದೇಶದ ಕಮಲ್ ಮೌಲಾ ಮಸೀದಿಯನ್ನು ಭೋಜ್ ಶಾಲಾ ಎಂದು ಕರೆಯಲಾಗಿದೆ. ಕಾಶಿಯ ಜ್ಞಾನವಾಪಿ ಮಸೀದಿಯನ್ನು ವಿಶ್ವನಾಥ ದೇವಾಲಯ ಎಂಬುದಾಗಿ, ಕುತುಬ್ ಮಿನಾರ್ ಅನ್ನು ವಿಷ್ಣು ಸ್ತಂಭ, ಜೌನ್ ಪುರದ ಅಟ್ಲಾ ಮಸೀದಿಯನ್ನು ಅಟ್ಲಾ ದೇವಿ ದೇವಾಲಯ ಎಂದು ಉಲ್ಲೇಖಿಸಿರುವುದಾಗಿ ವರದಿ ತಿಳಿಸಿದೆ.

ಕ್ಯಾಲೆಂಡರ್ ನಲ್ಲಿ ವಿವರಣೆಯೂ ಇದೆ:

ಮೆಕ್ಕಾ ಮುಸ್ಲಿಮರ ಪವಿತ್ರ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಹಿಂದೂ ಕ್ಯಾಲೆಂಡರ್ ನಲ್ಲಿ ಮೆಕ್ಕಾವನ್ನು ಮಕ್ಕೇಶ್ವರ ಮಹಾದೇವ ದೇವಸ್ಥಾನ ಎಂದು ಕರೆಯಲಾಗಿದ್ದು, ಇದರ ಜೊತೆಗೆ ವಿವರಣೆ ನೀಡಲಾಗಿದೆ. ಒಂದು ಕಾಲದಲ್ಲಿ ಇಲ್ಲಿ ಶಿವನ ದೇವಸ್ಥಾನ ಇದ್ದಿದ್ದು, ಈಗಲೂ ಕೂಡಾ ಛಿದ್ರವಾದ ಸ್ಥಿತಿಯಲ್ಲಿರುವ ಶಿವಲಿಂಗ ಇದ್ದಿರುವುದಾಗಿ ಮುದ್ರಿಸಲಾಗಿದೆ.

ಮಂಗಳವಾರ ಅಲಿಗಢ್ ಜಿಲ್ಲೆಯಲ್ಲಿರುವ ಅಖಿಲ ಭಾರತ ಹಿಂದೂ ಮಹಾಸಭಾ ಕಚೇರಿಯಲ್ಲಿ ಹಿಂದೂ ಹೊಸ ವರ್ಷ ಮತ್ತು ನವದುರ್ಗೆಯ ಕುರಿತು ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಈ ಸಂದರ್ಭದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಡಾ.ಪೂಜಾ ಶಾಕುನ್ ಪಾಂಡೆ ಹಿಂದೂ ನ್ಯೂ ಇಯರ್ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದ್ದರು.

2018ರಲ್ಲಿ ಅಖಿಲ ಭಾರತ್ ಹಿಂದೂ ಮಹಾಸಭಾ ಬಿಡುಗಡೆ ಮಾಡಿರುವ ಕ್ಯಾಲೆಂಡರ್ ನಲ್ಲಿರುವ ಮಾಹಿತಿಯನ್ನು ಸಂಗ್ರಹಿಸಿ ಈ ಕ್ಯಾಲೆಂಡರ್ ನಲ್ಲಿ ಮುದ್ರಿಸಲಾಗಿದೆ ಎಂದು ಪಾಂಡೆ ಹೇಳಿದರು. 2018ರ ಕ್ಯಾಲೆಂಡರ್ ನಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಶೀಘ್ರವಾಗಿ ನಿರ್ಮಾಣ ಮಾಡಬೇಕೆಂದು ಉಲ್ಲೇಖಿಸಿತ್ತು. ಆದರೆ ಈಗ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದ್ದು, ಇದೀಗ ಈ ಸ್ಥಳಗಳ ಹಿಂದೂ ಹೆಸರನ್ನು ಮುದ್ರಿಸುವ ಮೂಲಕ ಆ ಹೆಸರನ್ನು ಇಡುವಂತೆ ಒತ್ತಾಯಿಸಲಾಗಿದೆ ಎಂದು ತಿಳಿಸಿದ್ದಾರೆ.

ವಿದೇಶಿ ದಾಳಿಕೋರರು ದೇಶದಲ್ಲಿರುವ ಹಿಂದೂಗಳ ಪವಿತ್ರ ಸ್ಥಳಗಳನ್ನು ಲೂಟಿ ಮಾಡಿದ್ದರು. ಅಲ್ಲದೇ ಧಾರ್ಮಿಕ ಕ್ಷೇತ್ರಗಳ ಹೆಸರನ್ನು ಬದಲಾಯಿಸಿ ಮಸೀದಿಯನ್ನಾಗಿ ಪರಿವರ್ತಿಸಲಾಗಿದೆ. ಈಗ ಹಿಂದೂಗಳ ಸ್ಥಳಗಳು ನಮಗೆ ವಾಪಸ್ ಸೇರಬೇಕಾಗಿದೆ ಎಂದು ಪಾಂಡೆ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.