ಮೆಡಿಕಲ್‌ ಸೀಟು ಕೊಡಿಸುವ ಆಮಿಷ: ವಿದ್ಯಾರ್ಥಿಗಳ ಪೋಷಕರಿಂದ ಲಕ್ಷ ಲಕ್ಷ ಹಣ ಪಡೆದು ವಂಚನೆ

Team Udayavani, Jan 25, 2021, 1:48 PM IST

ಮೆಡಿಕಲ್‌ ಸೀಟು ಕೊಡಿಸುವ ಆಮಿಷ: ವಿದ್ಯಾರ್ಥಿಗಳ ಪೋಷಕರಿಂದ ಲಕ್ಷ ಲಕ್ಷ ಹಣ ಪಡೆದು ವಂಚನೆ

ಬೆಂಗಳೂರು: ಮೆಡಿಕಲ್‌ ಸೀಟು ಕೊಡಿಸುವ ನೆಪದಲ್ಲಿ ವಂಚಿಸುವ ಜಾಲ ಮತ್ತೆ ಸಕ್ರಿಯಗೊಂಡಿದ್ದು, ಸೀಟು ಕೊಡಿಸುವುದಾಗಿ ಇಬ್ಬರು ವಿದ್ಯಾರ್ಥಿಗಳ ಪೋಷಕರಿಂದ ಹತ್ತು ಲಕ್ಷ ರೂ.ಗಳಿಗೂ ಅಧಿಕ ಪಡೆದು ವಂಚಿಸಿರುವುದು ಬಯಲಾಗಿದೆ.
ಈ ಕುರಿತು ವಂಚನೆಗೊಳಗಾದ ನವ್ಯಾ ಎಂಬುವವರು ಅಶೋಕ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆನಂದ್‌ರಾವ್‌,
ಮಧುಶಾ, ವಿನುತಾ ಎಂಬುವವರ ವಿರುದ್ಧ ಎಫ್ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೈಸೂರು ಮೂಲದ ವಿನುತಾ ಅವರ ಮಗನಿಗೆ ನೀಟ್‌ ಪರೀಕ್ಷೆಯಲ್ಲಿ ರ್‍ಯಾಂಕಿಂಗ್‌ ಬರದಿದ್ದರಿಂದ ಸರ್ಕಾರಿ ಸೀಟು ಸಿಕ್ಕಿರಲಿಲ್ಲ. ಈ ಮಧ್ಯೆ ವಿನುತಾ ಅವರ ಮೊಬೈಲ್‌ಗೆ ಸಂದೇಶ ಬಂದಿದ್ದು http://www.netcounselling.com/ ಮೆಡಿಕಲ್‌ ಸೀಟ್‌
ಗೆ ಸಂಬಂಧಿಸಿದಂತೆ ಸಂಪರ್ಕಿಸಲು ಕೋರಲಾಗಿತ್ತು.

ಅದರಲ್ಲಿ ರೆಸಿಡೆನ್ಸಿ ರಸ್ತೆಯ ಕಚೇರಿಯ ವಿಳಾಸದ ಲೊಕೇಶನ್‌ ಕೂಡ ಕಳುಹಿಸಲಾಗಿತ್ತು.

ಅದನ್ನು ನಂಬಿದ ನವ್ಯಾ ಅವರು ಮಗನನ್ನು ಕರೆದುಕೊಂಡು ನೆಟ್‌ಕೌನ್ಸೆಲಿಂಗ್‌ ಡಾ.ಕಾಮ್‌ ಕಚೇರಿಗೆ ಬಂದಾಗ ಅವರನ್ನು ಪರಿಚಯಿಸಿಕೊಂಡಿದ್ದ ಮಧುಶಾ, ವಿನುತಾ, ಆನಂದ್‌ ರಾವ್‌ ಬಳಿ ಕರೆದೊಯ್ದಿದ್ದರು. ಈ ವೇಳೆ ಆತ ನಗರದ ಪ್ರತಿಷ್ಠಿತ
ಕಾಲೇಜಿನಲ್ಲಿ ಮೆಡಿಕಲ್‌ ಸೀಟು ಕೊಡಿಸುವುದಾಗಿ ನಂಬಿಸಿ ಮೊದಲು ನೋಂದಣಿ ಶುಲ್ಕವಾಗಿ 50 ಸಾವಿರ ರೂ. ಕಟ್ಟಿಸಿಕೊಂಡಿದ್ದರು. ಬಳಿಕ ಐದು ವರ್ಷಗಳ ಮೆಡಿಕಲ್‌ ಕೋರ್ಸ್‌ಗೆ 50 ಲಕ್ಷ ರೂ. ಎಂದು ತಿಳಿಸಿದ್ದರು.

ಇದನ್ನೂ ಓದಿ:ಬಜೆಟ್ ನಲ್ಲಿ ಮೈಸೂರು ಅಭಿವೃದ್ಧಿಗೆ ಒತ್ತು ಕೊಡಲು ಸಿಎಂ ಗಮನಕ್ಕೆ ತರುವೆ: ಸೋಮಶೇಖರ್

ಇದಾದ ಬಳಿಕ ಜ.4ಕ್ಕೆ ಪುನಃ ನವ್ಯಾ ಅವರು ಬಂದಾಗ 10 ಲಕ್ಷ ರೂ. ನಗದನ್ನು ಆರೋಪಿಗಳು ಪಡೆದುಕೊಂಡು ಜ.15ರಂದು ಖಾಸಗಿ ಕಾಲೇಜಿನ ಬಳಿ ಮಗನ ದಾಖಲಾತಿ ಮಾಡಲು ಬರುವಂತೆ ಸೂಚಿಸಿದ್ದರು. ಹೀಗಾಗಿ, ನವ್ಯಾ ಅವರು ಜ.15ರಂದು ಕಾಲೇಜಿನ ಬಳಿ ವಿಚಾರಿಸಿದಾಗ ಯಾವುದೇ ಸೀಟ್‌ ನೀಡಲಾಗಿಲ್ಲ ಎಂದು ತಿಳಿಸಿದ್ದಾರೆ. ಮಧುಶಾ ಅವರ ಮೊಬೈಲ್‌ ಸ್ವಿಚ್‌ಆಫ್ ಆಗಿತ್ತು. ಇದರಿಂದ ಅನುಮಾನಗೊಂಡ ನವ್ಯಾ ಅವರು ರೆಸಿಡೆನ್ಸಿ ರಸ್ತೆಯಲ್ಲಿರುವ ನೆಟ್‌ಕೌನ್ಸಿಲಿಂಗ್‌ ಕಚೇರಿ ಬಳಿ ಬಂದಾಗ ಕಚೇರಿಯೂ ಖಾಲಿಯಾಗಿರುವುದು ಗೊತ್ತಾಗಿದೆ. ಬಳಿಕ ತಾವು ಮೋಸಹೋಗಿದ್ದೇವೆ ಎಂದು ಅರಿತು ದೂರು ನೀಡಿದ್ದಾರೆ ಎಂದು
ಪೊಲೀಸರು ತಿಳಿಸಿದರು.

4 ಲಕ್ಷ ರೂ. ಪಡೆದು ವಂಚನೆ!: ಇನ್ನೊಂದು ಪ್ರಕರಣದಲ್ಲಿ ತಮ್ಮ ಮಗಳಿಗೆ ಮೆಡಿಕಲ್‌ ಸೀಟು ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ಪಡೆದು ವಂಚಿಸಿದ್ದಾರೆ ಎಂದು ಪೂರ್ಣಿಮಾ ಎಂಬುವವರು ಪ್ರತ್ಯೇಕ ದೂರು ದಾಖಲಿಸಿದ್ದಾರೆ.

ಹೈಫೈ ಎಂಬೆಸ್ಟಿಯಾ ಕಂಪನಿ ಹೆಸರಿನಲ್ಲಿ ಕರೆ ಮಾಡಿದ್ದ ಪ್ರತೀಕ್ಷಾ, ಭರತ್‌, ಕಿಶೋರ್‌ ಎಂಬುವವರು ಮಗಳಿಗೆ ಸೀಟು ಕೊಡಿಸುತ್ತೇವೆ ಎಂದು ನಂಬಿಸಿ ಅಡ್ವಾನ್ಸ್‌ ರೂಪದಲ್ಲಿ 4ಲಕ್ಷ ರೂ. ಪಡೆದಿದ್ದರು. ಬಳಿಕ ಜ.18ರಿಂದ ಕರೆ ಸ್ವೀಕರಿಸದೇ ವಂಚಿಸಿ
ದ್ದಾರೆ ಎಂದು ಪೂರ್ಣಿಮಾ ದೂರಿದ್ದಾರೆ. ಎರಡೂ ಪ್ರಕರಣಗಳ ಸಂಬಂಧ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕನ್ನಡ ಸಂಘಟನೆಗಳು ಏನು ಮಾಡುತ್ತಿವೆ: ಡಿಕೆಶಿ ಪ್ರಶ್ನೆ

ಕನ್ನಡ ಸಂಘಟನೆಗಳು ಏನು ಮಾಡುತ್ತಿವೆ: ಡಿಕೆಶಿ ಪ್ರಶ್ನೆ

ವನಿತಾ ಟಿ20 ಚಾಲೆಂಜ್‌: ಸೂಪರ್‌ ನೋವಾ -ವೆಲಾಸಿಟಿ ಫೈನಲ್‌

ವನಿತಾ ಟಿ20 ಚಾಲೆಂಜ್‌: ಸೂಪರ್‌ ನೋವಾ -ವೆಲಾಸಿಟಿ ಫೈನಲ್‌

ರಾಷ್ಟ್ರೀಯ ಸರ್ಫಿಂಗ್‌: ಮೊದಲ ದಿನ ತಮಿಳುನಾಡು ಪ್ರಾಬಲ್ಯ

ರಾಷ್ಟ್ರೀಯ ಸರ್ಫಿಂಗ್‌: ಮೊದಲ ದಿನ ತಮಿಳುನಾಡು ಪ್ರಾಬಲ್ಯ

ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ

ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ಕೋವಿಡ್‌ ಲಸಿಕೆ ಪಡೆದ ತತ್‌ಕ್ಷಣ ಪ್ರಮಾಣಪತ್ರ: ಕೇಂದ್ರ ಸರಕಾರ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆ

ನಾರಾವಿಯಲ್ಲಿ ಮುರಿದುಬಿತ್ತು ಅದ್ದೂರಿ ಮದುವೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡ ಸಂಘಟನೆಗಳು ಏನು ಮಾಡುತ್ತಿವೆ: ಡಿಕೆಶಿ ಪ್ರಶ್ನೆ

ಕನ್ನಡ ಸಂಘಟನೆಗಳು ಏನು ಮಾಡುತ್ತಿವೆ: ಡಿಕೆಶಿ ಪ್ರಶ್ನೆ

ಯಾವ ರಂಗ ಅಸ್ತಿತ್ವಕ್ಕೆ ಬಂದರೂ ಬಿಜೆಪಿ ಅಲ್ಲಾಡಿಸಲಾಗದು: ಶೆಟ್ಟರ್

ಯಾವ ರಂಗ ಅಸ್ತಿತ್ವಕ್ಕೆ ಬಂದರೂ ಬಿಜೆಪಿ ಅಲ್ಲಾಡಿಸಲಾಗದು: ಶೆಟ್ಟರ್

ಶೀಘ್ರ ಹಳೆ ಕೈಗಾರಿಕಾ ವಲಯಗಳ ಅಭಿವೃದ್ಧಿ: ಸಚಿವ ಮುರುಗೇಶ್‌ ನಿರಾಣಿ

ಶೀಘ್ರ ಹಳೆ ಕೈಗಾರಿಕಾ ವಲಯಗಳ ಅಭಿವೃದ್ಧಿ: ಸಚಿವ ಮುರುಗೇಶ್‌ ನಿರಾಣಿ

CMರಾಜ್ಯದಲ್ಲಿ 65 ಸಾವಿರ ಕೋಟಿ ರೂ. ಹೂಡಿಕೆ; ದಾವೋಸ್‌ನ 25 ಕಂಪೆನಿ ಜತೆ ಸಿಎಂ ಮಾತುಕತೆ

ರಾಜ್ಯದಲ್ಲಿ 65 ಸಾವಿರ ಕೋಟಿ ರೂ. ಹೂಡಿಕೆ; ದಾವೋಸ್‌ನ 25 ಕಂಪೆನಿ ಜತೆ ಸಿಎಂ ಮಾತುಕತೆ

1qwwq

ಎಸಿಬಿ ಅಧಿಕಾರಿಗಳ ಹೆಸರಿನಲ್ಲಿ ಸರಕಾರಿ ನೌಕರರಿಗೆ ವಂಚನೆ : ಇಬ್ಬರ ಬಂಧನ

MUST WATCH

udayavani youtube

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ

udayavani youtube

ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು

udayavani youtube

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

ಹೊಸ ಸೇರ್ಪಡೆ

ಕನ್ನಡ ಸಂಘಟನೆಗಳು ಏನು ಮಾಡುತ್ತಿವೆ: ಡಿಕೆಶಿ ಪ್ರಶ್ನೆ

ಕನ್ನಡ ಸಂಘಟನೆಗಳು ಏನು ಮಾಡುತ್ತಿವೆ: ಡಿಕೆಶಿ ಪ್ರಶ್ನೆ

ವನಿತಾ ಟಿ20 ಚಾಲೆಂಜ್‌: ಸೂಪರ್‌ ನೋವಾ -ವೆಲಾಸಿಟಿ ಫೈನಲ್‌

ವನಿತಾ ಟಿ20 ಚಾಲೆಂಜ್‌: ಸೂಪರ್‌ ನೋವಾ -ವೆಲಾಸಿಟಿ ಫೈನಲ್‌

ರಾಷ್ಟ್ರೀಯ ಸರ್ಫಿಂಗ್‌: ಮೊದಲ ದಿನ ತಮಿಳುನಾಡು ಪ್ರಾಬಲ್ಯ

ರಾಷ್ಟ್ರೀಯ ಸರ್ಫಿಂಗ್‌: ಮೊದಲ ದಿನ ತಮಿಳುನಾಡು ಪ್ರಾಬಲ್ಯ

ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ

ಮೆಲ್ಟ್ ವಾಟರ್‌ ಚೆಸ್‌ : ಪ್ರಗ್ನಾನಂದ ಪ್ರಯತ್ನ ವಿಫ‌ಲ

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

ಐಪಿಎಲ್‌ 2022: ಜಾಸ್‌ ಬಟ್ಲರ್‌ ಶತಕದ ಜೋಶ್‌; ಆರ್‌ಸಿಬಿ ಔಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.